ಕೊಲೆ ಪ್ರಕರಣ: ಬಿಜೆಪಿ ಶಾಸಕ ಬೈರತಿ ಬಸವರಾಜ್​​ ಬಂಧನದಿಂದ ಪಾರು

Date:

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್​​ಗೆ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಬಂಧನ ಭೀತಿಯಲ್ಲಿದ್ದ ಬಸವರಾಜ್, ಬಂಧನದಿಂದ ಪಾರಾಗಿದ್ದಾರೆ. ಇತ್ತೀಚೆಗೆ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬಿಜೆಪಿ ಶಾಸಕನ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಬಳಿಕ ಅವರು ಹೈಕೋರ್ಟ್​​ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಇದೀಗ, ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

- Advertisement -

2025 ಜುಲೈ 15ರ ರಾತ್ರಿ ಬೆಂಗಳೂರಿನ ಹಲಸೂರು ಕೆರೆ ಬಳಿ ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವನನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಬಿಕ್ಲು ಶಿವ ಕೊಲೆಯಲ್ಲಿ ಬೈರತಿ ಬಸವರಾಜ್ ಕೈವಾಡವಿದೆ ಎಂದು ಆತನ ತಾಯಿ ಭಾರತಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅವರ ದೂರಿನ ಆಧಾರದ ಮೇಲೆ ಬಸವರಾಜ್ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಬೈರತಿ ಬಸವರಾಜ್ ಅವರನ್ನು ಎ5 ಆರೋಪಿಯಾಗಿ ಪೊಲೀಸರು ಉಲ್ಲೇಖಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಪ್ರಕರಣ ದಾಖಲಾಗುತ್ತಿದ್ದಂತೆ, ಬೈರತಿ ಬಸವರಾಜ್ ಪರಾರಿಯಾಗಿದ್ದರು. ನಿರೀಕ್ಷಣಾ ಜಾಮೀನು ಕೋರಿ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ, ಅವರ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ನ್ಯಾಯಾಲಯ ವಜಾಗೊಳಿಸಿತ್ತು.

ಬಳಿಕ, ಜಾಮೀನಿಗಾಗಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ವಾದ ಮಂಡಿಸಿದ ಬೈರತಿ ಪರ ವಕೀಲರು, “ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು ಬೈರತಿ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ಆದರೆ, ಈ ಹಿಂದೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದಾಗ, ಬಸವರಾಜ್ ಅವರು ವಿಚಾರಣೆಗೆ ಹಾಜರಾಗಿದ್ದಾರೆ. ಅವರ ವಿರುದ್ಧ ಇನ್ನೂ ಆರೋಪಪಟ್ಟಿ ಸಲ್ಲಿಸಿಲ್ಲ. ಆರೋಪಪಟ್ಟಿ ಸಲ್ಲಿಸದಿರುವುದಕ್ಕೆ ತನಿಖಾಧಿಕಾರಿ ಸಮಂಜಸ ಕಾರಣ ನೀಡಿಲ್ಲ. ಜುಲೈ 18 ರಿಂದ ಡಿಸೆಂಬರ್ 19 ರವರೆಗೆ ಬಂಧನದಿಂದ ರಕ್ಷಣೆಯಿತ್ತು. ಇದೇ ರಕ್ಷಣೆ ಮುಂದುವರಿಸಬೇಕು” ಎಂದು ವಾದಿಸಿದ್ದಾರೆ.

ಅವರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ.ಬಸವರಾಜ ಅವರಿದ್ದ​​ ಪೀಠ, ಬೈರತಿ ಬಸವರಾಜ್​​ಗೆ ಮಧ್ಯಂತರ ಜಾಮೀನು ನೀಡಿದೆ. ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜನವರಿ 6ಕ್ಕೆ ಮುಂದೂಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡಿನಲ್ಲಿ ತೀವ್ರ ವಿರೋಧ: ‘ಆರ್‌ಟಿಐ ವಿನಾಯಿತಿ’ ನಿರ್ಧಾರದಿಂದ ಹಿಂದೆ ಸರಿದ ವಿಜಯ್ ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ'...

ಅಸ್ಸಾಂ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಡಲು ನಮ್ಮ ಬಂಧನ: ಸಿಜೆಪಿ ನಾಯಕ ಅಶುತೋಷ್ ರಂಕಾ ಆರೋಪ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ-ಸಂಚಾಲಕ ಅಶುತೋಷ್ ರಂಕಾ ಮತ್ತು ಅವರ...

ವಿಜಯಪುರ | ವಿಕಲಚೇತನರು, ಹಿರಿಯ ನಾಗರಿಕರಿಗೆ ವಿವಿಧ ಸೌಲಭ್ಯ: ಅರ್ಜಿ ಸಲ್ಲಿಕೆಗೆ ಅ.31 ಕೊನೆಯ ದಿನ

ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 14 ಫಲಾನುಭವಿ ಆಧಾರಿತ...

ವಿಜಯನ್ ವಿರುದ್ಧ ಸಿಎಂಆರ್‌ಎಲ್ ಪ್ರಕರಣ: ಇಡಿ ಹೇಳಿದ ತಕ್ಷಣ ಎಫ್‌ಐಆರ್ ದಾಖಲಿಸಲಾಗದು ಎಂದು ಕೇರಳ ಗೃಹ ಸಚಿವ

ಜಾರಿ ನಿರ್ದೇಶನಾಲಯ (ಇಡಿ) ಕೋರಿದೆ ಎಂದಮಾತ್ರಕ್ಕೆ ತಕ್ಷಣವೇ ಎಫ್‌ಐಆರ್ ನೋಂದಾಯಿಸಲು ಸಾಧ್ಯವಿಲ್ಲ....