ಮನುಷ್ಯ ದ್ವೇಷವನ್ನು ಬಂಟ ಸಮುದಾಯ ಯಾವತ್ತೂ ಬೆಂಬಲಿಸಲ್ಲ: ಸಿಎಂ ಸಿದ್ದರಾಮಯ್ಯ

Date:

Advertisements
  • ತುಳು ಭಾಷೆಯಲ್ಲಿ ಮಾತು ಆರಂಭಿಸಿ ಸಭಿಕರನ್ನು ಥ್ರಿಲ್ಲಾಗಿಸಿದ ಸಿಎಂ
  • ಮುಂದಿನ ಬಜೆಟ್‌ನಲ್ಲಿ ಬಂಟರ ಅಭಿವೃದ್ಧಿ ನಿಗಮ ಘೋಷಣೆ: ಸಿಎಂ 

ಮನುಷ್ಯ ದ್ವೇಷವನ್ನು ಬಂಟ ಸಮುದಾಯ ಯಾವತ್ತೂ ಬೆಂಬಲಿಸುವುದಿಲ್ಲ. ವಿಶ್ವ ಮಾನವ ಸಂಸ್ಕೃತಿಯನ್ನು ಬಂಟ ಸಮುದಾಯ ಆಚರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಉಡುಪಿಯಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಆಯೋಜಿಸಿದ್ದ ವಿಶ್ವ ಬಂಟರ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ಬಂಟ ಸಮಯದಾಯದವರು ವಿಶ್ವದಾದ್ಯಂತ ವಿಸ್ತರಿಸಿ ಉದ್ಯಮಗಳನ್ನು ಆರಂಭಿಸಿದ್ದಾರೆ. ಸಮಾಜದ ಎಲ್ಲ ಕ್ಷೇತ್ರಗಳಲ್ಲೂ ತೊಡಗಿಸಿಕೊಂಡಿದ್ದಾರೆ. ಬಂಟ ಸಮುದಾಯದವರು ವಿಶಿಷ್ಟ ಸಂಸ್ಕೃತಿ, ಪರಂಪರೆ ಹೊಂದಿದ್ದು, ಕನ್ನಡ ಚರಿತ್ರೆ ಮತ್ತು ಸಂಸ್ಕೃತಿಗೆ ಅಪಾರ ಕೊಡುಗೆ ನೀಡಿದ್ದಾರೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

Advertisements

“ಬಂಟರು ಮತ್ತು ಮಂಗಳೂರು-ಉಡುಪಿ ಜಿಲ್ಲೆಯವರು ಉದ್ಯಮ ಸಾಹಸಿಗಳು. ವಿಶ್ವದ ಎಲ್ಲ ಕಡೆ ಹರಡಿದ್ದು ತಾವು ಹೋಗುವ ವಿಶ್ವದ ಎಲ್ಲಾ ಕಡೆ ಎಲ್ಲರ ಜತೆಗೂ ಸಹೃದಯತೆಯಿಂದ ಬೆರೆಯುತ್ತಾರೆ. ಇದು ಬಂಟ ಸಮುದಾಯದ ಹೆಗ್ಗಳಿಕೆ” ಎಂದರು.

“ಕ್ರೀಡೆ, ಸಿನಿಮಾ, ಶಿಕ್ಷಣ, ಹೋಟೆಲ್ ಉದ್ಯಮ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಬಂಟರು ತಮ್ಮ ಚಾಪು ಮೂಡಿಸಿದ್ದಾರೆ. ಎಲ್ಲೇ ಹೋದರು ತಮ್ಮ ಭಾಷೆ, ಸಂಸ್ಕೃತಿಯನ್ನು ಪಸರಿಸುತ್ತಾರೆ. ತುಳು ಮೇಲಿನ ನಿಮ್ಮಗಳ ಪ್ರೇಮ ಮತ್ತು ಅಕ್ಕರೆ ಅನುಕರಣೀಯ. ಇದು ಹೆಮ್ಮೆಯ ವಿಚಾರ. ಪ್ರತಿಯೊಬ್ಬರು ಅವರವರ ಮಾತೃಭಾಷೆಗೆ ಗೌರವ ಕೊಡುವುದರಿಂದ ನಮ್ಮ ಸಂಸ್ಕೃತಿಯ ಹಿರಿಮೆ ಹೆಚ್ಚಿಸುತ್ತದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹುಲಿಯುಗುರು ಲಾಕೆಟ್‌ ; ಸಂತೋಷನಿಗೇನೋ ಸುಣ್ಣ, ಸೆಲೆಬ್ರಿಟಿಗಳಿಗೇಕೆ ಬೆಣ್ಣೆ?

“ಬಂಟ ಸಮಾಜ ಜಾತ್ಯತೀತ ಸಮುದಾಯ. ಸರ್ವರನ್ನೂ ಸಮಾನ ಪ್ರೀತಿಯಿಂದ ಕಾಣುವ ಮಾನವೀಯ ಮೌಲ್ಯವನ್ನು ಆಚರಿಸುತ್ತಿದೆ. ಇದು ಹೆಮ್ಮೆಯ ಸಂಗತಿ. ಮನುಷ್ಯ ದ್ವೇಷವನ್ನು ಬಂಟ ಸಮುದಾಯ ಯಾವತ್ತೂ ಬೆಂಬಲಿಸುವುದಿಲ್ಲ. ಇದು ಅತ್ಯಂತ ಶ್ಲಾಘನೀಯ” ಎಂದರು.‌

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕನ್ಯಾನ ಸದಾಶಿವ ಶೆಟ್ಟಿ, ತೋನ್ಸೆ ಆನಂದ ಶೆಟ್ಟಿ, ಶಶಿರೇಖಾ ಆನಂದ ಶೆಟ್ಟಿ, ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಎಂ.ಆರ್.ಜಿ ಗ್ರೂಪ್ ನ ಕೆ.ಪ್ರಕಾಶ್ ಶೆಟ್ಟಿ, ಮಜಿ ಸಚಿವ ರಮಾನಾಥ ರೈ, ಮಾಜಿ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ, ಶಾಸಕರುಗಳಾದ ಅಶೋಕ್ ಕುಮಾರ್ ರೈ, ಯಶಪಾಲ್ ಸುವರ್ಣ , ಗಣೇಶ್ ಹುಕ್ಕೇರಿ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಮುಂಬೈ ಕ್ರಿಕೆಟ್ ಅಸೋಸಿಯೇಷನ್ ನ ಡಾ.ಪಿ.ವಿ.ಶೆಟ್ಟಿ, ಸಂತೋಷ್ ಗುರು, ಕಾಂಗ್ರೆಸ್ ಮುಖಂಡ ಐವನ್ ಡಿಸೋಜಾ, ಅಭಯ ಚಂದ್ರ ಜೈನ್, ಜಿ.ಎ.ಭಾವ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X