ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಮತ್ತು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ನಿರಂತರವಾಗಿ ವಾಗ್ದಾಳಿ ನಡೆಸುತ್ತಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ.
ಹಿರಿಯ ನಾಯಕರುಗಳು, ಬಿಜೆಪಿ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡಿ ಶಿಸ್ತು ಉಲ್ಲಂಘನೆ ಮಾಡಿದ ಕಾರಣಕ್ಕೆ ಯತ್ನಾಳ್ ಅವರಿಗೆ ಎರಡು ಬಾರಿ ಶೋಕಾಸ್ ನೋಟಿಸ್ ನೀಡಲಾಗಿತ್ತು. ಆದರೆ ಈ ನೋಟಿಸ್‌ಗೆ ಸರಿಯಾದ ಉತ್ತರ ಬಾರದ ಕಾರಣ ಯತ್ನಾಳ್ ಅವರನ್ನು ಉಚ್ಚಾಟಿಸಲಾಗಿದೆ.
ಇದನ್ನು ಓದಿದ್ದೀರಾ? ಬಸವಣ್ಣನ ಬಗ್ಗೆ ಹೇಳಿಕೆ | ಯತ್ನಾಳ್ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ; ಭಾವಚಿತ್ರ ದಹನ
ಯತ್ನಾಳ್ ಅವರನ್ನು ಬಿಜೆಪಿಯ ಪ್ರಾಥಮಿಕ ಸದಸ್ಯತ್ವದಿಂದಲೇ ಒಟ್ಟು ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ ಎಂದು ವರದಿಯಾಗಿದೆ.
ಕೊನೆಯದಾಗಿ ಫೆಬ್ರವರಿ 10ರಂದು ಯತ್ನಾಳ್ ಬಿಜೆಪಿ ಶೋಕಾಸ್ ನೋಟಿಸ್‌ಗೆ ಉತ್ತರಿಸಿದ್ದರು. ಆದರೆ ಈ ಸಮಜಾಯಿಷಿಯನ್ನು ಒಪ್ಪದ ಹೈಕಮಾಂಡ್ ಯತ್ನಾಳ್ ಅವರನ್ನು ಉಚ್ಚಾಟಿಸಿದೆ.
ಈ ಬೆಳವಣಿಯು ರಾಜ್ಯದಲ್ಲಿ ಬಿಜೆಪಿಯಲ್ಲಿ ಭಾರೀ ಬದಲಾವಣೆಗೆ ಕಾರಣವಾಗಬಹುದು. ಈಗಾಗಲೇ ತನ್ನದೇ ಆದ ಬಣವನ್ನು ಹೊಂದಿರುವ ಯತ್ನಾಳ್ ಪ್ರತ್ಯೇಕ ಪಕ್ಷ ಕಟ್ಟುವ ಸಾಧ್ಯತೆಯೂ ಇದೆ.
