ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರನ್ನು ಅನಿರೀಕ್ಷಿತವಾಗಿ ಭೇಟಿಯಾದರು.
ಸಿಡಬ್ಲ್ಯೂಸಿ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಲು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ , ಮಂಗಳೂರಿಗೆ ತೆರಳಲು ಆಗಮಿಸಿದ್ದ ಮಾಜಿ ಪ್ರಧಾನಿ ದೇವೇಗೌಡರು ಮತ್ತು ಇವರ ಧರ್ಮಪತ್ನಿ ಚನ್ನಮ್ಮ ಅವರು ಅನಿರೀಕ್ಷಿತವಾಗಿ ಮುಖಾಮುಖಿಯಾದರು.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಸಂಜೆ ಆಕಸ್ಮಿಕವಾಗಿ ಎದುರಾದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರೊಂದಿಗೆ ಕೆಲಹೊತ್ತು ಮಾತನಾಡುತ್ತಾ, ಅವರ ಆರೋಗ್ಯ ವಿಚಾರಿಸಿದೆ.
ಅವರ ಜೀವನೋತ್ಸಾಹ ಸ್ಪೂರ್ತಿದಾಯಕ.@H_D_Devegowda pic.twitter.com/YTrN8w27H0— Siddaramaiah (@siddaramaiah) October 8, 2023
ಈ ವೇಳೆ ಮುಖ್ಯಮಂತ್ರಿಗಳು ದೇವೇಗೌಡರು ಮತ್ತು ಚನ್ನಮ್ಮ ಅವರ ಆರೋಗ್ಯ ವಿಚಾರಿಸಿದರು. ಬಳಿಕ ದೇವೇಗೌಡರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿದರು.
ಮುಖ್ಯಮಂತ್ರಿ @siddaramaiah ಅವರು ಇಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರನ್ನು ಅನಿರೀಕ್ಷಿತವಾಗಿ ಭೇಟಿಯಾದರು. ಇದೇ ವೇಳೆ ಮಾಜಿ ಪ್ರಧಾನಿಗಳ ಆರೋಗ್ಯದ ಬಗ್ಗೆ ವಿಚಾರಿಸಿ, ಪರಸ್ಪರ ಕುಶಲೋಪರಿ ನಡೆಸಿದರು.
@CMofKarnataka @JanataDal_S @H_D_Devegowda @hddevegowda_fc pic.twitter.com/jjzynFtrS6
— eedina.com (@eedinanews) October 8, 2023
ಕೆಲಕಾಲ ಕುಶಲೋಪರಿ, ಮಾತುಕತೆ ಬಳಿಕ ಪರಸ್ಪರರು ಬೀಳ್ಕೊಟ್ಟರು. ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಈ ಸಂದರ್ಭ ಉಪಸ್ಥಿತರಿದ್ದರು.