ಬಾಂಗ್ಲಾದೇಶ | ಪ್ರತಿಭಟನಾಕಾರರ ಬೆದರಿಕೆ; ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ರಾಜೀನಾಮೆ

Date:

ಸ್ವಾತಂತ್ರ್ಯ ಹೋರಾಟಗಾರರ ಕುಟುಂಬಗಳಿಗೆ ನೀಡಲಾಗಿರುವ ಮೀಸಲಾತಿ ವಿರುದ್ಧ ಪ್ರತಿಭಟನೆ ನಡೆಯುತ್ತಿರುವ ಬಾಂಗ್ಲಾದೇಶದಲ್ಲಿ ಹೊಸ ಸಂಚಲನ ಉಂಟಾಗಿದೆ. ಪ್ರತಿಭಟನಾಕಾರರು ಸುಪ್ರೀಂ ಕೋರ್ಟ್ ಆವರಣದಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸಿದ್ದು, ಮುಖ್ಯ ನ್ಯಾಯಮೂರ್ತಿ ಒಬೈದುಲ್ ಹಸನ್ ಮತ್ತು ಮೇಲ್ಮನವಿ ವಿಭಾಗದ ನ್ಯಾಯಾಧೀಶರು ಶನಿವಾರ ಮಧ್ಯಾಹ್ನ 1 ಗಂಟೆಯೊಳಗೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದರು. ಇದಾದ, ಕೆಲವೇ ಗಂಟೆಗಳಲ್ಲಿ ಮುಖ್ಯ ನ್ಯಾಯಮೂರ್ತಿ ಹಸನ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಅವರು ರಾಜೀನಾಮೆ ನೀಡುವುದಕ್ಕೂ ಮುನ್ನ ಸುಪ್ರೀಂ ಕೋರ್ಟ್‌ ಆವರಣದಲ್ಲಿ ಪ್ರತಿಭಟನಾಕಾರರು ಭಾರೀ ಗದ್ದಲ ಸೃಷ್ಟಿಸಿದ್ದರು. ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಖ್ಯ ನ್ಯಾಯಮೂರ್ತಿ ಮತ್ತು ಮೇಲ್ಮನವಿ ವಿಭಾಗದ ನ್ಯಾಯಾಧೀಶರ ನಿವಾಸಗಳಿಗೆ ಮುತ್ತಿಗೆ ಹಾಕುವುದಾಗಿ ಬೆದರಿಕೆ ಹಾಕಿದ್ದರು.

ಶನಿವಾರ ಬೆಳಗ್ಗೆ, ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದ ಮಧ್ಯಂತರ ಸರ್ಕಾರದ ಯುವ ಮತ್ತು ಕ್ರೀಡಾ ಸಚಿವಾಲಯದ ಸಲಹೆಗಾರ ಆಸಿಫ್ ಮಹಮೂದ್ ಕೂಡ ಮುಖ್ಯ ನ್ಯಾಯಮೂರ್ತಿ ಒಬೈದುಲ್ ಹಸನ್ ಅವರು ಬೇಷರತ್ ರಾಜೀನಾಮೆ ನೀಡಬೇಕು. ನ್ಯಾಯಾಲಯದ ಎಲ್ಲ ವಿಚಾರಣೆ ಮತ್ತು ಸಭೆಗಳನ್ನು ನಿಲ್ಲಿಸಬೇಕು ಒತ್ತಾಯಿಸಿದ್ದರು ಎಂದು ಡೈಲಿ ಸ್ಟಾರ್ ವರದಿ ಮಾಡಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕಳೆದ ವರ್ಷ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡ ಒಬೈದುಲ್ ಹಸನ್ ಅವರು ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರ ನಿಷ್ಠಾವಂತರಾಗಿದ್ದಾರೆ ಎಂದು ಹೇಳಲಾಗಿದೆ.

ಸ್ವಾತಂತ್ರ್ಯ ಹೋರಾಟಗಾರರ ಕುಟುಂಬಗಳಿಗಿರುವ ಮೀಸಲಾತಿಯನ್ನು ವಿರೋಧಿಸಿ ಕಳೆದ ಕೆಲ ದಿನಗಳಿಂದ ಬಾಂಗ್ಲಾದೇಶದಲ್ಲಿ ವಿದ್ಯಾರ್ಥಿ-ಯುವಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ಹೋರಾಟವು ಹಿಂಸಾಚಾರಕ್ಕೆ ತಿರುಗಿದ್ದು, ಕನಿಷ್ಠ 400 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಪ್ರತಿಭಟನಾನಿರತ ವಿದ್ಯಾರ್ಥಿಗಳು ಸರ್ಕಾರಿ ಕಟ್ಟಡಗಳಿಗೆ ನುಗ್ಗಿ ರಾಷ್ಟ್ರೀಯ ಸ್ಮಾರಕಗಳನ್ನು ಧ್ವಂಸಗೊಳಿಸಿದ್ದಾರೆ.

ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದ ಬಳಿಕ, ಬ್ಲಾಂಗ್ಲಾ ಪ್ರಧಾನಿ ಶೇಕ್ ಹಸೀನಾ ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಅಲ್ಲದೆ, ದೇಶ ತೊರೆದಿದ್ದಾರೆ. ಅವರಿಗೆ ಭಾರತದಲ್ಲಿ ಆಶ್ರಯ ನೀಡಲಾಗಿದೆ. ತಮಗೆ ಆಶ್ರಯ ನೀಡುವಂತೆ ಅವರು ಬ್ರಿಟನ್ ಮತ್ತು ಅಮೆರಿಕಗಳಲ್ಲಿ ಮನವಿ ಮಾಡಿದ್ದರು. ಅವರ ಮನವಿಯನ್ನು ಎರಡೂ ದೇಶಗಳು ತಿರಸ್ಕರಿಸಿವೆ.

ಅವರ ರಾಜೀನಾಮೆಯ ಬಳಿಕ, ಬಾಂಗ್ಲಾ ಸೇನೆಯು ಮಧ್ಯಂತರ ಸರ್ಕಾರ ರಚಿಸಿದ್ದು, ನೊಬೆಲ್ ಶಾಂತಿ ಪ್ರಶಸ್ತಿ ವಿಜೇತ ಡಾ. ಮುಹಮ್ಮದ್ ಯೂನಸ್ ಅವರನ್ನು ಮುಖ್ಯಸ್ಥರನ್ನಾಗಿ ನೇಮಿಸಿದೆ. ಬಾಂಗ್ಲಾದಲ್ಲಿ ಹಿಂಸಾಚಾರವನ್ನು ನಿಯಂತ್ರಿಸಿ, ಕಾನೂನು ಮತ್ತು ಸುವ್ಯವಸ್ಥೆಯನ್ನು ತಹಬದಿಗೆ ತರುವುದಾಗಿ ಹೇಳಿಕೊಂಡಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಥಮ ಬಾರಿ ಬೆಂಬಲ ಬೆಲೆಯಲ್ಲಿ ನಾಲ್ಕು ಬೆಳೆ ಖರೀದಿ: ಸಚಿವ ಶಿವಾನಂದ ಪಾಟೀಲ

ಎಪಿಎಂಸಿ ಕಾಯ್ದೆ ಮರುಸ್ಥಾಪನೆಯಿಂದ ರೈತರಿಗೆ ಹೆಚ್ಚು ಅನುಕೂಲವಾಗಿದ್ದು, ಇತಿಹಾಸದಲ್ಲಿ ಇದೇ ಮೊದಲ...

ಕ್ರಿಸ್ಟಿಯಾನೊ ರೊನಾಲ್ಡೊ ಎಂಬ ದಾಖಲೆಗಳ ದಿಗ್ಗಜ; 900 ಗೋಲುಗಳ ಸರದಾರ

900 ಗೋಲುಗಳನ್ನು ಹೊಡೆದಿರುವ ಕ್ರಿಸ್ಟಿಯಾನೊ ರೊನಾಲ್ಡೊ, ಫುಟ್‌ಬಾಲ್‌ ಲೋಕದ ಜನಪ್ರಿಯ ಆಟಗಾರ....

ವಕ್ಫ್‌ ಬೋರ್ಡ್ ವತಿಯಿಂದ 15 ಜಿಲ್ಲೆಗಳಲ್ಲಿ ಮಹಿಳಾ ಕಾಲೇಜು ನಿರ್ಮಾಣ: ಸಚಿವ ಜಮೀರ್ ಅಹಮದ್ ಖಾನ್

ವಕ್ಫ್‌ ಬೋರ್ಡ್ ವತಿಯಿಂದ 15 ಜಿಲ್ಲೆಗಳಲ್ಲಿ ಮಹಿಳಾ ಕಾಲೇಜು ನಿರ್ಮಾಣಕ್ಕೆ...

ಸಿದ್ದರಾಮಯ್ಯ ರಾಜೀನಾಮೆ ಕೊಡಲಿದ್ದಾರೆ, ಸಿಎಂ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗಿದೆ: ವಿಜಯೇಂದ್ರ

ರಾಜ್ಯದ ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕಾದ ಸಂದರ್ಭದಲ್ಲಿ ಬಂದು ನಿಂತಿದ್ದಾರೆ. ಸಿಎಂ ಆಕಾಂಕ್ಷಿಗಳ...