ಮಂಡ್ಯ | ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಜಾಮೀನು

Date:

ಮುಸ್ಲಿಂ ಮಹಿಳೆಯರು ಮತ್ತು ಸಮುದಾಯದ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ್ದ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಶ್ರೀರಂಗಪಟ್ಟಣ 3ನೇ ಅಪರ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯದಲ್ಲಿ ಜಾಮೀನು ನೀಡಿದೆ.

- Advertisement -

ಜನವರಿ 10ರಂದು ವಿಚಾರಣ ನಡೆಸಿದ್ದ ನ್ಯಾಯಾಲಯ ಆದೇಶವನ್ನು ಜ.17ಕ್ಕೆ ಕಾಯ್ದಿರಿಸಿತ್ತು. ಇದೀಗ, ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ದೂರು ದಾಖಲಿಸಿದ್ದ ಅರ್ಜಿದಾರೆ ನಜ್ಮಾ ಚಿಕ್ಕನೇರಳೆ ಅವರ ಪರವಾಗಿ ವಾದ ಮಂಡಿಸಿದ್ದ ಹಿರಿಯ ವಕೀಲ ಬಾಲನ್, “ಸುಪ್ರಿಂ ಕೋರ್ಟ್ ಮತ್ತು ಹಲವು ಹೈಕೋರ್ಟ್‌ಗಳ ತೀರ್ಪುಗಳ ಪ್ರಕಾರ ಆರೋಪಿ ಕಲ್ಲಡ್ಕ ಪ್ರಭಾಕರ್ ಭಟ್ ನಿರೀಕ್ಷಣಾ ಜಾಮೀನಿಗೆ ಅನರ್ಹನಾಗಿದ್ದಾನೆ. ದೇಶದ ಭದ್ರತೆ, ಸೌಹಾರ್ದತೆಗೆ ಈ ಆರೋಪಿ ಕಂಟಕವಾಗಿದ್ದಾನೆ. ಈ ಹಿಂದಿನ ಐಪಿಸಿ ಮಾತ್ರವಲ್ಲ, ಈಗಿನ ನ್ಯಾಯ ಸಂಹಿತಾ ಮತ್ತು ಸಾಕ್ಷ್ಯ ಅಧಿನಿಯಮದ ಪ್ರಕಾರವೂ ಆರೋಪಿ ಕಲ್ಲಡ್ಕ ಪ್ರಭಾಕರ ಭಟ್ ನಿರೀಕ್ಷಣಾ ಜಾಮೀನಿಗೆ ಅನರ್ಹನಾಗಿದ್ದಾನೆ” ಎಂದು ವಾದಿಸಿದ್ದರು.

ವಾದ, ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯ, ಕಲ್ಲಡ್ಕ ಪ್ರಭಾಕರ ಭಟ್‌ಗೆ ಜಾಮೀನು ಮಂಜೂರು ಮಾಡಿ ಬುಧವಾರ ಆದೇಶಿಸಿದೆ.

ಶ್ರೀರಂಗಪಟ್ಟಣದಲ್ಲಿ ನಡೆದ ಹನುಮ ಶೋಭಾಯಾತ್ರೆಯಲ್ಲಿ ಮಾತನಾಡಿದ್ದ ಪ್ರಭಾಕರ್ ಭಟ್, ಮುಸ್ಲಿಂ ಮಹಿಳೆಯರು ಮತ್ತು ಸಮುದಾಯದ ವಿರುದ್ಧ ಅವಹೇಳನಾಕಾರಿ ಮತ್ತು ಪ್ರಚೋದನಾಕಾರಿ ದ್ವೇಷ ಭಾಷಣೆ ಮಾಡಿದ್ದರು. ಅವರ ವಿರುದ್ಧ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಮಹಿಳಾ ಹೋರಾಟಗಾರ್ತಿ ನಜ್ಮಾ ನಝೀರ್ ಚಿಕ್ಕನೇರಳೆ ದೂರು ದಾಖಲಿಸಿದ್ದರು. ಅವರ ದೂರಿನ ಆಧಾರದ ಮೇಲೆ ಭಟ್‌ ವಿರುದ್ಧ ಐಪಿಸಿ ಸೆಕ್ಷನ್ 294, 295, 298, 354, 506, 509 ಮತ್ತು 153 ಎ ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಶೇ.86.97ರಷ್ಟು ದಾಖಲೆ ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯು ಶುಕ್ರವಾರ ಶಾಂತಿಯುತವಾಗಿ...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...