ಬಸವ ಜಯಂತಿ | ಮನುವಾದಿಗಳು ಬಸವತತ್ವದ ವಿರೋಧಿಗಳು: ಸಿಎಂ ಸಿದ್ದರಾಮಯ್ಯ

Date:

ಮನುವಾದಿಗಳು ಬಸವತತ್ವದ ವಿರೋಧಿಗಳು. ಮನುಷ್ಯತ್ವ ಬಸವವಾದಿ ಶರಣರ ಪ್ರಾಣ. ಮನುವಾದಿಗಳು ಬೇಕೋ, ಬಸವವಾದಿಗಳು ಬೇಕೋ ನೀವೇ ನಿರ್ಧರಿಸಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು

- Advertisement -

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬಸವ ಜಯಂತಿ ಪ್ರಯುಕ್ತ ಕೂಡಲಸಂಗಮದಲ್ಲಿ ಆಯೋಜಿಸಿದ್ದ “ಶರಣರ ವೈಭವ-2025” ನ್ನು ಉದ್ಘಾಟಿಸಿ, ಬಸವ ಶ್ರೀ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ವಚನ ಎಂದರೆ ಮಾತು. ಶರಣರ ವಚನ ಜನರ ಭಾಷೆಯಲ್ಲಿವೆ. ಆದ್ದರಿಂದ ವಚನ ಸಾಹಿತ್ಯ, ಜನರ ಸಾಹಿತ್ಯ ಆಗಿದೆ. ಹಿಂದೆ ಸಂಸ್ಕೃತ ಕಲಿತರೆ ಕಲಿಯುವ ಶೂದ್ರರ ಕಿವಿಗೆ ಕಾದ ಸೀಸ ಉಯ್ಯುವ ಶಿಕ್ಷೆ ಇತ್ತು. ಇದರಿಂದಲೇ ಭಾರತೀಯ ಶೂದ್ರ ಸಮುದಾಯ ಅಕ್ಷರ ಸಂಸ್ಕೃತಿಯಿಂದ ವಂಚಿತರಾದರು. ಶಿಕ್ಷಣ ಇಲ್ಲದ ಕಾರಣಕ್ಕೆ ಅಸಮಾನತೆ ಬೆಳೆಯಿತು” ಎಂದರು.

“ನಮ್ಮ‌ ಸಂವಿಧಾನ ವೈರುದ್ಯತೆ ಇರುವ ಸಮಾಜದಲ್ಲಿ ಜಾರಿ ಆಗುತ್ತಿದೆ. ಪ್ರಜಾಪ್ರಭುತ್ವದ ಕಾರಣದಿಂದ ರಾಷ್ಟ್ರಪತಿಯಿಂದ ಪೌರ ಕಾರ್ಮಿಕರವರೆಗೂ ಎಲ್ಲರಿಗೂ ಒಂದೇ ಮತ ಎನ್ನುವ ರಾಜಕೀಯ ಸ್ವಾತಂತ್ರ್ಯ ಸಿಕ್ಕಿದೆ. ಆದರೆ, ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯ ಇನ್ನೂ ಸಿಕ್ಕಿಲ್ಲ. ಇದು ಸಿಗದೆ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥ ಇಲ್ಲ” ಎಂದು ಅಂಬೇಡ್ಕರ್ ಅವರ ಮಾತನ್ನು ಉಲ್ಲೇಖಿಸಿದರು.

“ಇವನಾರವ.. ಇವನಾರವ.. ಎಂದು ವಚನ ಹೇಳೋದು, ಈ ಕಡೆ ಬಂದು ಅವನು ಯಾವ ಜಾತಿ ಎಂದು ಕೇಳೋದು ನಡೆಯುತ್ತಿದೆ. ಹೀಗಾದರೆ ಬಸವಣ್ಣನವರ ಆಶಯದಂತೆ ಜಾತಿ ನಿರ್ಮೂಲನೆ ಆಗಲ್ಲ. ಬಸವಣ್ಣನವರು ಮತ್ತು ಶರಣರು ಕರ್ಮಸಿದ್ಧಾಂತದ ವಿರುದ್ಧ ಹೋರಾಟ ನಡೆಸಿದರು. ಆದರೆ ಈಗ ಶಿಕ್ಷಣ ಪಡೆದವರೇ ಜನ್ಮ ಜನ್ಮಗಳಲ್ಲಿ ನಂಬಿಕೆ ಇಟ್ಟು ಕರ್ಮಸಿದ್ಧಾಂತ ಆಚರಿಸುತ್ತಿದ್ದಾರೆ. ಒಂದು ಕಡೆ ಬಸವ ಜಯಂತಿ ಆಚರಿಸೋದು ಮತ್ತೊಂದು ಕಡೆ ಕರ್ಮಸಿದ್ಧಾಂತ ಆಚರಿಸೋದು ಮಾಡಿದರೆ ಬಸವ ಜಯಂತಿಗೆ ಅರ್ಥ ಇಲ್ಲ” ಎಂದರು.

“ಗೋರುಚ ಅವರ ಸಮಿತಿ ವರದಿಯಂತೆ ಅನುಭಾವಿಗಳ ಅನುಭವ ಮಂಟಪ ಮಾಡುವ ಕೆಲಸ ಆಗಿದ್ದು ನಮ್ಮಿಂದ. ಇದನ್ನು ಈ ವರ್ಷವೇ ಪೂರ್ಣಗೊಳಿಸುತ್ತೇವೆ. ಬಸವಣ್ಣರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದ್ದು ನಾವೇ. ಅಕ್ಕಮಹಾದೇವಿ ವಿಶ್ವ ವಿದ್ಯಾಲಯ ನಾಮಕಾರಣ ಮಾಡಿದ್ದು ನಾವೇ” ಎಂದು ಹೇಳಿದರು.

“ಮನ್‌ ಕಿ ಬಾತ್ ನಲ್ಲಿ ಚರ್ಚೆ ಇಲ್ಲ. ಏಕಮುಖವಾಗಿ ಹೇಳಿದ್ದನ್ನು ಕೇಳಬೇಕು ಎನ್ನುವ ಧೋರಣೆ ಇದೆ. ಇದು ಸರ್ವಾಧಿಕಾರಿ ಲಕ್ಷಣ. ಪ್ರಜಾಪ್ರಭುತ್ವದಲ್ಲಿ ಚರ್ಚೆ ಇರುತ್ತದೆ. ಸರ್ವಾಧಿಕಾರದಲ್ಲಿ ಚರ್ಚೆಗೆ ಅವಕಾಶ ಇಲ್ಲ. ಏಕಮುಖವಾಗಿ “ನಾನು ಹೇಳಿದ್ದನ್ನು ನೀವು ಕೇಳಿ” ಎನ್ನುವುದಷ್ಟೆ. “ಮನ್ ಕಿ ಬಾತ್” ರೀತಿ ನಾನು ಹೇಳ್ತೀನಿ, ನೀವು ಕೇಳಿ ಅನ್ನೋದು ಸರ್ವಾಧಿಕಾರಿ ಧೋರಣೆ” ಎಂದು ಟೀಕಿಸಿದರು.

ಸಚಿವರಾದ ಎಂ.ಬಿ.ಪಾಟೀಲ್, ಆರ್.ಬಿ.ತಿಮ್ಮಾಪುರ, ಶಿವರಾಜ್ ತಂಗಡಗಿ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...