ಬಾಗಲಕೋಟೆ ಉಪಚುನಾವಣೆ: ಮೇಟಿ-ಚರಂತಿಮಠಗೆ ರಾಜಕೀಯ ಏಳು-ಬೀಳಿನ ಪ್ರತಿಷ್ಠೆ

Date:

‌ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕನ ಸಾವಿನಿಂದ ತೆರವಾದ ಬಾಗಲಕೋಟೆ ಕ್ಷೇತ್ರ ಉಳಿಸಿಕೊಳ್ಳಬೇಕಾದ ಸವಾಲು ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಮುಂದಿದೆ. ಹಾಗೆಯೇ ಬಿಜೆಪಿ ತಮ್ಮ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿ ರಾಜ್ಯದಲ್ಲಿ ಸರ್ಕಾರದ ವಿರುದ್ಧ ಆಡಳಿತ ವಿರೋಧಿ ಅಲೆ ಇದೆ. ಕೇಂದ್ರದಲ್ಲಿ ಅಧಿಕಾರದಲ್ಲಿರುವ ಮೋದಿ ಸರ್ಕಾರದ ಪರ ಜನರ ಒಲವಿದೆ ಎಂಬ ಸಂದೇಶವನ್ನು ಜನರಿಗೆ ತಲುಪಿಸಬೇಕಾದ ಸವಾಲು ಬಿಜೆಪಿ ಮುಂದೆ ಇದೆ.

ಬಾಗಲಕೋಟೆ ಕ್ಷೇತ್ರದಲ್ಲಿ ಈಗ ನಡೆಯುತ್ತಿರುವ ಉಪಚುನಾವಣೆ ಮೇಲ್ನೋಟಕ್ಕೆ ಕಾಂಗ್ರೆಸ್-ಬಿಜೆಪಿಗೆ ಪ್ರತಿಷ್ಠೆಯ ಚುನಾವಣೆಯಾಗಿದ್ದರೂ ಉಮೇಶ ಮೇಟಿ ಹಾಗೂ ವೀರಣ್ಣ ಚರಂತಿಮಠ ಅವರ ರಾಜಕೀಯ ಭವಿಷ್ಯ ನಿರ್ಧರಿಸುವ ಮಹತ್ವದ ಚುನಾವಣೆಯಾಗಿದೆ. ಅವರಿಬ್ಬರ ಮುಂದಿನ ರಾಜಕೀಯದ ಏಳು-ಬೀಳು ಈ ಚುನಾವಣೆಯ ಫಲಿತಾಂಶದ ಮೇಲೆ ನಿರ್ಧಾರವಾಗಲಿದೆ.

- Advertisement -

ಕ್ಷೇತ್ರದಲ್ಲಿ ಈ ಹಿಂದೆ ನಡೆದ ಎರಡು ಉಪಚುನಾವಣೆಗಳೂ(1962, 1997) ಕೂಡ ಅಂದಿನ ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಬರೆದ ಉದಾಹರಣೆ ಇದೆ. 1962ರ ಉಪಚುನಾವಣೆಯಲ್ಲಿ ಎಸ್ ನಿಜಲಿಂಗಪ್ಪ ಇಲ್ಲಿದ್ದು ಗೆದ್ದು ಮುಖ್ಯಮಂತ್ರಿ ಸ್ಥಾನ ಅಲಂಕರಿಸಿದರು. ಅಲ್ಲದೆ ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಎಐಸಿಸಿ ಅಧ್ಯಕ್ಷರಾದರು. ಅಂದು ಬಾಗಲಕೋಟೆ ಕ್ಷೇತ್ರದಲ್ಲಿ ಸೋತಿದ್ದರೆ ಅವರ ರಾಜಕೀಯ ಸ್ಥಾನಮಾನಕ್ಕೆ ಚ್ಯುತಿ ಬರುತ್ತಿತ್ತು ಎಂಬುದು ಆಗಿನ ರಾಜಕೀಯ ವಿದ್ಯಮಾನಗಳಿಂದ ಗೊತ್ತಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಚುನಾವಣೆ ನಡೆಯದೆ ನಿಜಲಿಂಗಪ್ಪ ಅವಿರೋಧವಾಗಿ ಆಯ್ಕೆಯಾದರೂ ಅವರ ವಿರುದ್ಧ ಸಲ್ಲಿಸಿದ ನಾಮಪತ್ರ ತಿರಸ್ಕ್ರತಗೊಂಡ ಅಭ್ಯರ್ಥಿಗಳು ಈ ಕ್ಷೇತ್ರದಲ್ಲಿ ಮುಂದೆ ಹೇಳಲು ಹೆಸರಿಲ್ಲದಂತಾದರು. 1997ರಲ್ಲಿ ಈ ಕ್ಷೇತ್ರದಲ್ಲಿ ನಡೆದ ಮತ್ತೊಂದು ಉಪಚುನಾವಣೆಯಲ್ಲಿ ಗೆದ್ದುಬಂದ ಪಿ ಎಚ್ ಪೂಜಾರ ಪ್ರಥಮ ಬಾರಿಗೆ ಶಾಸಕರಾಗಿ ರಾಜಕೀಯದಲ್ಲಿ ತಮ್ಮ ಅಸ್ತಿತ್ವ ಉಳಿಸಿಕೊಂಡರು. ಮತ್ತೊಮ್ಮೆ ಶಾಸಕರಾಗಿ ಈಗ ಎಂಎಲ್‌ಸಿ ಆಗಿದ್ದಾರೆ. ಅಂದು ಪೂಜಾರ ಸೋತಿದ್ದರೆ ಬಿಜೆಪಿಯಲ್ಲಿ ಮತ್ತು ರಾಜಕೀಯದಲ್ಲಿ ನಗಣ್ಯರಾಗುತ್ಣಿದ್ದರು. ಅಂದು ಪೂಜಾರ ವಿರುದ್ಧ ಸ್ಪರ್ಧಿಸಿ ಸೋತ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಅಭ್ಯರ್ಥಿಗಳು ರಾಜಕೀಯದಲ್ಲಿ ಮುಂದೆ ಲೆಕ್ಕಕ್ಕೇ ಇಲ್ಲದಂತಾದರು.

ಈಗ ಏಪ್ರಿಲ್ 9ರಂದು ನಡೆಯುವ ಉಪಚುನಾವಣೆ ಕೂಡ ಕಾಂಗ್ರೆಸ್-ಬಿಜೆಪಿ ಅಭ್ಯರ್ಥಿಗಳ ರಾಜಕೀಯ ಹಣೆಬರಹ ಬರೆಯಲಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಉಮೇಶ್ ಮೇಟಿ ಗೆದ್ದರೆ ರಾಜಕೀಯದಲ್ಲಿ ಭವಿಷ್ಯ ಗಟ್ಟಿಯಾಗಲಿದೆ. ಸೋತರೆ ಮುಂದಿನ ದಿನಗಳಲ್ಲಿ ರಾಜಕೀಯ ಪಯಣ ಕಲ್ಲು ಮುಳ್ಳಿನ ಹಾದಿಯಲ್ಲಿ ಸಾಗಬೇಕಾಗುತ್ತದೆ. ಈ ಚುನಾವಣೆಯಲ್ಲಿ ತಂದೆಯ ನಾಮಬಲ ಮತ್ತು ತಂದೆಯ ನಿಧನದ ಅನುಕಂಪದ ಜತೆಗೆ ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರದ ಜನಪರ ಕಾರ್ಯಕ್ರಮಗಳ ಬೆಂಬಲ, ಸಂಪನ್ಮೂಲದ ನೆರವು ಅವರೊಂದಿಗಿದೆ. ರಾಜಕೀಯ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಇವು ಪೂರಕವಾದ ಅಂಶಗಳು. ಈ ಪ್ಲಸ್ ಪಾಯಿಂಟ್‌ಗಳನ್ನು ಬೆನ್ನಿಗಿಟ್ಟುಕೊಂಡು ಗೆಲುವಿನ ದಡ ತಲುಪದಿದ್ದರೆ 2028ರ ಸಾರ್ವತ್ರಿಕ ಚುನಾವಣೆಯಲ್ಲಿ ಮೇಟಿ ಅವರ ಕುಟುಂಬ ರಾಜಕೀಯವಾಗಿ ನೇಪಥ್ಯಕ್ಕೆ ಸರಿಯುವ ಪರಿಸ್ಥಿತಿ ಬಂದರೆ ಆಶ್ಚರ್ಯ ಪಡುವಂತಿಲ್ಲ.

ಹಿರಿಯ ಶಾಸಕರು, ಮಾಜಿ ಸಚಿವರು, ಮಾಜಿ ಸಂಸದರಾಗಿದ್ದ ಎಚ್ ವೈ ಮೇಟಿ ಅವರ‌ ಮಗ ಎಂದು ಪಕ್ಷದ ಟಿಕೆಟ್ ಕೊಟ್ಟು ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಸಿಎಂ, ಡಿಸಿಎಂ, ಸಚಿವರು, ಶಾಸಕರು ಇಲ್ಲೇ ಕ್ಯಾಂಪ್ ಹಾಕಿ ಎಷ್ಟೆಲ್ಲ ಪ್ರಚಾರ ಮಾಡಿದರೂ ಗೆದ್ದಿಲ್ಲ. ಸೋತವರಿಗೆ ಈಗ್ಯಾಕೆ ಮಣೆ ಹಾಕುವುದು? ಎಂಬ ಪ್ರಶ್ನೆ 2028ರಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ಹಂಚಿಕೆ ಸಮಯದಲ್ಲಿ ಉದ್ಭವವಾಗಬಹುದು.ತಮ್ಮ ತಂದೆಯಂತೆ ರಾಜಕೀಯದಲ್ಲಿ ಮುಂಚೂಣಿಯಲ್ಲಿರಬೇಕಾದರೆ ಈ ಚುನಾವಣೆಯಲ್ಲಿ ಹೇಗಾದರೂ ಮಾಡಿ ಗೆಲ್ಲಬೇಕಾದ ಅನಿವಾರ್ಯತೆ ಉಮೇಶ್ ಮೇಟಿ ಮತ್ತು ಅವರ ಕುಟುಂಬದ ಮುಂದೆ ಇದೆ.

ಬಿಜೆಪಿ ಅಭ್ಯರ್ಥಿಯಾಗಿರುವ ವೀರಣ್ಣ ಚರಂತಿಮಠ ಅವರ ರಾಜಕೀಯ ಭವಿಷ್ಯವೂ ಈ ಚುನಾವಣೆಯ ಗೆಲುವು ಸೋಲಿನ ಮೇಲೆ ನಿರ್ಧಾರವಾಗಲಿದೆ. ಈ ಸಲ ಗೆಲ್ಲದಿದ್ದರೆ ಅವರ ರಾಜಕೀಯ ಭವಿಷ್ಯ ಮಸುಕಾಗುವ ಸಾಧ್ಯತೆಗಳನ್ನು ತಳ್ಳಿಹಾಕುವಂತಿಲ್ಲ. ಮೂರು ವರ್ಷಗಳ ಹಿಂದೆ ನಡೆದ ಚುನಾವಣೆಯಲ್ಲಿ ಅವರು ಕಾಂಗ್ರೆಸ್ ಪಕ್ಷದ ಮೇಟಿ ಅವರ ಎದುರು ಸೋತಿದ್ದಾರೆ. ಈಗ ಆಕಸ್ಮಿಕವಾಗಿ ಬಂದ ಉಪಚುನಾವಣೆಯಲ್ಲಿ 2023ರಲ್ಲಿ ಸೋತ ಅಭ್ಯರ್ಥಿ ಎಂಬ ಕಾರಣಕ್ಕೆ ಬಿಜೆಪಿ ಟಿಕೆಟ್ ಪುನಃ ಅವರಿಗೆ ಸಿಕ್ಕಿದೆ. ಹಾಗಾಗಿ ಈ ಚುನಾವಣೆಯಲ್ಲಿ ಗೆಲ್ಲುವುದು ಅವರಿಗೆ ಅತಿ ಮುಖ್ಯವಾಗಿದೆ. ಈ ಸಲ ಸೋತರೆ ಸತತ ಎರಡು ಸಲ ಸೋತಿದ್ದಾರೆ ಎಂಬುದು 2028ರ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಟಿಕೆಟ್ ಕೇಳಲಿಕ್ಕೆ ಅವರಿಗೆ ತೊಡ‌ಕಾಗಬಹುದು.

ಉಪಚುನಾವಣೆಯಲ್ಲಿ ರಾಜ್ಯದ ಬಿಜೆಪಿ ನಾಯಕರು, ಕೇಂದ್ರ ಸಚಿವರು ಬಂದು ಇಲ್ಲೇ ಠಿಕಾಣಿ ಹೂಡಿ ಪ್ರಚಾರ ಮಾಡಿದರೂ, ಪ್ರಧಾನಿ ಮೋದಿ ಅವರ ನಾಮಬಲ ಇದ್ದರೂ ಮೇಟಿ ಅವರ ಮಗನ ಎದುರು ಸೋತರು ಎಂಬ ಟೀಕೆ ಬಿಜೆಪಿಯಲ್ಲಿ ಅವರ ನಾಯಕತ್ವಕ್ಕೆ ಚ್ಯುತಿ ಉಂಟು ಮಾಡಬಹುದು. ಹಾಗಾಗಿ ಈ ಚುನಾವಣೆಯಲ್ಲಿ ಗೆದ್ದು ಕ್ಷೇತ್ರದಲ್ಲಿರುವ ತಮ್ಮ ಪ್ರಾಬಲ್ಯ ಸಾಬೀತುಪಡಿಸಿ ಬಿಜೆಪಿಯಲ್ಲಿ ರಾಜಕೀಯ ಭವಿಷ್ಯ ಭದ್ರಪಡಿಸಿಕೊಳ್ಳಬೇಕಾದ ಅನಿವಾರ್ಯ ಸ್ಥಿತಿ ಚರಂತಿಮಠ ಅವರಿಗೆ ಇದೆ. ಈ ಚುನಾವಣೆಯಲ್ಲಿ ಚರಂತಿಮಠ ಸೋತರೆ 2028ರಲ್ಲಿ ಅವರನ್ನು ಹಿಂದೆ ಸರಿಸಿ ಟಿಕೆಟ್‌ಗೆ ಸರದಿ ಸಾಲಿನಲ್ಲಿ ನಿಲ್ಲುವವರಿಗೆ ಬಿಜೆಪಿಯಲ್ಲಿ ಅನೇಕರಿದ್ದಾರೆ.

ಇದನ್ನೂ ಓದಿದ್ದೀರಾ? ಬಾಗಲಕೋಟೆ ನೆಲ ಐವರು ಮುಖ್ಯಮಂತ್ರಿಗಳ ಹಣೆಬರೆಹ ಬರೆದ ರಾಜಕೀಯ ಕ್ಷೇತ್ರ!

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿವೆ. ತಮ್ಮ ಆಡಳಿತಕ್ಕೆ ಜನಬೆಂಬಲ ಇದೆ ಎಂಬುದನ್ನು ಸಾಬೀತುಪಡಿಸಲು ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕನ ಸಾವಿನಿಂದ ತೆರವಾದ ಬಾಗಲಕೋಟೆ ಕ್ಷೇತ್ರ ಉಳಿಸಿಕೊಳ್ಳಬೇಕಾದ ಸವಾಲು ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಮುಂದಿದೆ. ಹಾಗೆಯೇ ಬಿಜೆಪಿ ತಮ್ಮ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿ ರಾಜ್ಯದಲ್ಲಿ ಸರ್ಕಾರದ ವಿರುದ್ಧ ಆಡಳಿತ ವಿರೋಧಿ ಅಲೆ ಇದೆ. ಕೇಂದ್ರದಲ್ಲಿ ಅಧಿಕಾರದಲ್ಲಿರುವ ಮೋದಿ ಸರ್ಕಾರದ ಪರ ಜನರ ಒಲವಿದೆ ಎಂಬ ಸಂದೇಶವನ್ನು ಜನರಿಗೆ ತಲುಪಿಸಬೇಕಾದ ಸವಾಲು ಬಿಜೆಪಿ ಮುಂದೆ ಇದೆ. ಎರಡೂ ಪಕ್ಷಗಳು ಈ ಸವಾಲನ್ನು ಯಾವ ರೀತಿ ಸ್ವೀಕರಿಸಬಹುದು. ಇಬ್ಬರೂ ಅಭ್ಯರ್ಥಿಗಳು ಈ ಚುನಾವಣೆ ಮೂಲಕ ತಮ್ಮ ರಾಜಕೀಯ ಭವಿಷ್ಯವನ್ನು ಯಾವ ರೀತಿ ರೂಪಿಸಿಕೊಳ್ಳಬಹುದು ಎಂಬುದು ಕುತೂಹಲ ಮೂಡಿಸಿದೆ.

IMG 20260325 WA0017
ಮುತ್ತು ನಾಯ್ಕರ
+ posts

ಹಿರಿಯ ಪತ್ರಕರ್ತರು, ಬಾಗಲಕೋಟೆ

ಪೋಸ್ಟ್ ಹಂಚಿಕೊಳ್ಳಿ:

ಮುತ್ತು ನಾಯ್ಕರ
ಮುತ್ತು ನಾಯ್ಕರ
ಹಿರಿಯ ಪತ್ರಕರ್ತರು, ಬಾಗಲಕೋಟೆ

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಸಾಗರ | ಗೂಡ್ಸ್ ಆಟೋ ಢಿಕ್ಕಿ; ಚಿಕಿತ್ಸೆ ಫಲಿಸದೆ ಬಾಲಕ ಸಾವು

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಗೂಡ್ಸ್ ಆಟೋ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ...