ಸಾರಿಗೆ ಸಚಿವರ ಭರವಸೆ | ‘ಬೆಂಗಳೂರು ಬಂದ್’ ವಾಪಸ್ ಪಡೆದ ಖಾಸಗಿ ಸಾರಿಗೆ ಒಕ್ಕೂಟ

Date:

ವಿವಿಧ ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದಿದ್ದ ಖಾಸಗಿ ಸಾರಿಗೆ ಒಕ್ಕೂಟದವರು ಕರೆ ನೀಡಿರುವ ‘ಬೆಂಗಳೂರು ಬಂದ್‌’ ವಾಪಸ್ ಪಡೆದಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, 32 ಬೇಡಿಕೆಗಳ ಪೈಕಿ 27 ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ‘ಬೆಂಗಳೂರು ಬಂದ್’ ವಾಪಸ್ ಪಡೆದಿರುವುದಾಗಿ ಖಾಸಗಿ ಸಾರಿಗೆ ಒಕ್ಕೂಟದ ಪದಾಧಿಕಾರಿಗಳು ತಿಳಿಸಿದ್ದಾರೆ.

ಸ್ವಾತಂತ್ರ್ಯ ಉದ್ಯಾನಕ್ಕೆ ಭೇಟಿ ನೀಡಿದ ಸಚಿವರು, ‘ನಾನು ನಿಮ್ಮ ಪರ ಇದ್ದೇನೆ. ನನ್ನನ್ನೂ ನಿಮ್ಮ ಜೊತೆಗೆ ಸೇರಿಸಿಕೊಳ್ಳಿ. ತೆರಿಗೆ ಮತ್ತು ಶಕ್ತಿ ಯೋಜನೆಗೆ ಸಂಬಂಧಿಸಿದ ಬೇಡಿಕೆಯನ್ನು ಈಡೇರಿಸುವುದು ನನ್ನ ವ್ಯಾಪ್ತಿಯಲ್ಲಿ ಕಷ್ಟ. ಉಳಿದ ಬೇಡಿಕೆಗಳನ್ನು ಈಡೇರಿಸುತ್ತೇನೆ’ ಎಂದು ಭರವಸೆ ನೀಡಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಖಾಸಗಿ ಸಾರಿಗೆ ಒಕ್ಕೂಟದ ಅಧ್ಯಕ್ಷ, ವಕೀಲ ನಟರಾಜ್ ಶರ್ಮಾ, ‘ಆರ್ಥಿಕ ಇಲಾಖೆಗೆ ಸಂಬಂಧಿಸಿದ ಮೂರು ಬೇಡಿಕೆಗಳನ್ನು ಹೊರತುಪಡಿಸಿ ಉಳಿದ 27 ಬೇಡಿಕೆಗಳನ್ನು ಈಡೇರಿಸಲು ಮಂಗಳವಾರವೇ ಕ್ರಮ ಕೈಗೊಳ್ಳಬೇಕು ಎಂಬ ಷರತ್ತು ವಿಧಿಸಿ ಮುಷ್ಕರ ಹಿಂಪಡೆಯಲಾಯಿತು. ನಮ್ಮ ಬಂದ್‌ನಿಂದ ಇಡೀ ಬೆಂಗಳೂರು ಸ್ತಬ್ಧವಾಗಿತ್ತು. ಇದು ನಮ್ಮ ಸಾರಿಗೆ ಒಕ್ಕೂಟದ ಶಕ್ತಿ’ ಎಂದು ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜುಲೈ 5ರಂದು ಬಡ ಮಹಿಳೆಯರ ಖಾತೆಗೆ 8,500 ರೂ ಜಮೆ: ರಾಹುಲ್ ಗಾಂಧಿ

ಮಹಾಲಕ್ಷ್ಮೀ ಯೋಜನೆ ದೇಶದಲ್ಲಿರುವ ಬಡ ಮಹಿಳೆಯರ ಬ್ಯಾಂಕ್ ಖಾತೆಗೆ ಜುಲೈ 5ರಂದು...

ಗದಗ | ಮುಖ್ಯ ರಸ್ತೆ ದುರಸ್ಥಿ ಮಾಡುವಂತೆ ಜಯ ಕರ್ನಾಟಕ ಸಂಘಟನೆ ಆಗ್ರಹ

ಗದಗ ಮುಖ್ಯ ರಸ್ತೆ ರೈಲ್ವೆ ಇಲಾಖೆಗೆ ಸಂಬಂಧಪಟ್ಟಿದ್ದು ಈ ರಸ್ತೆಯ ದುರಸ್ತಿ...

ಬೀದರ್‌ | ಬೆಂಕಿ ಅವಘಡ ; ಹೊತ್ತಿ ಉರಿದ ಜೆಸ್ಕಾಂ ಕಚೇರಿ

ಟ್ರಾನ್ಸ್‌ಫಾರ್ಮಾರ್‌ ರಿಪೇರಿ ಮಾಡುವ ವೇಳೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಧಗ ಧಗನೆ...

ಅನುಮಾನಗಳನ್ನು ಹುಟ್ಟುಹಾಕುವುದೇ ಕೆಲವರ ಕೆಲಸ: ಮುಖ್ಯ ಚುನಾವಣಾ ಆಯುಕ್ತ

ಅನುಮಾನಗಳನ್ನು ಹುಟ್ಟುಹಾಕುವುದೇ ಕೆಲವರ ಕೆಲಸ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್...