ಬೆಂಗಳೂರು ಕಟ್ಟಡ ದುರಂತ | ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ ಕೇಂದ್ರ ಸರ್ಕಾರ

Date:

ಬೆಂಗಳೂರಿನ ಹೆಣ್ಣೂರು ಸಮೀಪದ ಬಾಬುಸಾಪಾಳ್ಯದಲ್ಲಿ ಕುಸಿದಿರುವ ಬಹು ಅಂತಸ್ತಿನ ಕಟ್ಟಡದಲ್ಲಿ ಎಂಟು ಕಾರ್ಮಿಕರು ಸಾವನ್ನಪ್ಪಿದ್ದು, ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

- Advertisement -

ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಪ್ರಧಾನಿ ಕಾರ್ಯಾಲಯ ಸಂದೇಶ ಪ್ರಕಟಿಸಿದೆ. ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಪರಿಹಾರ ನೀಡಲಾಗುತ್ತದೆ. ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ, “ಮೃತ ಕಾರ್ಮಿಕರ ಕುಟುಂಬಸ್ಥರ ದುಃಖದಲ್ಲಿ ನಾನು ಭಾಗಿ ಎಂದಿದ್ದಾರೆ. ಜತೆಗೆ, ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ” ಎಂದು ಪ್ರಾರ್ಥಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬೆಳಗಾವಿ | ಕೆಡಿಪಿ ಸಭೆಗೆ 13 ಶಾಸಕರು ಗೈರು:...

ಬೆಳೆ ಹಾನಿ ಸಂಭವಿಸಿದರೆ ರೈತರಿಗೆ ಬೆಳೆ ವಿಮೆ, ಪರಿಹಾರ ಹಾಗೂ ನೀರಿನ ನೆರವು ಅಗತ್ಯವಾಗುತ್ತದೆ. ಈ ಸಮಸ್ಯೆಗಳನ್ನು ಸಂಬಂಧಿಸಿದ ಅಧಿಕಾರಿಗಳ ಮುಂದೆ ಸಮಗ್ರವಾಗಿ ಪ್ರಸ್ತಾಪಿಸಿ ಪರಿಹಾರಕ್ಕೆ ಒತ್ತಾಯಿಸುವ ಜವಾಬ್ದಾರಿ ಆಯಾ ಕ್ಷೇತ್ರದ ಜನಪ್ರತಿನಿಧಿಗಳ...

ಸಭಾಧ್ಯಕ್ಷರ ತವರಲ್ಲೇ ಬಡವರು ಅತಂತ್ರ: ʼಹಕ್ಕುಪತ್ರʼವಿದ್ದರೂ ಸ್ವಂತ ಸೂರಿಲ್ಲ,...

ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಜಿ ಎಸ್ ಪಾಟೀಲ್ ಅವರು ಅಧಿಕಾರ ವಹಿಸಿಕೊಂಡಿರುವುದು ಈ ಸಂತ್ರಸ್ತರಲ್ಲಿ ಹೊಸ ಭರವಸೆ ಮೂಡಿಸಿದೆ. ಪ್ರಜಾಪ್ರಭುತ್ವದ ಅತ್ಯುನ್ನತ ಪೀಠದಲ್ಲಿರುವ ಅವರು, ತಮ್ಮ ಸ್ವಕ್ಷೇತ್ರದ ಈ ದಶಕದ ಸಮಸ್ಯೆಗೆ ತಕ್ಷಣ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

ಬಹುಮಹಡಿ ಕಟ್ಟಡವನ್ನು ಅಕ್ರಮವಾಗಿ ನಿರ್ಮಿಸಿದ್ದ ಹಾಗೂ ಬಿಬಿಎಂಪಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದ ಸಂಗತಿ ಪೊಲೀಸ್‌ ತನಿಖೆಯಲ್ಲಿ ದೃಢಪಟ್ಟಿದೆ. ಪ್ರಕರಣ ಸಂಬಂಧ ಪಾಲಿಕೆ ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್‌ ತಲೆದಂಡವಾಗಿದೆ. ಇದರ ಬೆನ್ನಲ್ಲೇ ಕಟ್ಟಡದ ಮಾಲೀಕ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.ʼ

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಿಯಾಂಕಾ ಲೋಕಸಭೆ ಪ್ರವೇಶ; ಮೋದಿ ವಿರುದ್ಧದ ದಾಳಿಗೆ ಮತ್ತಷ್ಟು ಮೊನಚು

ಬಾಬುಸಾಬ್‌ಪಾಳ್ಯದ ಅಂಜನಾದ್ರಿ ಎನ್‌ಕ್ಲೇವ್‌ನಲ್ಲಿ ಅನಧಿಕೃತವಾಗಿ ಹಾಗೂ ನಕ್ಷೆ ಮಂಜೂರಾತಿಗೆ ವ್ಯತಿರಿಕ್ತವಾಗಿ ಕಟ್ಟಡ ನಿರ್ಮಿಸುತ್ತಿದ್ದು, ಬಿಬಿಎಂಪಿ ಕಾಯಿದೆ 2020ರ ಕಟ್ಟಡ ಉಪವಿಧಿಗಳನ್ನು ಉಲ್ಲಂಘಿಸಿ ನಿರ್ಮಾಣ ಮಾಡಿರುವ ಕಟ್ಟಡದ ಭಾಗಗಳನ್ನು ತೆರವುಗೊಳಿಸಬೇಕೆಂದು ಪಾಲಿಕೆಯ ಹೊರಮಾವು ಉಪ ವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್‌ (ಎಇಇ) ಕೆ ವಿನಯ್‌ ನೋಟಿಸ್‌ ನೀಡಿದ್ದರು.

ಆದರೆ, ಸ್ಥಿರೀಕರಣ ಆದೇಶ ಹೊರಡಿಸಿದ ಬಳಿಕ ಕಟ್ಟಡ ಉಪವಿಧಿಗಳನ್ನು ಉಲ್ಲಂಘಿಸಿ ನಿರ್ಮಿಸಿರುವ ಕಟ್ಟಡದ ಭಾಗಗಳನ್ನು ತೆರವುಗೊಳಿಸಲು ವಿನಯ್‌ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಹೀಗಾಗಿ, ಕಟ್ಟಡ ಕುಸಿದು 8 ಮಂದಿ ಕಾರ್ಮಿಕರ ಸಾವಿಗೆ ಮೇಲ್ನೋಟಕ್ಕೆ ಕಾರಣವಾಗಿರುವ ವಿನಯ್‌ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಬಿಬಿಎಂಪಿ ಉಪ ಆಯುಕ್ತರು (ಆಡಳಿತ) ಆದೇಶ ಹೊರಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಭಾಧ್ಯಕ್ಷರ ತವರಲ್ಲೇ ಬಡವರು ಅತಂತ್ರ: ʼಹಕ್ಕುಪತ್ರʼವಿದ್ದರೂ ಸ್ವಂತ ಸೂರಿಲ್ಲ, 13 ವರ್ಷಗಳಿಂದ ಬೀದಿಯಲ್ಲೇ ಬದುಕು!

ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಜಿ ಎಸ್ ಪಾಟೀಲ್ ಅವರು ಅಧಿಕಾರ ವಹಿಸಿಕೊಂಡಿರುವುದು...

ಮೊಬೈಲ್ EMI ಕಟ್ಟದಿದ್ದಕ್ಕೆ ಅಪಹರಣ: ಯುವಕನ ರಕ್ತ ತೆಗೆದು ಮಾರಿದ ವಸೂಲಿ ಏಜೆಂಟರು

ಮೊಬೈಲ್ ಫೋನ್ ಖರೀದಿಸಿ ಅದರ ಕಂತು (ಇಎಂಐ) ಕಟ್ಟದಿದ್ದಕ್ಕೆ ಯುವಕನೊಬ್ಬನನ್ನು ಅಪಹರಿಸಿ,...

ಉರ್ದು, ಮರಾಠಿ ಶಿಕ್ಷಕರ ಪೂರ್ಣ ನೇಮಕಾತಿಗೆ ಕರ್ನಾಟಕ ರಾಜ್ಯ ಮುಸ್ಲಿಂ ಒಕ್ಕೂಟ ಆಗ್ರಹ

ಉರ್ದು ಸೇರಿದಂತೆ ಭಾಷಾ ಅಲ್ಪಸಂಖ್ಯಾತ ಮಾಧ್ಯಮದ ಅಭ್ಯರ್ಥಿಗಳಿಗೆ ಶಿಕ್ಷಕರ ನೇಮಕಾತಿಯಲ್ಲಿ ನೀಡಿದ್ದ...

ಕಲ್ಯಾಣ ಕರ್ನಾಟಕ ಭಾಗಕ್ಕೆ ಸಂವಿಧಾನದ 371(ಜೆ) ವಿಶೇಷ ಸ್ಥಾನಮಾನ ಶ್ರೀರಕ್ಷೆಯಾಗಿದೆ : ಸಚಿವ ಶರಣಪ್ರಕಾಶ ಪಾಟೀಲ

ಕಲ್ಯಾಣ ಕರ್ನಾಟಕ ಭಾಗಕ್ಕೆ ಸಂವಿಧಾನದ 371(ಜೆ) ವಿಶೇಷ ಸ್ಥಾನಮಾನ ಶ್ರೀರಕ್ಷೆಯಾಗಿದ್ದು, ಈ...