ಬೆಂಗಳೂರು: ಚರ್ಚ್ ಸ್ಟ್ರೀಟ್‌ನಲ್ಲಿ ಚಹಾ ಸವಿದು ಸಾರ್ವಜನಿಕರ ಜೊತೆ ಬೆರೆತ ಡಚ್ ಪ್ರಧಾನಿ ಮಾರ್ಕ್ ರುಟ್ಟೆ

Date:

  • ಅಭಿವೃದ್ಧಿಶೀಲ ರಾಷ್ಟ್ರಗಳ ಸಾಲ ಯೋಜನೆ ಕುರಿತು ಸೂಕ್ತ ವೇದಿಕೆಗಳಲ್ಲಿ ಚರ್ಚೆ
  • ಎರಡು ದಿನಗಳ ಬೆಂಗಳೂರು ಪ್ರವಾಸ ಕೈಗೊಂಡಿರುವ ನೆದರ್‌ಲ್ಯಾಂಡ್ಸ್ ಪ್ರಧಾನಿ

ಎರಡು ದಿನಗಳ ಬೆಂಗಳೂರು ಪ್ರವಾಸ ಕೈಗೊಂಡಿರುವ ನೆದರ್‌ಲ್ಯಾಂಡ್ಸ್ ಪ್ರಧಾನಿ ಮಾರ್ಕ್ ರುಟ್ಟೆ, ಚರ್ಚ್ ಸ್ಟ್ರೀಟ್‌ನಲ್ಲಿ ಚಹಾ ಸವಿದು ಸಾರ್ವಜನಿಕರು ಹಾಗೂ ಮಾಧ್ಯಮದವರೊಂದಿಗೆ ಬೆರೆತರು.

ಬ್ರಿಗೇಡ್ ರಸ್ತೆಯಿಂದ ಕಾಲ್ನಡಿಗೆ ಮೂಲಕ ಚರ್ಚ್ ಸ್ಟ್ರೀಟಿನ ಚಾಯ್‌ ಪಾಯಿಂಟ್‌ಗೆ ಆಗಮಿಸಿದ ಡಚ್ ಪ್ರಧಾನಿ, ಮಸಾಲಾ ಚಹ ಖರೀದಿಸಿ ಸವಿದು, ಯುಪಿಐ ಮೂಲಕ ಹಣ ಪಾವತಿ ಮಾಡಿದರು.

ಚರ್ಚ್‌ ಸ್ಟ್ರೀಟಿನ ಬೇರಿ ಸರ್ಕಲ್‌‌ವರೆಗೆ ಕಾಲ್ನಡಿಗೆಯಲ್ಲಿಯೇ ಬಂದು, ತಕ್ಷಶಿಲಾ ಇನ್‌ಸ್ಟಿಟ್ಯೂಷನ್ ಗೋಡೆಯ ಮೇಲೆ ಭಾರತ ಹಾಗೂ ನೆದರ್‌ಲ್ಯಾಂಡ್ಸ್ ದ್ಯೋತಕವಾಗಿ ಬರೆಯಲಾಗಿರುವ ಸಿಂಹ( Mural)ದ ವರ್ಣಚಿತ್ರ ವೀಕ್ಷಿಸಿ ಸಂತಸ ವ್ಯಕ್ತಪಡಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬಳಿಕ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಭಾರತದ ಡಿಜಿಟಲ್ ಪಾವತಿಯ ಯುಪಿಐ ವಿಧಾನವು ಸರಳ ಹಾಗೂ ಸುಲಭವಾಗಿದೆ. ಇಲ್ಲಿನ ಚರ್ಚ್‌ಸ್ಟ್ರೀಟಿನಲ್ಲಿ ಸಂಚರಿಸಿ ಚಹ ಸವಿದಿರುವುದು ಸಂತಸ ತಂದಿದೆ. ಕೆಳ ಮತ್ತು ಮಧ್ಯಮ ಆದಾಯ ಹೊಂದಿರುವ ರಾಷ್ಟ್ರಗಳ ಸಾಲ ಯೋಜನೆ ಕುರಿತು ಸೂಕ್ತ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಚರ್ಚಿಸಿ ಹಂತ ಹಂತವಾಗಿ ದೀರ್ಘಾವಧಿಯ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುವುದು. ಜಿ20 ಯ ನವದೆಹಲಿ ಘೋಷಣೆಗೆ ತಮ್ಮ ಸಂಪೂರ್ಣ ಸಹಮತವಿದೆ ಎಂದರು.

ಸರಳ ಭದ್ರತೆಯ ನಡುವೆ ಯಾವುದೇ ಹೆಚ್ಚು ಅಂತರಗಳನ್ನಿಟ್ಟುಕೊಳ್ಳದೇ ಸಾರ್ವಜನಿಕರು ಹಾಗೂ ಮಾಧ್ಯಮದವರೊಂದಿಗೆ ಬೆರೆತ ನೆದರ್‌ಲ್ಯಾಂಡ್ಸ್ ಪ್ರಧಾನಿ ಮಾರ್ಕ್ ರುಟ್ಟೆ, ಜನರ ಬಳಿ ತೆರಳಿ ಕೈ ಕುಲುಕಿದರು.

ತಮ್ಮೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಬಂದ ಸಾರ್ವಜನಿಕರೊಂದಿಗೆ ಬೆರೆತು ತಾವೇ ಖುದ್ದಾಗಿ ಜನರ ಮೊಬೈಲುಗಳಲ್ಲಿ ಸೆಲ್ಫಿ ತೆಗೆದುಕೊಟ್ಟರು. ಶಾಸಕ ಎನ್. ಎ.ಹ್ಯಾರಿಸ್ ಮತ್ತಿತರ ಗಣ್ಯರು ಜೊತೆಗಿದ್ದರು.

ಸ್ವಾಗತಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್
ಸಿಲಿಕಾನ್‌ ಸಿಟಿಗೆ ಭೇಟಿ ನೀಡಿರುವ ರುಟ್ಟೆ ಅವರನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಸಚಿವ ಎಂಬಿ ಪಾಟೀಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾರವರು ಆತ್ಮೀಯವಾಗಿ ಸ್ವಾಗತಿಸಿದರು.

ದೆಹಲಿಯಿಂದ ಶೃಂಗಸಭೆಯ ಬಳಿಕ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಧಾನಸೌಧಕ್ಕೆ ಆಗಮಿಸಿದ ಮಾರ್ಕ್‌ ರುಟ್ಟೆಯವರಿಗೆ ಹೂಗುಚ್ಛ ನೀಡಿ ಬರಮಾಡಿಕೊಳ್ಳಲಾಯಿತು. ಬೆಂಗಳೂರಿನಲ್ಲಿ ಹೂಡಿಕೆ ವಿಚಾರವಾಗಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಹತ್ವದ ಸಭೆ ನಡೆಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಬೆಂಕಿ ಅವಘಡ ; ಹೊತ್ತಿ ಉರಿದ ಜೆಸ್ಕಾಂ ಕಚೇರಿ

ಟ್ರಾನ್ಸ್‌ಫಾರ್ಮಾರ್‌ ರಿಪೇರಿ ಮಾಡುವ ವೇಳೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಧಗ ಧಗನೆ...

ಅನುಮಾನಗಳನ್ನು ಹುಟ್ಟುಹಾಕುವುದೇ ಕೆಲವರ ಕೆಲಸ: ಮುಖ್ಯ ಚುನಾವಣಾ ಆಯುಕ್ತ

ಅನುಮಾನಗಳನ್ನು ಹುಟ್ಟುಹಾಕುವುದೇ ಕೆಲವರ ಕೆಲಸ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್...

ನಿರ್ಗಮಿಸುವ ಪ್ರಧಾನಿ ತನ್ನನ್ನು ತಾನು ದೇವಮಾನವನೆಂದು ಭಾವಿಸಬಹುದು: ಕಾಂಗ್ರೆಸ್‌

"ನಿರ್ಗಮಿಸುತ್ತಿರುವ ಪ್ರಧಾನಿ ಸೋಲಿನ ವಾಸ್ತವ ತಿಳಿಯುತ್ತಿದ್ದಂತೆ, ಹೆಚ್ಚು ಭ್ರಮೆಯಲ್ಲಿದ್ದಾರೆ. ಅದಕ್ಕೆ ತನ್ನ...

ಕೊಪ್ಪಳ | ಜನಪರ ಚಳವಳಿಗಳ ಚೇತನವನ್ನು ನಾವು ಉಳಿಸಿಕೊಂಡಿಲ್ಲ : ಕೆ.ಫಣಿರಾಜ್

ದಶಕಗಳ ಹಿಂದೆ ನಡೆದಿರುವ ಜನಪರ ಚಳವಳಿಗಳ ಚೇತನವನ್ನು ನಾವು ಉಳಿಸಿಕೊಂಡಿಲ್ಲ. ಆದರೆ...