ಬಾಬು ಜಗಜೀವನ್ ರಾಂ ಅವರ ಸಮಾಜಮುಖಿ ಕೆಲಸಗಳು ಚಿರಸ್ಥಾಯಿಯಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವಿಧಾನಸೌಧದ ಪಶ್ಚಿಮದ್ವಾರ ಬಳಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಗುರುವಾರ ಆಯೋಜಿಸಿರುವ ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರನಾಯಕ ಹಾಗೂ ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ್‍ರಾಂ ಅವರ 37ನೇ ಪುಣ್ಯತಿಥಿಯ ಅಂಗವಾಗಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾತನಾಡಿದರು.
ಬಾಬು ಜಗಜೀವನ್ ರಾಂ ಅವರು ಸ್ವಾತಂತ್ರ್ಯ ಭಾರತದಲ್ಲಿ ನೆಹರು ಅವರ ಸಂಪುಟದಲ್ಲಿ ಮಂತ್ರಿಯಾಗಿದ್ದವರು. ದೇಶದ ಉಪಪ್ರಧಾನಿಯಾಗಿದ್ದರು. ದಕ್ಷ ಆಡಳಿತಗಾರರು. ಹಸಿರು ಕ್ರಾಂತಿಯ ಮೂಲಕ ದೇಶದಲ್ಲಿ ಆಹಾರ ಸ್ವಾವಲಂಬನೆಯಾಗಲು ಕಾರಣಕರ್ತರು ಎಂದರು.
ಬಾಬು ಜಗಜೀವನ್ ರಾಂ ಅವರು ಯಾವುದೇ ಇಲಾಖೆಯಲ್ಲಿದ್ದರೂ ತಳಸಮುದಾಯದ ಜನರಿಗೆ ಸಂವಿಧಾನಬದ್ಧ ನ್ಯಾಯ ದೊರಕಿಸಲು ಹೋರಾಡಿದರು. ಅವರ ಬದುಕು ನಮಗೆ ಪ್ರೇರಣೆಯಾಗಬೇಕು ಎಂದು ಹೇಳಿದರು.
ಅಂತ ಮಹಾನುಭಾವರ ಪುಣ್ಯಸ್ಮರಣೆ ಮಾಡಿದ್ದು, ಅವರು ನಮಗೆಲ್ಲರಿಗೂ ಮಾರ್ಗದರ್ಶಕರು. ಅವರ ಮಾರ್ಗದಲ್ಲಿ ನಡೆಯುವ ಪ್ರಯತ್ನವೇ ನಾವು ಅವರಿಗೆ ಸಲ್ಲಿಸುವ ಗೌರವ ಎಂದರು.
ಈ ಸುದ್ದಿ ಓದಿದ್ದೀರಾ? ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ ಆರೋಪ: ದರಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ