ಸರ್ಕಾರಿ ಸ್ಥಳಗಳಲ್ಲಿ RSS ನಡೆಸುವ ಎಲ್ಲಾ ಚಟುವಟಿಕೆಗಳಿಗೆ ನಿಷೇಧ ಹೇರಬೇಕು: ಸಿಎಂಗೆ ಪ್ರಿಯಾಂಕ್ ಖರ್ಗೆ ಪತ್ರ

Date:

ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್‌) ಸಂಘಟನೆಯು ಶಾಖೆ, ಸಾಂಘಿಕ್ ಅಥವಾ ಬೈಠಕ್ ಹೆಸರಲ್ಲಿ ಸರ್ಕಾರಿ ಸ್ಥಳಗಳಲ್ಲಿ ನಡೆಸುವ ಎಲ್ಲಾ ಬಗೆಯ ಚಟುವಟಿಕೆಗಳಿಗೆ ನಿಷೇಧ ಹೇರಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

- Advertisement -

ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಪ್ರಿಯಾಂಕ್ ಖರ್ಗೆ ಅವರು, “ಜನ ಸಮುದಾಯದಲ್ಲಿ ದ್ವೇಷ ಬಿತ್ತುವ ವಿಭಜಕ ಶಕ್ತಿಗಳು ತಲೆ ಎತ್ತಿದಾಗ ಅವುಗಳನ್ನು ನಿಗ್ರಹಿಸುವುಕ್ಕಾಗಿ ಹಾಗೂ ದೇಶದ ಜಾತ್ಯತೀತ ಮೌಲ್ಯಗಳನ್ನು ಎತ್ತಿ ಹಿಡಿಯುವುದಕ್ಕಾಗಿ ಸಮಗ್ರತೆ, ಸಮಾನತೆ ಮತ್ತು ಏಕತೆಯ ಮೂಲಭೂತ ತತ್ತ್ವಗಳನ್ನೊಳಗೊಂಡ ಸಂವಿಧಾನವು ನಮಗೆ ಅಧಿಕಾರವನ್ನು ನೀಡುತ್ತದೆ” ಎಂದು ಬರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಆರ್‌ಎಸ್‌ಎಸ್‌ ಅನ್ನು ಎದುರಿಸಲು ನಾವು ಸಿದ್ಧ: ಸಿ.ಎಂ ಸಿದ್ದರಾಮಯ್ಯ

“ರಾಷ್ಟ್ರೀಯ ಸ್ವಯಂಸೇವಕ ಸಂಘ ಎಂಬ ಹೆಸರಿನ ಸಂಘಟನೆಯು ಸರ್ಕಾರಿ ಮತ್ತು ಶಾಲೆಗಳು ಹಾಗೂ ಸಾರ್ವಜನಿಕ ಸರ್ಕಾರಿ ಮೈದಾನಗಳನ್ನು ಬಳಸಿಕೊಂಡು ಶಾಖೆ ನಡೆತುತ್ತಾ, ಪೋಷಣೆಗಳನ್ನು ಕೂಗುತ್ತಾ ಮಕ್ಕಳು ಮತ್ತು ಯುವ ಸಮುದಾಯದ ಮನಸಿನಲ್ಲಿ ಭಾರತದ ಏಕತೆಯ ವಿರುದ್ಧವಾಗಿ, ಹಾಗೂ ಸಂವಿಧಾನದ ಆಶಯಗಳ ವಿರುದ್ಧವಾಗಿ ನಕಾರಾತ್ಮಕ ಆಲೋಚನೆಗಳನ್ನು ತುಂಬಲಾಗುತ್ತಿದೆ. ಪೊಲೀಸ್ ಅನುಮತಿ ಪಡೆಯದ ದೊಣ್ಣೆಗಳನ್ನು ಹಿಡಿದು ಆಕ್ರಮಣಕಾರಿ ಪ್ರದರ್ಶನ ನಡೆಸುವ ಮೂಲಕ ಮುಗ್ಧ ಮಕ್ಕಳು ಹಾಗೂ ಯುವಜನರ ಮನಸಿನ ಮೇಲೆ ದುಷ್ಪರಿಣಾಮ ಬೀರಲಾಗುತ್ತಿದೆ” ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

“ನಾಡಿನ ಮಕ್ಕಳು, ಯುವ ಸಮುದಾಯ, ಸಾರ್ವಜನಿಕರು ಮತ್ತು ಸಮಾಜದ ಸ್ವಾಸ್ಥ್ಯದ ಹಿತದೃಷ್ಟಿಯಿಂದ ಸರ್ಕಾರಿ ಶಾಲೆಗಳು ಹಾಗೂ ಸರ್ಕಾರದ ಅನುದಾನಿತ ಶಾಲೆಗಳು ಮತ್ತು ಮೈದಾನಗಳು, ಉದ್ಯಾನವನಗಳು, ಮುಜರಾಯಿ ಇಲಾಖೆಯ ದೇವಸ್ಥಾನಗಳು ಪುರಾತತ್ವ ಇಲಾಖೆಯ ಸ್ಥಳಗಳು ಸೇರಿದಂತೆ ಯಾವುದೇ ಸರ್ಕಾರಿ ಸ್ಥಳಗಳಲ್ಲಿ RSS ಸಂಘಟನೆಯು ಶಾಖೆ, ಸಾಂಘಿಕ್ ಅಥವಾ ಬೈಠಕ್ ಹೆಸರಲ್ಲಿ ನಡೆಸುವ ಎಲ್ಲಾ ಬಗೆಯ ಚಟುವಟಿಕೆಗಳಿಗೆ ನಿಷೇಧ ಹೇರಬೇಕು” ಎಂದು ಮುಖ್ಯಮಂತ್ರಿ ಬಳಿ ಸಚಿವರು ಆಗ್ರಹಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ ಅಧಿಕಾರ...

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ...

ಚರ್ಚ್‌ನಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಫಾದರ್ ವಿರುದ್ಧ ಪೋಕ್ಸೋ ಕೇಸ್

ಪ್ರಾರ್ಥನೆಗಾಗಿ ಚರ್ಚ್‌ಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ...