ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ; ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ

Date:

  • ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ
  • ಜಲಜೀವನ್ ಮಿಷನ್ ಅಧಿಕಾರಿಗಳ ಜತೆ ಸಿಎಂ ಸಭೆ

ರಾಜ್ಯದ ಹಲವು ಜಿಲ್ಲೆಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಪರಿಹಾರದ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜಲಜೀವನ್ ಮಿಷನ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

- Advertisement -

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿಗಳು 8 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಸಮಸ್ಯೆಯ ಬಗ್ಗೆ ಮಾಹಿತಿ ಕಲೆ ಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಮಳೆಗಾಲ ಆರಂಭದಲ್ಲೂ ಜಿಲ್ಲೆಗಳಲ್ಲಿ ನೀರಿನ ಸಮಸ್ಯೆ ಎದುರಾಗಲು ಇರುವ ಕಾರಣಗಳನ್ನು ತಿಳಿದುಕೊಂಡ ಸಿಎಂ ಅಗತ್ಯ ಕ್ರಮ ಜರುಗಿಸುವಂತೆ ಡಿಸಿಗಳಿಗೆ ಸೂಚಿಸಿದರು. ಯಾವುದೇ ಕಾರಣಕ್ಕೂ ಶುದ್ಧ ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ಅಗತ್ಯ ಕ್ರಮ ವಹಿಸಲು ಸೂಚನೆಗಳನ್ನು ನೀಡಿದರು.

ಈ ಸಭೆಯಲ್ಲಿ ಕಂದಾಯ ಇಲಾಖೆ, ಗ್ರಾಮೀಣಾಭಿವೃದ್ದಿ ಹಾಗೂ ನಗರಾಭಿವೃದಿ ಸಚಿವರು ಉಪಸ್ಥಿತರಿದ್ದರು. ಇದಾದ ಬಳಿಕ ರಾಜ್ಯದಲ್ಲಿ ಪುನಶ್ವೇತನಕ್ಕಾಗಿ ಕಾದು ನಿಂತಿರುವ ಇಂದಿರಾ ಕ್ಯಾಂಟೀನ್‌ಗಳ ಪುನಾರಂಭದ ಬಗ್ಗೆ ಸಿಎಂ ಅಧಿಕಾರಿಗಳೊಂದಿಗೆ ಮತ್ತೊಂದು ಸಭೆ ನಡೆಸಲಿದ್ದಾರೆ.

ಸಿದ್ದರಾಮಯ್ಯ ಮೀಟಿಂಗ್

ಈ ಸುದ್ದಿ ಓದಿದ್ದೀರಾ?:ಬಿಜೆಪಿ ಸರ್ಕಾರದ ಶಿಫಾರಸ್ಸಿನಂತೆ ವಿದ್ಯುತ್ ದರ ಹೆಚ್ಚಳವಾಗಿದೆ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಮಧ್ಯಾಹ್ನ ಒಂದು ಗಂಟೆಗೆ ನಡೆಯಲಿರುವ ಸಭೆಯಲ್ಲಿ ಇಂದಿರಾ ಕ್ಯಾಂಟೀನ್‌ಗಳ ಪುನಾರಂಭ ಹಾಗೂ ಖರ್ಚುವೆಚ್ಚದ ಬಗ್ಗೆ ಮಾಹಿತಿ ಪಡೆದುಕೊಳ್ಳಲಿದ್ದಾರೆ. ಉಳಿದಂತೆ ಸಿದ್ದರಾಮಯ್ಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.

ಇನ್ನು ಈ ಸಭೆಗೂ ಮುನ್ನ ಎರಡನೇ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಟಿ.ಎಂ. ವಿಜಯಭಾಸ್ಕರ್, ಇಂದು ಆಯೋಗದ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು. ಈ ವೇಳೆ ಆಯೋಗದ ಸದಸ್ಯ ಕಾರ್ಯದರ್ಶಿ ಪ್ರಸನ್ನಕುಮಾರ್ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾರ್ವಜನಿಕ ಸಭ್ಯತೆ ಮತ್ತು ಹೆಣ್ಣುಮಕ್ಕಳು ಮಾಡಿಕೊಳ್ಳುವ ಲೆಕ್ಕಾಚಾರಗಳು

ಫೀಲ್ಡ್‌ಗೆ ಇಳಿದು ಕೆಲಸ ಮಾಡುವಾಗ ಮಹಿಳಾ ಪತ್ರಕರ್ತೆಯರು ಎದುರಿಸುವ ರಿಸ್ಕ್ ಮತ್ತು...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...

ಗ್ರಾಮ ಪಂಚಾಯಿತಿಗಳ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಕ್ರಮ: ಸಿಎಂ ಡಿ ಕೆ ಶಿವಕುಮಾರ್

"ಗ್ರಾಮ ಪಂಚಾಯಿತಿಗಳ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ಮೂಲಕ ವಿಕೇಂದ್ರೀಕರಣ ವ್ಯವಸ್ಥೆಯನ್ನು ಇನ್ನಷ್ಟು...