- ‘ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೊರಡಿಸಿದ್ದ ವಸ್ತ್ರ ಸಂಹಿತೆ ಆದೇಶಕ್ಕೆ ಆಕ್ರೋಶ’
- ‘ಪರೀಕ್ಷಾ ಅವ್ಯವಹಾರಗಳನ್ನು ತಡೆಯುವುದೇ ವಸ್ತ್ರ ಸಂಹಿತೆಯ ಮುಖ್ಯ ಉದ್ದೇಶ’
ಪರೀಕ್ಷಾ ಸಂದರ್ಭದಲ್ಲಿ ಅನಗತ್ಯ ಕ್ಯಾಪ್ ಅಥವಾ ಸ್ಕಾರ್ಫ್‌ಗಳ ಮೇಲಿನ ನಿಷೇಧವು ಹಿಜಾಬ್‌ಗೆ ಅನ್ವಯಿಸುವುದಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ ಎಂ ಸಿ ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.
ಪರೀಕ್ಷಾ ಅಕ್ರಮ ತಡೆಯುವ ಉದ್ದೇಶದಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಹೊರಡಿಸಿದ್ದ ವಸ್ತ್ರ ಸಂಹಿತೆ ಆದೇಶ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಸಚಿವರು ಸ್ಪಷ್ಟನೆ ನೀಡಿದ್ದಾರೆ.
“ಪರೀಕ್ಷಾ ಸಮಯದಲ್ಲಿ ನಡೆಯುವ ಅವ್ಯವಹಾರಗಳನ್ನು ತಡೆಯುವುದೇ ವಸ್ತ್ರ ಸಂಹಿತೆಯ ಹಿಂದಿನ ಮುಖ್ಯ ಉದ್ದೇಶ. ಹಿಜಾಬ್‌ಗಳು ಇತರ ತಲೆ ಹೊದಿಕೆಗಳಂತೆ ಅಡ್ಡಿಯಾಗುವುದಿಲ್ಲ. ಹಿಜಾಬ್ ಧರಿಸಿ ಅಭ್ಯರ್ಥಿಗಳು ಪರೀಕ್ಷಾ ಅಕ್ರಮಕ್ಕೆ ಬ್ಲೂಟೂತ್ ಸಾಧನಗಳನ್ನು ಬಳಸಲು ಸಾಧ್ಯವಿಲ್ಲ. ಡ್ರೆಸ್ ಕೋಡ್ ನಿಯಮಗಳನ್ನು ತಪ್ಪಾಗಿ ಅರ್ಥೈಸಲಾಗುತ್ತಿದೆ” ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಂಶವಾದಿ ರಾಜಕಾರಣ- ಬಿಜೆಪಿ ಎರಡೆಳೆ ನಾಲಗೆಗೆ ಇನ್ನೆಷ್ಟು ದೊಡ್ಡ ಸಾಕ್ಷಿ ಬೇಕು?
“ಪರೀಕ್ಷಾ ಕೇಂದ್ರದಲ್ಲಿ ಕಟ್ಟುನಿಟ್ಟಾದ ಭದ್ರತಾ ಕ್ರಮಗಳು ಇರಲಿವೆ. ಹಿಜಾಬ್ ಧರಿಸಿರುವ ಅಭ್ಯರ್ಥಿಗಳು ಒಂದು ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರಗಳಿಗೆ ವರದಿ ಮಾಡಿಕೊಳ್ಳಬೇಕು. ಹಿಂದಿನ ವರ್ಷಗಳಲ್ಲಿ ವರದಿಯಾಗಿರುವ ವಂಚನೆ ಘಟನೆಗಳನ್ನು ತಡೆಗಟ್ಟಲು ಹೆಚ್ಚಿನ ಮೆಟಲ್ ಡಿಟೆಕ್ಟರ್‌ಗಳನ್ನು ಬಳಸಲಾಗುತ್ತದೆ. ಹಾಗಾಗಿ ಸಂಪೂರ್ಣ ತಪಾಸಣೆ ಇರಲಿದೆ” ಎಂದಿದ್ದಾರೆ.