ರಮೇಶ್ ಜಾರಕಿಹೊಳಿ ವಿರು‌ದ್ಧ ಮೊದಲ ಬಾರಿಗೆ ಗುಡುಗಿದ ಬಿ ವೈ ವಿಜಯೇಂದ್ರ

Date:

ತಮ್ಮ ನಾಯಕತ್ವದ ಬಗ್ಗೆ ಪದೇ ಪದೇ ತಕರಾರು ತೆಗೆದು ಹೇಳಿಕೆ ನೀಡುತ್ತಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರು‌ದ್ಧ ಇದೆ ಮೊದಲ ಬಾರಿಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಗುಡುಗಿದ್ದಾರೆ.

- Advertisement -

ಕೊಪ್ಪಳದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಮೇಶ್ ಜಾರಕಿಹೊಳಿ ಅವರು ಇತ್ತೀಚೆಗೆ ತಾನೇ ಪಕ್ಷಕ್ಕೆ ಬಂದವರು. ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜ್ಯದ ಹಳ್ಳಿಹಳ್ಳಿ ಸುತ್ತಿ ಪಕ್ಷವನ್ನು ಸಂಘಟಿಸಿದ್ದಾರೆ. ಅವರ ಬಗ್ಗೆ ಅತ್ಯಂತ ಜಾಗರೂಕತೆಯಿಂದ ಮಾತನಾಡಬೇಕು” ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ರಮೇಶ ಜಾರಕಿಹೊಳಿ ಅವರಿಗೆ ತಮ್ಮನ್ನು ಪಕ್ಷದ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವ ಬಗ್ಗೆ ಯಾವುದಾದರೂ ತಕರಾರು ಇದ್ದರೆ ಅದನ್ನು ಹೈಕಮಾಂಡ್ ಜೊತೆ ಚರ್ಚೆ ಮಾಡಿ ಬಗೆಹರಿಸಿಕೊಳ್ಳಬೇಕು. ಅದನ್ನು ಬಿಟ್ಟು ಇಲ್ಲಸಲ್ಲದ ಹೇಳಿಕೆ ನೀಡುವ ಮೂಲಕ ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸುವುದು ಬೇಡ” ಎಂದು ಹೇಳಿದರು.

“ತಾವು ಪಕ್ಷದ ಅಧ್ಯಕ್ಷರಾದ ನಂತರ ಯಾವುದೇ ರೀತಿಯ ಸಮಸ್ಯೆ ಉಂಟಾಗಿಲ್ಲ. ನಿಜವಾದ ಸಮಸ್ಯೆ ಉಂಟಾಗಿರುವುದು ಜಾರಕಿಹೊಳಿ ಅವರ ಕ್ಷೇತ್ರದಲ್ಲಿ ಯಾರ ವೈಫಲ್ಯ ಎಂಬುದನ್ನು ಅವರ ಕ್ಷೇತ್ರದ ಜನತೆಗೆ ಹೇಳುತ್ತಿದ್ದಾರೆ. ಹೀಗಾಗಿ ಅವರು ಆ ಬಗ್ಗೆ ಗಮನಹರಿಸಿ ಅದನ್ನು ಸರಿಪಡಿಸಿಕೊಳ್ಳಬೇಕು” ಎಂದು ಸಲಹೆ ನೀಡಿದರು.

“ಜಾರಕಿಹೊಳಿ ಅವರು ಬಾಯಿಗೆ ಬಂದಂತೆ ಮಾತನಾಡುವುದನ್ನು ಮೊದಲು ಬಿಡಬೇಕು. ಇದರಿಂದ ಅನಗತ್ಯವಾಗಿ ಕಾರ್ಯಕರ್ತರು ಗೊಂದಲಕ್ಕೆ ಬೀಳುತ್ತಿದ್ದಾರೆ. ತಾವು ಕಾರ್ಯಕರ್ತರಲ್ಲಿ ಮನವಿ ಮಾಡುತ್ತಿದ್ದು ಯಾವುದೇ ಕಾರಣಕ್ಕೂ ಇಂತಹ ಮಾತುಗಳಿಗೆ ಬೆಲೆ ಕೊಡಬೇಡಿ. ಹೈಕಮಾಂಡ್ ಎಲ್ಲವನ್ನು ಗಮನಿಸುತ್ತಿದ್ದು ಸದ್ಯದಲ್ಲಿಯೇ ಎಲ್ಲವೂ ಬಗೆಹರಿಯಲಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...