ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ ಉಚ್ಚಾಟನೆ

Date:

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಮತ್ತು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ನಿರಂತರವಾಗಿ ವಾಗ್ದಾಳಿ ನಡೆಸುತ್ತಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ.

- Advertisement -

ಹಿರಿಯ ನಾಯಕರುಗಳು, ಬಿಜೆಪಿ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡಿ ಶಿಸ್ತು ಉಲ್ಲಂಘನೆ ಮಾಡಿದ ಕಾರಣಕ್ಕೆ ಯತ್ನಾಳ್ ಅವರಿಗೆ ಎರಡು ಬಾರಿ ಶೋಕಾಸ್ ನೋಟಿಸ್ ನೀಡಲಾಗಿತ್ತು. ಆದರೆ ಈ ನೋಟಿಸ್‌ಗೆ ಸರಿಯಾದ ಉತ್ತರ ಬಾರದ ಕಾರಣ ಯತ್ನಾಳ್ ಅವರನ್ನು ಉಚ್ಚಾಟಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಇದನ್ನು ಓದಿದ್ದೀರಾ? ಬಸವಣ್ಣನ ಬಗ್ಗೆ ಹೇಳಿಕೆ | ಯತ್ನಾಳ್ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ; ಭಾವಚಿತ್ರ ದಹನ

ಯತ್ನಾಳ್ ಅವರನ್ನು ಬಿಜೆಪಿಯ ಪ್ರಾಥಮಿಕ ಸದಸ್ಯತ್ವದಿಂದಲೇ ಒಟ್ಟು ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ ಎಂದು ವರದಿಯಾಗಿದೆ.

ಕೊನೆಯದಾಗಿ ಫೆಬ್ರವರಿ 10ರಂದು ಯತ್ನಾಳ್ ಬಿಜೆಪಿ ಶೋಕಾಸ್ ನೋಟಿಸ್‌ಗೆ ಉತ್ತರಿಸಿದ್ದರು. ಆದರೆ ಈ ಸಮಜಾಯಿಷಿಯನ್ನು ಒಪ್ಪದ ಹೈಕಮಾಂಡ್ ಯತ್ನಾಳ್ ಅವರನ್ನು ಉಚ್ಚಾಟಿಸಿದೆ.

ಈ ಬೆಳವಣಿಯು ರಾಜ್ಯದಲ್ಲಿ ಬಿಜೆಪಿಯಲ್ಲಿ ಭಾರೀ ಬದಲಾವಣೆಗೆ ಕಾರಣವಾಗಬಹುದು. ಈಗಾಗಲೇ ತನ್ನದೇ ಆದ ಬಣವನ್ನು ಹೊಂದಿರುವ ಯತ್ನಾಳ್ ಪ್ರತ್ಯೇಕ ಪಕ್ಷ ಕಟ್ಟುವ ಸಾಧ್ಯತೆಯೂ ಇದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...