‘ಭಜರಂಗಿ’ ಸಿನಿಮಾ ನಟಿ, ಕಾಂಗ್ರೆಸ್‌ ಮುಖಂಡೆ ವಿದ್ಯಾ ನಂದೀಶ್ ಪತಿಯಿಂದಲೇ ಭೀಕರ ಕೊಲೆ

Date:

Advertisements

ಹ್ಯಾಟ್ರಿಕ್ ಹೀರೊ ಶಿವರಾಜ್‌ಕುಮಾರ್ ನಟನೆಯ ಸೂಪರ್‌ ಹಿಟ್‌ ಚಿತ್ರ ‘ಭಜರಂಗಿ’ಯಲ್ಲಿ ನಟಿಸಿದ್ದ ವಿದ್ಯಾ ನಂದೀಶ್ ಭೀಕರವಾಗಿ ಕೊಲೆಯಾಗಿರುವ ದುರ್ಘಟನೆ ಮೈಸೂರು ಜಿಲ್ಲೆಯ ಬನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕೌಟುಂಬಿಕ ಕಲಹದಿಂದಾಗಿ ನಟಿ ಹತ್ಯೆಯಾಗಿದ್ದು, ವಿದ್ಯಾ ಅವರನ್ನು ಪತಿ ನಂದೀಶ್‌ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಸಿನಿಮಾ ಮಾತ್ರವಲ್ಲ ಇತ್ತೀಚೆಗೆ ಕಾಂಗ್ರೆಸ್ ಪಕ್ಷದ ಬ್ಲಾಕ್ ಅಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದರು. ವಿದ್ಯಾ ಅವರು ಕೆಲ ನಾಯಕರೊಂದಿಗೆ ಆಪ್ತರಾಗಿದ್ದುದು ಕುಟುಂಬದಲ್ಲಿ ವಿರಸಕ್ಕೆ ಕಾರಣವಾಗಿತ್ತು ಎನ್ನಲಾಗಿದೆ. ಈ ವಿಚಾರದಲ್ಲಿ ಪತಿ ಹಾಗೂ ಪತ್ನಿ ನಡುವೆ ಜಗಳಕ್ಕೆ ದಾರಿ ಮಾಡಿಕೊಟ್ಟಿತ್ತು ಎನ್ನುವ ಮಾತುಗಳು ಕೇಳಿಬಂದಿವೆ.

Advertisements

ವಿದ್ಯಾ ಅವರು ಸಮಾಜ ಸೇವಕರಾದ ಬನ್ನೂರು ಸಮೀಪದ ತುರಗನೂರಿನ ನಂದೀಶ್‌ ಅವರನ್ನು ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದು, ಮೈಸೂರಿನ ಶ್ರೀರಾಮಪುರದಲ್ಲಿ ನೆಲೆಸಿದ್ದರು. ಬನ್ನೂರಿನ ತುರಗನೂರಿನಲ್ಲಿ ಪತಿಯ ಮನೆಗೆ ಆಕೆ ತೆರಳಿದ್ದಾಗ ಗಲಾಟೆ ನಡೆದಿದೆ ಎಂದು ತಿಳಿದು ಬಂದಿದೆ.

ಪತಿ ಹಾಗೂ ಪತ್ನಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಆದರೆ ಈ ಬಾರಿ ಅದು ವಿಕೋಪಕ್ಕೆ ಹೋಗಿದೆ ಕೊಲೆ ಸಂಭವಿಸಿದೆ ಎಂದು ವರದಿಯಾಗಿದೆ. ಗಲಾಟೆ ವೇಳೆ ಪತ್ನಿ ತಲೆಗೆ ನಂದೀಶ್‌ ಹರಿತವಾದ ಆಯುಧದಿಂದ ಹೊಡೆದು ಓಡಿ ಹೋಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಬನ್ನೂರು ಪೊಲೀಸರು ಸ್ಥಳಕ್ಕೆ ಬಂದು ಮಹಜರು ನಡೆಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ವಿದ್ಯಾ ನಂದೀಶ್‌ ಕನ್ನಡದ ಕೆಲ ಸಿನಿಮಾಗಳಲ್ಲಿ ಪೋಷಕ ನಟಿಯಾಗಿ ಬಣ್ಣ ಹಚ್ಚಿದ್ದು, ಚಿರಂಜೀವಿ ಸರ್ಜಾ ನಟನೆಯ ‘ಅಜಿತ್’ ಚಿತ್ರದಲ್ಲಿ ವಿದ್ಯಾ ನಂದೀಶ್ ನಾಯಕನ ಸ್ನೇಹಿತೆಯ ಪಾತ್ರದಲ್ಲಿ ಮಿಂಚಿದ್ದರು. ಮಾತ್ರವಲ್ಲ ಹಲವು ಸಿನಿಮಾಗಳಲ್ಲಿ ಪೋಷಕ ಪಾತ್ರವನ್ನು ನಿಭಾಯಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X