ಬೆಂಗಳೂರು | ತೆರಿಗೆ ಕಟ್ಟುತ್ತಿರುವವರ ಮೇಲೆ ಹೊರೆ ಹೊರಿಸುತ್ತಿರುವ ಬಿಬಿಎಂಪಿ: ಎಎಪಿ ಆಕ್ರೋಶ

Date:

Advertisements

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯು ಆಸ್ತಿ ತೆರಿಗೆ ಸಂಗ್ರಹ ಹಾಗೂ ಆದಾಯದ ಕ್ರೋಡೀಕರಣದಲ್ಲಿ ನಿರ್ಲಕ್ಷ್ಯ ವಹಿಸುತ್ತಿದೆ. ಪ್ರಾಮಾಣಿಕವಾಗಿ ತೆರಿಗೆ ಕಟ್ಟಿಕೊಂಡು ಬರುತ್ತಿರುವವರ ಮೇಲೆ ತೆರಿಗೆ ಹೆಚ್ಚಿಸುವ ಮೂಲಕ ಹೊರೆ ಹೊರಿಸುತ್ತಿದೆ ಎಂದು ಆಮ್‌ ಆದ್ಮಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ‌ ದಾಸರಿ ಆರೋಪಿಸಿದರು.

ನಗರದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಬಿಡಿಎ ಲೇಔಟ್‌ಗಳ ಅನೇಕ ಭಾಗಗಳು ಬಿಬಿಎಂಪಿಗೆ ಇದುವರೆಗೂ ಹಸ್ತಾಂತರಗೊಂಡಿಲ್ಲ. ಅಲ್ಲಿನ‌ ನಿವಾಸಿಗಳು ತೆರಿಗೆ ಕಟ್ಟಲು ಸಿದ್ಧರಿದ್ದಾರೆ. ಒಂದು ಮನೆ ಅಸೆಸ್ ಮಾಡಿ, ಬಿಬಿಎಂಪಿಗೆ ಹಸ್ತಾಂತರಿಸಲು ಅಧಿಕಾರಿಗಳು ಕನಿಷ್ಟ ಎರಡ್ಮೂರು ಲಕ್ಷ ರೂಪಾಯಿ ಲಂಚ ಕೇಳುತ್ತಿದ್ದಾರೆ. ಇದರಿಂದ ಜನರು ಬಿಬಿಎಂಪಿಗೆ ನೇರವಾಗಿ ತೆರಿಗೆ ಕಟ್ಟಲು ಆಗುತ್ತಿಲ್ಲ. ಮೂಲಸೌಲಭ್ಯಕ್ಕಾಗಿ ಪರಿತಪಿಸುವಂತಾಗಿದೆ. ಇಂತಹ ಭ್ರಷ್ಟಾಚಾರಕ್ಕೆ ಕಡಿವಾಣ ಬೀಳಬೇಕು” ಎಂದು ಹೇಳಿದರು.

“ಬಿಡಿಎ ನಿರ್ಮಿಸಿರುವ ಬಹುತೇಕ ಸೈಟ್, ಮನೆ, ಅಪಾರ್ಟ್ಮೆಂಟ್, ಕಾಂಪ್ಲೆಕ್ಸ್‌ಗಳು ಬಿಬಿಎಂಪಿಗೆ ತೆರಿಗೆ ಕಟ್ಟುತ್ತಿಲ್ಲ. ಬೆಂಗಳೂರಿನ ದಕ್ಷಿಣ ಭಾಗದ ಅಂಜನಾಪುರ ಭಾಗದಲ್ಲಿ 1ರಿಂದ11 ಬ್ಲಾಕ್‌ಗಳು, ಜೆ.ಪಿ.ನಗರದ 9ನೇ ಫೇಸ್, ಬನಶಂಕರಿ 6ನೇ ಸ್ಟೇಜ್ ನ 1ರಿಂದ 10ನೇ ಬ್ಲಾಕ್ ಬಡಾವಣೆಗಳು ಹಾಗೂ ಕೆಂಗೇರಿ ಭಾಗದ ಸರ್ ಎಂ.ವಿಶ್ವೇಶ್ವರಯ್ಯ ಬಡಾವಣೆಗಳಿಂದ ಆಸ್ತಿ ತೆರಿಗೆ ಸಂಗ್ರಹವಾಗುತ್ತಿಲ್ಲ” ಎಂದು ದೂರಿದರು.

Advertisements

“ಕಂದಾಯ ಇಲಾಖೆಯ ವಿಶೇಷ ಆಯುಕ್ತರು ಈ ಬಗ್ಗೆ ಕ್ರಮ ವಹಿಸುತ್ತಿಲ್ಲ. ಬಿಡಿಎನಿಂದ ಬಿಬಿಎಂಪಿಗೆ ಅಭಿವೃದ್ಧಿ ಹೊಂದಿದ ಬಡಾವಣೆಗಳನ್ನು ಏಕೆ ಹಸ್ತಾಂತರ ಮಾಡುತ್ತಿಲ್ಲ‌?, ಇಲ್ಲಿ ಕಮಿಷನ್ ವ್ಯವಹಾರ ನಡೆಯುತ್ತಿದೆಯೇ? ಡಿ.ಕೆ.ಶಿವಕುಮಾರ್ ಹಾಗೂ ಬಿಡಿಎ ಅಧ್ಯಕ್ಷರಿಗೆ ಕಮಿಷನ್ ಹೋಗುತ್ತಿದ್ದೆಯೇ?” ಎಂದು‌ ಪ್ರಶ್ನಿಸಿದರು.

“ಬಿಬಿಎಂಪಿಗೆ ಹೊಸ ತೆರಿಗೆ ವ್ಯವಸ್ಥೆ ಜಾರಿಗೊಳಿಸಿದರೆ ಅಧಿಕ ಆಸ್ತಿ ತೆರಿಗೆ ಬರುತ್ತದೆಯೇ? ಅಂದಾಜು ₹20 ಸಾವಿರ ಕೋಟಿ ಆದಾಯ ಬರುವಂತಹ ಯೋಜನೆಗಳ ಬಗ್ಗೆ ನಮ್ಮ ಪಕ್ಷ ಸಂಶೋಧನೆ ಮಾಡುತ್ತಿದೆ. ಬಿಬಿಎಂಪಿಯಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ಆಸ್ತಿ ತೆರಿಗೆ ಮತ್ತು ಇನ್ನಿತರ ತೆರಿಗೆಯನ್ನು ಬಿಬಿಎಂಪಿಗಾಗಿ ಸಂಗ್ರಹಿಸಲು ಮುಂದಾಗುತ್ತೇವೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಲೈಂಗಿಕ ಹಗರಣ | ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ

ಪಕ್ಷದ ಬೆಂಗಳೂರು ನಗರ ಅಧ್ಯಕ್ಷ ಡಾ.ಸತೀಶ್ ಕುಮಾರ್ ಮಾತನಾಡಿ, “ಬಿಬಿಎಂಪಿ ಜತೆಗೆ ಬಿಡಿಎ, ಬಿಡಬ್ಲ್ಯುಎಸ್ಎಸ್‌ಬಿ ಮುಂತಾದ ಅಂಗ ಸಂಸ್ಥೆಗಳು ಒಗ್ಗೂಡದಿರುವುದು ದುರಂತ. ಸಮನ್ವಯತೆ ಸಾಧಿಸದಿದ್ದರೆ ಅಭಿವೃದ್ಧಿ ಕುಂಠಿತವಾಗಲಿದೆ. ಸರ್ಕಾರ ಈ ಬಗ್ಗೆ ಜಾಣ ವಹಿಸುವುದು ತರವಲ್ಲ. ನಿರ್ಮಾಣ ಕಾರ್ಯ ಅಪೂರ್ಣಗೊಂಡಿರುವ ಕೆಂಪೇಗೌಡ ಬಡಾವಣೆ ಬಗ್ಗೆ ನಗರಾಭಿವೃದ್ಧಿ ಸಚಿವರು ನಿರ್ಲಕ್ಷ್ಯ ವಹಿಸಿದ್ದಾರೆ. ₹100 ಕೋಟಿಗೂ ಅಧಿಕ ಆಸ್ತಿ ತೆರಿಗೆ ವಸೂಲಿ ಆಗಬೇಕಿದೆ ಎಂದು ಬಿಬಿಎಂಪಿ ಅಡಿಟ್ ವರದಿ ಹೇಳಿದೆ. ಈ ಬಗ್ಗೆ ಸರ್ಕಾರ ಕ್ರಮವಹಿಸುತ್ತಿಲ್ಲ” ಎಂದು ಆರೋಪಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

Download Eedina App Android / iOS

X