ನಿಷ್ಠುರ ಮಾತುಗಾರ, ಸದಾ ಸತ್ಯ ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು: ಸಿಎಂ ಸಿದ್ದರಾಮಯ್ಯ ಬಣ್ಣನೆ

Date:

ನಿಷ್ಠುರ, ನೇರ ನಡೆ ನುಡಿಯ ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ವಸಂತ ಬಂಗೇರ ಅವರದ್ದಾಗಿತ್ತು. ನಾನು ಮತ್ತು ಬಂಗೇರ ಒಟ್ಟಿಗೆ ವಿಧಾನಸಭೆ ಪ್ರವೇಶಿಸಿದ್ದೆವು. ಅವತ್ತಿನಿಂದ ಅವರ ಉಸಿರಿನ ಕೊನೆ ಗಳಿಗೆಯವರೆಗೂ ನನ್ನ ಸ್ನೇಹಿತರಾಗಿದ್ದರು. ಇವರ ಅಗಲಿಕೆ ನನಗೆ ಅಪಾರ ದುಃಖ ತಂದಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement -

ಬೆಳ್ತಂಗಡಿ ನಡೆದ ಮಾಜಿ ಸಚಿವ ವಸಂತ ಬಂಗೇರ ಅವರ ಉತ್ತರ ಕ್ರಿಯೆ ಮತ್ತು ನುಡಿ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, “ಸತ್ಯ, ಬಡವರ ಪರ ಕಾಳಜಿ, ರಾಜಿ ರಹಿತ ಜನಪರ ಕೆಲಸಗಳ ಮೂಲಕ ತಮ್ಮ ವೈಯುಕ್ತಿಕ ಮತ್ತು ರಾಜಕೀಯ ಜೀವನವನ್ನು ಸಾರ್ಥಕಗೊಳಿಸಿಕೊಂಡವರು ಬಂಗೇರ ಅವರು ಜನ ಮಾನಸದಲ್ಲಿ ಶಾಶ್ವತವಾಗಿ ಉಳಿಯಲಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಬಂಗೇರ ಅವರು ತಮ್ಮ ಬದುಕಿನುದ್ದಕ್ಕೂ ವಿಶ್ವ ಮಾನವ ಮೌಲ್ಯವನ್ನು ಪಾಲಿಸಿದರು. ಬಂಗೇರ ಅವರು ನನ್ನ ಬಳಿಗೆ ಯಾವತ್ತೂ ವೈಯಕ್ತಿಕ ಕೆಲಸಗಳಿಗಾಗಿ ಬಂದಿಲ್ಲ. ಬಂದಾಗಲೆಲ್ಲಾ ಜನರ ಕೆಲಸಗಳಿಗಾಗಿ ಬೇಡಿಕೆ ಇಟ್ಟಿದ್ದರು. ಐದು ಬಾರಿ ಶಾಸಕರಾದರೂ ಮಂತ್ರಿ ಆಗಲು ಯಾವತ್ತೂ ಸಣ್ಣ ಲಾಭಿ ಕೂಡ ನಡೆಸಿದವರಲ್ಲ. ಹೀಗಾಗಿ ಇವರು ಅತ್ಯಂತ ಮಾದರಿ ರಾಜಕೀಯ ನಾಯಕರಾಗಿದ್ದರು” ಎಂದು ಬಣ್ಣಿಸಿದರು.

“2023 ರಲ್ಲೂ ಚುನಾವಣೆಯಲ್ಲಿ ಸ್ಪರ್ಧಿಸಲು ಮನವಿ ಮಾಡಿದರೂ ಅವರು ಒಪ್ಪಲಿಲ್ಲ. ಈ ಬಾರಿ ಸ್ಪರ್ಧಿಸಿದ್ದರೆ ಖಂಡಿತಾ ಗೆದ್ದು ಮಂತ್ರಿಯಾಗುತ್ತಿದ್ದರು. ವಸಂತ ಬಂಗೇರ ಅವರ ಸಾವಿನಿಂದ ರಾಜ್ಯ ರಾಜಕಾರಣ ಅತ್ಯಂತ ಬಡವಾಗಿದೆ. ಇವರ ಆರೋಗ್ಯ ಚೇತರಿಸಿಕೊಳ್ಳುತ್ತದೆ ಮತ್ತಷ್ಟು ಕಾಲ ನಮ್ಮ ಜೊತೆಗೆ ಇರುತ್ತಾರೆ ಎನ್ನುವ ಆಸೆ ಇತ್ತು. ಆದರೆ ನಮ್ಮನ್ನು ಅಗಲಿಬಿಟ್ಟಿರುವುದು ನನ್ನ ಪ್ರೀತಿಯ ಸ್ನೇಹಿತನನ್ನು ಕಳೆದುಕೊಂಡಂತಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

ಬಸ್ಟಾಂಡ್‌ಗೆ ಬಂಗೇರ ಹೆಸರಿಡಲು ಸರ್ಕಾರ ಸಿದ್ದ

“ಬೆಳ್ತಂಗಡಿ ಬಸ್‌ಸ್ಟಾಂಡ್‌ಗೆ ವಸಂತ ಬಂಗೇರ ಅವರ ಹೆಸರಿಡಲು ಸರ್ಕಾರ ಸಿದ್ದವಿದೆ. ಜೊತೆಗೆ ಅವರ ಪ್ರತಿಮೆ ವೃತ್ತದಲ್ಲಿ ಸ್ಥಾಪಿಸಬೇಕು ಎನ್ನುವ ಬೇಡಿಕೆಗೂ ಸರ್ಕಾರ ಸ್ಪಂದಿಸಲಿದೆ” ಎಂದು ಇದೇ ವೇಳೆ ಸಿದ್ದರಾಮಯ್ಯ ಭರವಸೆ ನೀಡಿದರು.

ಮಾಜಿ ಸಚಿವ ಜನಾರ್ದನ ಪೂಜಾರಿ, ಸ್ಪೀಕರ್ ಯು.ಟಿ.ಖಾದರ್ ಮತ್ತು ವಸಂತ ಬಂಗೇರ ಅವರ ಕುಟುಂಬದ ಸದಸ್ಯರು ಹಾಗೂ ಅಪಾರ ಸಂಖ್ಯೆಯ ಅಭಿಮಾನಿಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನರೇ ತೀರ್ಮಾನಿಸುತ್ತಾರೆ, ಇಸಿಐ ಅಲ್ಲ: ಗ್ಯಾನೇಶ್ ಕುಮಾರ್ ವಿರುದ್ಧ ಒಂದಾದ ಠಾಕ್ರೆ ಸಹೋದರರು

ಕೇಂದ್ರ ಚುನಾವಣಾ ಆಯೋಗ (ಇಸಿಐ) ಜಾರಿಗೆ ತಂದಿರುವ ಮತದಾರರ ಪಟ್ಟಿ ವಿಶೇಷ...

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...