ಬಾಗಲಕೋಟೆ | ಟಿಪ್ಪು ಕುರಿತು ಪ್ರಚೋದನಾಕಾರಿ ಭಾಷಣ; ಯತ್ನಾಳ್ ವಿರುದ್ಧ ಎಫ್‌ಐಆರ್

Date:

ಮೈಸೂರು ಹುಲಿ ಎಂದೇ ಹೆಸರಾಗಿರುವ ಟಿಪ್ಪು ಸುಲ್ತಾನ್ ವಿರುದ್ಧ ಅಶ್ಲೀಲ ಪದಗಳಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ಗುರುವಾರ, ಮುಧೋಳದಲ್ಲಿ ನಡೆದ ಗಣೇಶ ವಿಸರ್ಜನಾ ಕಾರ್ಯಕ್ರಮದಲ್ಲಿ ಯತ್ನಾಳ್ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಯತ್ನಾಳ್, “ನೀವು ಇದನ್ನು ನಿಮ್ಮ ಮೊಬೈಲ್ ಫೋನ್‌ನಲ್ಲಿ ರೆಕಾರ್ಡ್ ಮಾಡಬಹುದು. ಟಿಪ್ಪು ಸುಲ್ತಾನ್ ಹರಂಖೋರ್ ಮತ್ತು ಬಿಟಾರ್ಡ್, ಔರಂಗಜೇಬ್ ಹರಂಖೋರ್ ಮತ್ತು ಬಿತಾರ್ಡ್. ಟಿಪ್ಪು ಸುಲ್ತಾನ್ ಲಕ್ಷಾಂತರ ಹಿಂದುಗಳನ್ನು ಕೊಂದ. ನನ್ನ ವಿರುದ್ಧ ನಿಮಗೆ ಬೇಕಾದಷ್ಟು ಎಫ್‌ಐಆರ್‌ಗಳನ್ನು ದಾಖಲಿಸಿ. ಈಗಾಗಲೇ ನನ್ನ ವಿರುದ್ಧ 36-37 ಎಫ್‌ಐಆರ್‌ಗಳು ದಾಖಲಾಗಿವೆ. ಮುಧೋಳದಲ್ಲಿ ಇನ್ನೂ ನಾಲ್ಕೈದು ಎಫ್‌ಐಆರ್‌ಗಳನ್ನು ದಾಖಲಿಸಹುದು” ಎಂದು ಪ್ರಚೋದನಾರಿ ಮತ್ತು ಕೋಮುದ್ವೇಷದ ಹೇಳಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಯತ್ನಾಳ್ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದು, ಐಪಿಸಿ ಸೆಕ್ಷನ್ 264/24, 16(1)a, 353(2)BNS ಅಡಿ ಎಫ್​ಐಆರ್ ದಾಖಲಿಸಿದ್ದಾರೆ.

“ಗಣೇಶ ವಿಸರ್ಜನೆ ವೇಳೆ ಯತ್ನಾಳ್ ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ. ಅವರ ವಿರುದ್ಧ ಸು ಮೊಟೊ ಪ್ರಕರಣ ದಾಖಲಿಸಿದ್ದೇವೆ. ಮುಂದಿನ ಕ್ರಮ ಕೈಗೊಳ್ಳುತ್ತೇವೆ” ಎಂಧು ಬಾಗಲಕೋಟೆ ಎಸ್‌ಪಿ ಅಮರನಾಥರೆಡ್ಡಿ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...