ಅನ್ನದಾತರು ಬರುವ ರಸ್ತೆಗಳಿಗೆ ಮುಳ್ಳುತಂತಿ; ರಾವಣನನ್ನೇ ಮೀರಿಸಿದ ಮೋದಿ ಆಡಳಿತ: ಸಿದ್ದರಾಮಯ್ಯ ವಾಗ್ದಾಳಿ

Date:

Advertisements

ಅನ್ನದಾತರು ಬರುವ ರಸ್ತೆಗಳಿಗೆ ಮೋದಿ ಸರ್ಕಾರ ಮುಳ್ಳುತಂತಿಯ ಬೇಲಿ ಹಾಕಿದೆ, ರಸ್ತೆಗಳಿಗೆ ಮೊಳೆ ಹೊಡೆದಿದೆ. ರಾಮಮಂದಿರ ಉದ್ಘಾಟಿಸಿದವರ ಆಡಳಿತ ರಾವಣನನ್ನೇ ಮೀರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಕಟುವಾಗಿ ಟೀಕಿಸಿದ್ದಾರೆ.

ಈ ಕುರಿತು ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, “ರಾವಣನಿಗೆ ತನ್ನ ವೈರಿ ಶ್ರೀರಾಮ ಲಂಕೆಗೆ ಬರುವುದು ಗೊತ್ತಿದ್ದರೂ ಆತ ಬರುವ ಹಾದಿಗೆ ಬೇಲಿ ಹಾಕಲಿಲ್ಲ” ಎಂದಿದ್ದಾರೆ.

ರೈತರು ‘ದೆಹಲಿ ಚಲೋ’ ಮೆರವಣಿಗೆ ಮುಂದುವರಿಸಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಬಿಗಿ ಭದ್ರತೆ ಮುಂದುವರಿಸಲಾಗಿದೆ. ಗಡಿ ಪ್ರದೇಶಗಳ ರಸ್ತೆಗಳಲ್ಲಿ ಭಾರೀ ಸಂಖ್ಯೆಯಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದೆ.

Advertisements

ಹರಿಯಾಣದ ಸಿಂಘು, ಟಿಕ್ರಿ ಗಡಿ ಪ್ರದೇಶದಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಹರಿಯಾಣ ಗಡಿ ಮತ್ತು ಉತ್ತರಪ್ರದೇಶ ಘಾಜಿಪುರ ಗಡಿ ರಸ್ತೆಗಳಲ್ಲಿ ಬಹುಪದರ ಕಾಂಕ್ರಿಟ್ ತಡೆಗೋಡೆ, ಕಬ್ಬಿಣದ ಮೊಳೆಗಳು, ಕಂಟೇನ‌ರ್ ಗೋಡೆಗಳನ್ನು ನಿರ್ಮಿಸಲಾಗಿದೆ.

ದೆಹಲಿಯಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳುತ್ತಿದ್ದ ರಾಜ್ಯದ ರೈತರನ್ನು ಮಧ್ಯಪ್ರದೇಶ ಸರ್ಕಾರ ಬಂಧಿಸಿ ಜೈಲಿನಲ್ಲಿ ಇಟ್ಟಿದೆ. ಈ ವಿಚಾರಕ್ಕೂ ಖಾರವಾಗಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, “ಇದು ಸಂವಿಧಾನ ಬಾಹಿರ ಕ್ರಮ. ನಾಡಿನ ರೈತರನ್ನು ಈ ಕೂಡಲೇ ಬಿಡುಗಡೆ ಮಾಡಬೇಕು” ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ರೈತ ಸಂಘಟನೆಗಳು ಕರೆಕೊಟ್ಟಿದ್ದ ‘ದೆಹಲಿ ಚಲೋ’ ಪ್ರತಿಭಟನೆಗೆ ಹೊರಟಿದ್ದ ಕರ್ನಾಟಕದ ರೈತರನ್ನು ಭೋಪಾನ್‌ನಲ್ಲಿ ಬಂಧಿಸಿದ್ದ ಪೊಲೀಸರು, ಇದೀಗ, ಅವರನ್ನು ಮಧ್ಯಪ್ರದೇಶ ಗಡಿಯಲ್ಲಿ ಬಿಟ್ಟು ಹೋಗಿದ್ದಾರೆ. ಗುರುವಾರ ಮುಂಜಾನೆ ಮಧ್ಯಪ್ರದೇಶ-ಉತ್ತರ ಪ್ರದೇಶ ಗಡಿಯಲ್ಲಿ ಯಾವುದೇ ಮಾಹಿತಿ ನೀಡದೆ ರೈತರನ್ನು ರೈಲು ಹತ್ತಿಸಿದ್ದಾರೆ ಎಂದು ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X