ಕಾಂಗ್ರೆಸ್ ಸರಕಾರ ಇನ್ನೆಷ್ಟು ದಿನ ಇರುತ್ತೋ ಗೊತ್ತಿಲ್ಲ: ಬಿ ವೈ ವಿಜಯೇಂದ್ರ

Date:

Advertisements

ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಇನ್ನೆಷ್ಟು ದಿನ ಜೀವ ಇರುತ್ತದೋ ಗೊತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿ ವೈ ವಿಜಯೇಂದ್ರ ಹೇಳಿದರು.

ಅರಮನೆ ಮೈದಾನದಲ್ಲಿ ಏರ್ಪಡಿಸಿದ ಬಿಜೆಪಿ ರಾಜ್ಯ ವಿಶೇಷ ಕಾರ್ಯಕಾರಿಣಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, “ಕಾಂಗ್ರೆಸ್ ಸರಕಾರದ ಪಾಪದ ಕೊಡ ತುಂಬುತ್ತಿದೆ. ಸರಕಾರಕ್ಕೆ ತಕ್ಕ ಪಾಠ ಕಲಿಸಬೇಕು” ಎಂದರು.

“ಸರಕಾರಕ್ಕೆ ಅಸ್ಥಿರತೆ ಕಾಡುತ್ತಿದೆ. ಕಾಂಗ್ರೆಸ್ ಒಳಜಗಳ ಮಿತಿ ಮೀರಿದೆ. ಹಾದಿ ಬೀದಿ ಹೊಡೆದಾಟ ಮುಂದುವರೆದಿದೆ. ಸಿಎಂ ಸ್ಥಾನಕ್ಕಾಗಿ ಕೂಗು, ಉಪ ಮುಖ್ಯಮಂತ್ರಿಗಾಗಿ ಕೂಗು, ಅಭಿವೃದ್ಧಿಗಾಗಿ ಹಣ ಕೇಳಿ ಕೂಗು ಕೇಳಿಸುತ್ತಿದೆ” ಎಂದು ತಿಳಿಸಿದರು.

Advertisements

“ಇಂಡಿಯಾ ಒಕ್ಕೂಟ ಪೊಳ್ಳು ಭರವಸೆ ಮೂಲಕ ಅಧಿಕಾರ ಪಡೆಯಲು ಯತ್ನಿಸಿತ್ತು. ಆದರೆ, ಪ್ರಜ್ಞಾವಂತ ಮತದಾರರು ಅವರ ಷಡ್ಯಂತ್ರವನ್ನು ಬೆಂಬಲಿಸಲಿಲ್ಲ. ನಡ್ಡಾಜೀ, ಅಮಿತ್ ಶಾ ಅವರ ನೇತೃತ್ವದಲ್ಲಿ ಬಿಜೆಪಿ ಐತಿಹಾಸಿಕ ಜಯಭೇರಿ ಸಾಧಿಸಿದೆ” ಎಂದರು.

“ಅಧಿಕಾರ ದರ್ಪ, ಅಧಿಕಾರ ದುರುಪಯೋಗದಿಂದ 18ರಿಂದ 20 ಸ್ಥಾನ ಗೆಲ್ಲುವ ಭ್ರಮೆಯಲ್ಲಿದ್ದ ಕಾಂಗ್ರೆಸ್ ಸರಕಾರಕ್ಕೆ ನಮ್ಮ ಕಾರ್ಯಕರ್ತರು ಪಾಠ ಕಲಿಸಿದ್ದಾರೆ. ಅವರ ಪರಿಶ್ರಮದಿಂದ, ದಬ್ಬಾಳಿಕೆ ನಡುವೆ ಎನ್‍ಡಿಎ 19 ಸಂಸದರನ್ನು ಗೆದ್ದಿದೆ. ಅದರ ಶ್ರೇಯಸ್ಸು ಕಾರ್ಯಕರ್ತರಿಗೆ ಸಲ್ಲುತ್ತದೆ” ಎಂದು ಹೇಳಿದರು.

“ಗ್ಯಾರಂಟಿಗಳ ಮೂಲಕ ಒಳಿತು ಮಾಡುವುದಾಗಿ ಹೇಳಿದ ಕಾಂಗ್ರೆಸ್, ಭ್ರಷ್ಟಾಚಾರರಹಿತ ಆಡಳಿತದ ಭರವಸೆ ಕೊಟ್ಟಿತ್ತು. ಇವರ ಆಡಳಿತವೈಖರಿ, ಹಿಂದೆಂದೂ ಕಾಣದ ಭ್ರಷ್ಟಾಚಾರದ ಹಗರಣ ಹೊರಬರುತ್ತಿದೆ. ಇವರ ಮುಖವಾಡ ಕಳಚಿಬಿದ್ದಿದೆ” ಎಂದು ಹರಿಹಾಯ್ದರು.

“ನಾಯಿ ಬಾಲ ಡೊಂಕು ಎಂಬ ಪರಿಸ್ಥಿತಿ ಕಾಂಗ್ರೆಸ್ಸಿನದು. ವಾಲ್ಮೀಕಿ ನಿಗಮದಲ್ಲಿ ದಲಿತ ಸಮುದಾಯದ ಅನುಕೂಲಕ್ಕಾಗಿ ಕೊಟ್ಟ ಹಣವನ್ನು ಭ್ರಷ್ಟಾಚಾರಕ್ಕೆ ಬಳಸಿದ್ದಾರೆ. ಮೈಸೂರಿನ ಮೂಡಾ ಹಗರಣದಲ್ಲಿ ಸಿಎಂ ಕುಟುಂಬದವರ ಹೆಸರು ಕೇಳಿಬರುತ್ತಿದೆ. ಇದು ಸುಮಾರು 3ರಿಂದ 4 ಸಾವಿರ ಕೋಟಿ ಮೊತ್ತದ್ದು. ಕಾನೂನು- ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಜನವಿರೋಧಿ ಸರಕಾರ ಆಡಳಿತ ನಡೆಸುತ್ತಿದೆ” ಎಂದು ವಿಜಯೇಂದ್ರ ಅವರು ಟೀಕಿಸಿದರು.

“ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಹಿಂದೂಗಳ ತೇಜೋವಧೆ, ಅವಮಾನ ಮಾಡಿದ್ದಾರೆ. ಜಮೀರ್ ಅಹ್ಮದ್ ಎಂಬ ಬೇಜವಾಬ್ದಾರಿ ಸಚಿವರಿದ್ದು, ಅವರ ಮಾತಿನಲ್ಲೂ ಅಹಂಕಾರದ ಹೇಳಿಕೆ ಇದೆ” ಎಂದರು.

ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಯಡಿಯೂರಪ್ಪ ಮಾತನಾಡಿ, “ರಾಜ್ಯದಲ್ಲೂ ಬಿಜೆಪಿ- ಜೆಡಿಎಸ್ ಕೂಟ 19 ಸ್ಥಾನಗಳನ್ನು ಗೆದ್ದಿದೆ ಎಂದು ಸಂತಸ ವ್ಯಕ್ತಪಡಿಸಿದರು. 142 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಬಹುಮತ ಪಡೆದಿದೆ. ಈಗ ಚುನಾವಣೆ ನಡೆದರೆ ಬಿಜೆಪಿ ಸರಕಾರ ಮತ್ತೆ ಅಧಿಕಾರಕ್ಕೆ ಏರುವುದು ಖಚಿತ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯ ಚುನಾವಣಾ ಉಸ್ತುವಾರಿ ರಾಧಾಮೋಹನ್‍ದಾಸ್ ಅಗರ್‍ವಾಲ್ ಮಾತನಾಡಿ, “2023ರಲ್ಲಿ ಆದ ಅಪಮಾನಕ್ಕೆ ಬದಲಿಯಾಗಿ ಈ ಗೆಲುವನ್ನು ನೀಡಿದ್ದೀರಿ” ಎಂದು ಅಭಿನಂದಿಸಿದರು.

ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ವಿ.ಸೋಮಣ್ಣ, ಮಾಜಿ ಸಂಸದ ನಳಿನ್‍ಕುಮಾರ್ ಕಟೀಲ್, ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ.ಸದಾನಂದಗೌಡ, ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ, ಮಾಜಿ ಡಿಸಿಎಂ ಮತ್ತು ಸಂಸದ ಗೋವಿಂದ ಕಾರಜೋಳ, ಮಾಜಿ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಒಂದೇ ವರ್ಷದಲ್ಲಿ ಅಧಿಕಾರ ಕಳಕೊಂಡು ನೀರಿನಿಂದ ತಗೆದ ಮೀನಿನಂತೆ ಆಗಿದ್ದಾರೆ,, ಆಧಿಕಾರ ಇದ್ದಾಗ ರಾಜ್ಯವನ್ನು ಲೂಟಿ ಹೊಡೆದು,,,ಈಗ ತಮ್ಮ ಆಂತರಿಕ ಕಚ್ಚಾಟವನ್ನು ಜನರಿಂದ ಮರೆಮಾಚಲು ರಾಜ್ಯ ಸರ್ಕಾರದ ಬಗ್ಗೆ ಅಪಪ್ರಚಾರ ಮಾಡುತ್ತಿದೆ ,, ನಿಮ್ಮ ಹಿನ್ನೆಲೆಗಳನ್ನು ಒಮ್ಮೆ ತಿರುಗಿಸಿ ನೋಡಿಕೊಳ್ಳಿ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X