ಬಿಜೆಪಿ ಪರ ತುತ್ತೂರಿ ಊದುವ ಪತ್ರಕರ್ತರ ಬಹಿಷ್ಕಾರ ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣವಲ್ಲ: ಸಿದ್ದರಾಮಯ್ಯ ತಿರುಗೇಟು

Date:

Advertisements
  • ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ನಿಷೇಧಿಸಿದ್ದು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ
  • ಮಾಧ್ಯಮಗಳ ಮೇಲಿನ ನೈಜ ದಾಳಿಗಳ ಪಟ್ಟಿ ಕೊಟ್ಟ ಸಿಎಂ ಸಿದ್ದರಾಮಯ್ಯ

ಪಕ್ಷವೊಂದು ಸುದ್ದಿ ಮಾಧ್ಯಮಕ್ಕೆ ಬರುವುದಿಲ್ಲ, ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಹೇಳುವುದು ಅಭಿವ್ಯಕ್ತಿ ಸ್ವಾತಂತ್ಯ್ರದ ಹರಣ ಅಲ್ಲ. ಪ್ರಧಾನಿ ನರೇಂದ್ರ ಮೋದಿ ಕುರಿತಾದ ಬಿಬಿಸಿ ಸಾಕ್ಷ್ಯಚಿತ್ರವನ್ನು ನಿಷೇಧಿಸಿದ್ದು ನಿಜವಾದ ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕೆಲವು ಟಿವಿ ನಿರೂಪಕರನ್ನು ಇಂಡಿಯಾ ಒಕ್ಕೂಟ ಬಹಿಷ್ಕರಿಸಿರುವ ಬಗ್ಗೆ ಸಮರ್ಥಿಸಿಕೊಂಡು ಟ್ವೀಟ್‌ ಮಾಡಿರುವ ಅವರು, “ಜೆ ಪಿ ನಡ್ಡಾ ಅವರೇ, ಮಾಧ್ಯಮಗಳ ಮೇಲಿನ ನೈಜ ದಾಳಿಗಳ ಪಟ್ಟಿ ನಾವು ಕೊಡುತ್ತೇವೆ. ಇದನ್ನೆಲ್ಲ ನೀವು ಮರೆತಿರಬಹುದು, ಆದರೆ ‘ಇಂಡಿಯಾ’ ಮರೆತಿಲ್ಲ” ಎಂದು ಕುಟುಕಿದ್ದಾರೆ.

ದೇಶದ ಪ್ರಧಾನಮಂತ್ರಿ ಮೋದಿಯವರು ಕಳೆದ ಹತ್ತು ವರ್ಷದಲ್ಲಿ ಒಂದೇ ಒಂದು ಪತ್ರಿಕಾಗೋಷ್ಠಿ ನಡೆಸದೇ ದೇಶದ ಎಲ್ಲ ಪತ್ರಕರ್ತರನ್ನು ಬಹಿಷ್ಕರಿಸಿರುವಾಗ ಒಂದು ಪಕ್ಷದ ತುತ್ತೂರಿಯಂತೆ ಕಾರ್ಯನಿರ್ವಹಿಸುತ್ತಾ, ಮಾಧ್ಯಮ ಧರ್ಮಕ್ಕೆ ದ್ರೋಹ ಬಗೆಯುತ್ತಿರುವ ಕೆಲವು ಪತ್ರಕರ್ತರ ಮೇಲೆ ಬಹಿಷ್ಕಾರ ಹೇರಿದ್ದನ್ನು ಪ್ರಶ್ನಿಸುವ ಯಾವ ನೈತಿಕತೆ ನಿಮಗಿದೆ ಹೇಳಿ” ಎಂದು ಪ್ರಶ್ನಿಸಿದ್ದಾರೆ.

Advertisements

ಸತ್ಯದ ವರದಿ ಮಾಡಿದ್ದಕ್ಕಾಗಿ ಬಂಧನಕ್ಕೊಳಗಾದ ಪತ್ರಕರ್ತರು, ಸತ್ಯದ ದನಿಯಾಗಿ ನಿಂತಿದ್ದಕ್ಕೆ ಮೋದಿ ಆಡಳಿತದಲ್ಲಿ ಕೊಲೆಯಾದ ಪತ್ರಕರ್ತರು ಹಾಗೂ ಪತ್ರಿಕಾ ಸ್ವಾತಂತ್ರ್ಯ, ಜಗತ್ತಿನಲ್ಲಿ ಭಾರತದ ಸ್ಥಾನ, ಅವಸಾನ ಬಗ್ಗೆ ಸಿಎಂ ಮಾಹಿತಿ ಹಂಚಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕರಾವಳಿಯ ಜನ ಹಿಂದುತ್ವದ ನಶೆಯಿಂದ ಹೊರಬರಲು ಇದು ʼಚೈತ್ರಕಾಲʼ

ಸತ್ಯದ ವರದಿ ಮಾಡಿದ್ದಕ್ಕಾಗಿ ಬಂಧನಕ್ಕೊಳಗಾದ ಪತ್ರಕರ್ತರು:

• ಸಿದ್ದಿಕ್‌ ಕಪ್ಪನ್‌
• ಮೊಹಮ್ಮದ್‌ ಝುಬೇರ್
• ಅಜಿತ್‌ ಓಝಾ
• ಜಸ್ಪಾಲ್‌ ಸಿಂಘ್‌
• ಸಜದ್‌ ಗುಲ್‌

ಸತ್ಯದ ದನಿಯಾಗಿ ನಿಂತಿದ್ದಕ್ಕೆ ಮೋದಿ ಆಡಳಿತದಲ್ಲಿ ಕೊಲೆಯಾದ ಪತ್ರಕರ್ತರು:

• ರಾಕೇಶ್‌ ಸಿಂಗ್‌ ಉತ್ತರ ಪ್ರದೇಶ, ಸರ್ಕಾರಿ ನಿಧಿ ಅವ್ಯವಹಾರ ಕುರಿತು ವರದಿ
• ಶುಭಂ ಮಣಿ ತ್ರಿಪಾಠಿ, ಉತ್ತರ ಪ್ರದೇಶ, ಮರಳು ದಂಧೆ ಕುರಿತು ವರದಿ
• ಜಿ ಮೋಸೆಸ್‌, ತಮಿಳುನಾಡು, ಗೋಮಾಳ ಅಕ್ರಮ ಮಾರಾಟ ಕುರಿತು ವರದಿ
• ಪರಾಗ್‌ ಭುಯಾನ್, ಅಸ್ಸಾಮ್‌, ಎಸ್‌ಐ ನೇಮಕಾತಿ ಹಗರಣ ಕುರಿತು ವರದಿ
• ಗೌರಿ ಲಂಕೇಶ್‌, ಕೋಮುವಾದ ವಿರೋಧಿಸಿದ್ದಕ್ಕೆ

ಪತ್ರಿಕಾ ಸ್ವಾತಂತ್ಯ್ರ: ಜಗತ್ತಿನಲ್ಲಿ ಭಾರತದ ಸ್ಥಾನ, ಅವಸಾನ..!!
2015 – 136ನೇ ಸ್ಥಾನ
2019 – 140ನೇ ಸ್ಥಾನ
2022 – 150ನೇ ಸ್ಥಾನ
2023 – 161ನೇ ಸ್ಥಾನ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಸಿದ್ದರಾಮಯ್ಯ. ನವರೆ ಸುಳ್ಳಿನ ಸರ್ದಾರ್ ಸ್ವಾರ್ಥಿಗಳಿದ್ದಿರಾ ದೇಶದಲ್ಲಿನ್ Govt Servent avar Salary manjur madri modalu,

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X