ಬ್ಯಾಕ್ ಲಾಗ್ ಹುದ್ದೆ | ಶೀಘ್ರ ಭರ್ತಿ ಮಾಡದಿದ್ದರೆ ಕಠಿಣ ಕ್ರಮ: ಸಚಿವ ಮಹದೇವಪ್ಪ ಎಚ್ಚರಿಕೆ

Date:

ನ್ಯಾಯಾಲಯದ ಆದೇಶದಂತೆ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಬಾಕಿ ಉಳಿದಿರುವ ಬ್ಯಾಕ್ ಲಾಗ್ ಹುದ್ದೆಗಳನ್ನು ನಿಯಮಾನುಸಾರ ಭರ್ತಿ ಮಾಡುವಂತೆ ಸಮಾಜ ಕಲ್ಯಾಣ ಸಚಿವ ಡಾ.ಹೆಚ್ ಸಿ ಮಹದೇವಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

- Advertisement -

ವಿಧಾನಸೌಧದಲ್ಲಿ ಸೋಮವಾರ ನಡೆದ ಸಚಿವ ಸಂಪುಟ ಉಪ ಸಮಿತಿ ಸಭೆ ಕುರಿತು ಮಾಹಿತಿ ಹಂಚಿಕೊಂಡಿರುವ ಅವರು, “ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳು, ನಿಗಮಗಳು, ಮಂಡಳಿಗಳು, ಸಹಕಾರ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯದಲ್ಲಿ ಬಾಕಿ ಇರುವ ಹುದ್ದೆಗಳನ್ನು ಭರ್ತಿ ಮಾಡಿರುವ ಬಗ್ಗೆ ಆಯುಕ್ತರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಪ್ರಗತಿ ಪರಿಶೀಲಿಸುವಂತೆ ನಿರ್ದೇಶನ ನೀಡಿರುವುದಾಗಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಸಂವಿಧಾನಾತ್ಮಕ ಹುದ್ದೆಗಳನ್ನು ಭರ್ತಿ ಮಾಡಬೇಕಾದ್ದು ಸರ್ಕಾರದ ಜವಾಬ್ದಾರಿಯಾಗಿದೆ. ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡುವಲ್ಲಿ ವಿಳಂಬ ಮಾಡುತ್ತಿರುವ ಹಾಗೂ ಈ ಬಗ್ಗೆ ನಿರ್ಲಕ್ಷ್ಯ ತೋರುತ್ತಿರುವ ಇಲಾಖೆಗಳ ಅಧಿಕಾರಿಗಳನ್ನು ನೇರವಾಗಿ ಹೊಣೆಗಾರರನ್ನಾಗಿ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

“ಎಲ್ಲ ಇಲಾಖೆಗಳಿಗೆ ಪ್ರಥಮ ಆದ್ಯತೆಯ ಮೇರೆಗೆ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಿರುವ ಬಗ್ಗೆ ಇಲಾಖೆಯ ಮೂಲಕ ಪತ್ರ ಬರೆಯಲಾಗಿದೆ. ಈ ಹಿನ್ನಲೆಯಲ್ಲಿ ಸರ್ಕಾರದ ಸೂಚನೆ ಮತ್ತು ನ್ಯಾಯಾಲಯದ ಆದೇಶದ ಹೊರತಾಗಿ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.

ಮೈಸೂರು ವಿವಿ: 76 ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಕ್ರಮ

ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಬಾಕಿ ಇರುವ 76 ಬ್ಯಾಕ್ ಲಾಗ್ ಹುದ್ದೆಗಳ ಭರ್ತಿ ಮಾಡಲು ಕ್ರಮ ಕೈಗೊಳ್ಳುವಂತೆ ಚರ್ಚಿಸಿರುವ ಅವರು, 2015 ರಿಂದ ಬ್ಯಾಕ್ ಲಾಗ್ ನೇಮಕಾತಿಗೆ ವಿನಾಯಿತಿ ನೀಡಲು ಸರ್ಕಾರದ ಹಲವು ನಿಗಮ ಮಂಡಳಿಗಳು ವಿನಂತಿಸಿದ್ದು, ಈ ಸಂಗತಿಯನ್ನು ಕ್ಯಾಬಿನೆಟ್ ಮುಂದೆ ಮಂಡಿಸಿ ಚರ್ಚಿಸಿ ಎಲ್ಲರೂ ಹುದ್ದೆಗಳನ್ನು ಭರ್ತಿ ಮಾಡುವುದಕ್ಕೆ ಪೂರಕವಾಗಿ ನಿರ್ಧಾರವನ್ನು ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ.

ಇದೇ ವೇಳೆ ಬ್ಯಾಕ್ ಲಾಗ್ ಹುದ್ದೆಗಳ ವಯೋಮಿತಿಯನ್ನು ಹೆಚ್ಚಳ ಮಾಡುವ ಕುರಿತು ಅಧಿಕಾರಿಗಳಿಂದ ಸಲಹೆಯನ್ನು ಸ್ವೀಕರಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...