ಬೆಂಗಳೂರು | ಯುಎಪಿಎ ಕಾನೂನು ರದ್ದಾಗಬೇಕು: ಪ್ರಗತಿಪರ ಸಂಘಟನೆಗಳ ಒಕ್ಕೊರಲ ಆಗ್ರಹ

Date:

“ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಕಳೆದ ಹತ್ತು ವರ್ಷದಿಂದ ಅನೇಕ ಪ್ರಗತಿಪರ ಚಿಂತಕರನ್ನ ಕಠೋರ ಮತ್ತು ಅಪ್ರಜಾಪ್ರಭುತ್ವ ಕಾನೂನಾದ, ಕಾನೂನು ಬಾಹಿರ ಚಟುವಟಿಕೆ ತಡೆ (ಯುಎಪಿಎ) ಕಾಯ್ದೆ ಅಡಿ ಬಂಧಿಸಿ, ಜನಪರ ಕಾಳಜಿಯುಳ್ಳವರ ಬಾಯಿ ಮುಚ್ಚಿಸುತ್ತಿದೆ” ಎಂದು ಪ್ರಗತಿಪರ ಸಂಘಟನೆಗಳ ಮುಖಂಡರು ಆರೋಪಿಸಿದ್ದಾರೆ.

2010ರಲ್ಲಿ ಮಾತನಾಡಿದಕ್ಕಾಗಿ ಮಾನವ ಹಕ್ಕುಗಳ ಹೋರಾಟಗಾರ್ತಿ ಅರುಂಧತಿ ಮತ್ತು ಪ್ರೊ. ಶೇಖ್‌ ಶೌಕತ್‌ ಹುಸೇನ್‌ ಅವರ ಮೇಲೆ ಯುಎಪಿಎ ಕಾಯ್ದೆ ಹಾಕಿದ್ದನ್ನು ಖಂಡಿಸಿ, ಇಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಪ್ರಗತಿಪರ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

“ಕಾಶ್ಮೀರಿ ಜನರ ಸಮಸ್ಯೆಗಳ ಕುರಿತು 2010ರಲ್ಲಿ ಮಾತನಾಡಿದಕ್ಕಾಗಿ ಇಬ್ಬರ ಮೇಲೆ ಈಗ ಯುಎಪಿಎ ಅಡಿ ಕ್ರಮ ಜರುಗಿಸಬೇಕಾಗಿ ದೆಹಲಿಯ ಲೆಫ್ಟಿನೆಂಟ್ ರಾಜ್ಯಪಾಲ ವಿಕೆ. ಸಕ್ಸೇನಾ ದೆಹಲಿ ಪೋಲಿಸರಿಗೆ ಅನುಮತಿ ನೀಡಿರುವುದು ಖಂಡನೀಯ” ಎಂದು ಎಐಸಿಸಿಟಿಯು, ಎಐಪಿಡಬಲ್ಯೂಎ, ಎಐಎಸ್‌ ಎ, ಸಿಪಿಐಎಂಎಲ್‌, ಆರ್‌ ಐಎ ಸಂಘಟನೆಗಳು ಒಕ್ಕೊರಲ ದನಿಯಿಂದ ಗುರುವಾರ ಪ್ರತಿಭಟಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಯಾವುದೇ ಕಾನೂನಿನ ಪ್ರಕ್ರಿಯೆ ಇಲ್ಲದೆ ಕೇವಲ ಪ್ರಕರಣ ದಾಖಲಾದ ತಕ್ಷಣಕ್ಕೆ ವ್ಯಕ್ತಿಗಳನ್ನ ಬಂಧಿಸುವ ಈ ಕಾಯ್ದೆಯು ಅಸಾಂವಿಧಾನಿಕವಾದ್ದದ್ದು. ವ್ಯಕ್ತಿಯ ಮೂಲಭೂತ ಹಕ್ಕುಗಳನ್ನು ಕಸಿಯುತ್ತದೆ. ದಲಿತರು, ರೈತರು, ಮಹಿಳೆಯರು, ಅಲ್ಪಸಂಖ್ಯಾತರು ಮತ್ತು ವಿದಾರ್ಥಿಗಳ ಪರ ನಾವು ಸದಾ ದನಿ ಎತ್ತುತ್ತೇವೆ. ಅದು ನಮ್ಮ ಹಕ್ಕು. ಹತ್ತು ವರ್ಷಗಳಿಂದ ಯುಎಪಿಎ ಕಾಯ್ದೆಯಡಿ ಬಂಧಿಸಲಾಗಿರುವ ವಿದ್ಯಾರ್ಥಿ ನಾಯಕರು, ಹೋರಾಟಗಾರರು, ಪ್ರಗತಿಪರ ಚಿಂತಕರನ್ನ ಬಿಡುಗಡೆ ಮಾಡಬೇಕು” ಎಂದು ವಕೀಲ ಕ್ಲಿಫ್ಟನ್.‌ ಡಿ. ರೊಜಾರಿಯೊ ಆಗ್ರಹಿಸಿದರು.

“ಭೀಮಾ ಕೊರೆಂಗಾವ್‌ನಲ್ಲಿ ಕಾರ್ಮಿಕರು ಗುತ್ತಿಗೆ ಪದ್ಧತಿ ರದ್ದಾಗಬೇಕು ಎಂದು ಪ್ರತಿಭಟಿಸಿದ್ದ ಕಾರಣಕ್ಕಾಗಿ ಅವರ ಮೇಲೆ ಯುಎಪಿಎ ಅಡಿ ಕ್ರಮ ಜರುಗಿಸಿದ್ದರು. ಜನರಿಗೆ ಸಂವಿಧಾನದ ಅಡಿಯಲ್ಲಿ ಸರ್ಕಾರ ಮತ್ತು ಅದು ರೂಪಿಸುವ ನೀತಿಗಳ ವಿರುದ್ಧ ಪ್ರಶ್ನಿಸುವ ಹಕ್ಕಿದೆ. ಆದರೆ ಎಲ್ಲ ರಾಜಕೀಯ ಪಕ್ಷಗಳು ಈ ಹಕ್ಕನ್ನು ನಾನಾ ರೂಪದಲ್ಲಿ ಕಸಿಯುತ್ತಿದೆ. ದೇವನಹಳ್ಳಿಯಲ್ಲಿ ರೈತನಿಗೆ ಅನ್ಯಾಯವಾದರೆ 25 ಕಿಲೋ ಮೀಟರ್‌ ದೂರದಲ್ಲಿರುವ ಸ್ವಾತಂತ್ರ್ಯ ಉದ್ಯಾವನಕ್ಕೆ ಬಂದು ಪ್ರತಿಭಟಿಸಬೇಕಾಗಿದೆ. ಹೀಗೆ ಪ್ರತಿಭಟಿಸುವ ಹಕ್ಕನ್ನು ಕೂಡ ಜನರಿಂದ ಕಿತ್ತುಕೊಳ್ಳಲಾಗಿದೆ” ಎಂದು ಎಐಎಸ್‌ಎ ಸದಸ್ಯ ಶರತ್ ಬೇಸರ ವ್ಯಕ್ತಪಡಿಸಿದರು.

ಆಲ್ ಇಂಡಿಯಾ ಲಾಯರ್ಸ್ ಅಸೋಷಿಯೇಷನ್ ಫಾರ್ ಜಸ್ಟೀಸ್‌ನ ಸದಸ್ಯೆ ಶಿಲ್ಪಾ, ಬಹುತ್ವ ಕರ್ನಾಟಕದ ತನ್ವೀರ್, ಅರತ್ರಿಕಾ, ನರಸಿಂಹಮೂರ್ತಿ, ವಿನಯ್ ಕುಮಾರ್ ಮತ್ತಿತರು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ‘ಸಂವಾದ’ದಿಂದ ವೃಷಭಾವತಿ ನದಿ ಉಳಿಸಿ ಆಂದೋಲನ

ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಹೆಚ್ಚಾಗುತ್ತಿದೆ. ಜೊತೆಗೆ ನೀರಿನ ಮೂಲ ನದಿ, ಕೆರೆಗಳನ್ನು...

ರೈತನಿಗೆ ಅವಮಾನ | ಏಳು ದಿನ ಜಿ ಟಿ ಮಾಲ್‌ ಮುಚ್ಚಿಸಲು ರಾಜ್ಯ ಸರ್ಕಾರ ಕ್ರಮ

ರೈತರ ವಿಷಯದಲ್ಲಿ ಯಾರೇ ಅವಮಾನ ಮಾಡಿದರೂ ಸಹಿಸುವುದಿಲ್ಲ ಎಂದು ವಾರದ ಹಿಂದೆ...

ಯುಪಿ ಬಿಜೆಪಿಯಲ್ಲಿ ಯೋಗಿ-ಮೌರ್ಯ ನಡುವೆ ಗುದ್ದಾಟ; ಮೋದಿ-ಶಾ ಚರ್ಚೆ

ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ ತೀರಾ ಕಳಪೆ ಪ್ರದರ್ಶನ ನೀಡಿದೆ....

ಕನ್ನಡಿಗರಿಗೆ ಉದ್ಯೋಗ | ‘ಅಸ್ತು’ ಎಂದು ಹೆಜ್ಜೆ ಇಟ್ಟ ಸರ್ಕಾರ ದಿನ ಕಳೆಯುವುದರೊಳಗೇ ‘ಸುಸ್ತು’: ವಿಜಯೇಂದ್ರ ವ್ಯಂಗ್ಯ

ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ತಂದದ್ಯಾಕೆ? ತಡೆಹಿಡಿದಿದ್ದೇಕೆ? ಕನ್ನಡಿಗರ ಬದುಕಿನೊಂದಿಗೆ ಚೆಲ್ಲಾಟವೇಕೆ?...