ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಅಗಲಿದ ಗಣ್ಯರಿಗೆ ಬೊಮ್ಮಾಯಿ ಸಂತಾಪ

Date:

ವ್ಯಕ್ತಿಯ ಸ್ಥಾನಮಾನದಿಂದ ಗೌರವ ದೊರೆಯುವುದಿಲ್ಲ. ಅವರ ಸಾಮಾಜಿಕ ನಡೆ ನುಡಿ ಜನರೊಂದಿಗೆ ಬೆರೆಯುವ ರೀತಿ ಅವರನ್ನು ನಾಯಕರಾಗಿ ಮಾಡುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.

- Advertisement -

ವಿಧಾನಸಭೆಯಲ್ಲಿ ಸಂತಾಪ ಸೂಚಕ ಸಭೆಯಲ್ಲಿ ಮಾತನಾಡಿದ ಅವರು, ಮಾಜಿ ಸಂಸದ ಧ್ರುವನಾರಾಯಣ ಅವರು ಕ್ಷೇತ್ರದ ಜನರ ಜೊತೆ ಒಡನಾಟ ಹೊಂದಿದ್ದರು. ಲೋಕಸಭೆಯಲ್ಲಿ ಪ್ರಭಾವಶಾಲಿಯಾಗಿ ರಾಜ್ಯದ ಪರವಾಗಿ ಮಾತನಾಡಿದ್ದರು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಡಿ. ಬಿ ಇನಾಮ್ ದಾರ್ ಅತ್ಯಂತ ಸ್ನೇಹಜೀವಿಯಾಗಿದ್ದರು. ಅವರು ಓದಿಕೊಂಡಿದ್ದರು. ಅವರು ಗಣಿ ಸಚಿವರಿದ್ದಾಗ ಇಲ್ಲಿಯ ಗಣಿ ಬಗ್ಗೆ ಚರ್ಚೆ ನಡೆಯುತ್ತಿರುವಾಗ ಅವರು ಚಂದ್ರನಲ್ಲಿ ಗಣಿಗಾರಿಕೆ ಬಗ್ಗೆ ಮಾತನಾಡಿದ್ದರು. ಇತ್ತೀಚೆಗೆ ಪೇಪರ್ ನಲ್ಲಿ ಚಂದ್ರನಲ್ಲಿ ಗಣಿಗಾರಿಕೆ ನಡೆಯುವ ಬಗ್ಗೆ ಸುದ್ದಿ ಬಂದಿದೆ.

ಇನಾಮ್ ದಾರ್ ಅವರು ಮಲಪ್ರಭ ಸಕ್ಕರೆ ಕಾರ್ಖಾನೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು‌. ಸಕ್ಕರೆ ಕಾರ್ಖಾನೆ ಮುಚ್ಚುವ ಸಂದರ್ಭದಲ್ಲಿ ಅದನ್ನು ಉಳಿಸಿ ಬೆಳೆಸಿದವರು ಎಂದರು.

ಯು. ಆರ್ ಸಭಾಪತಿ ಅತ್ಯಂತ ಕ್ರಿಯಾಶೀಲ ವ್ಯಕ್ತಿಯಾಗಿದ್ದರು. ವೆಂಕಟಸ್ವಾಮಿ ಶಾಸಕರಾಗಿ ಕೆಲಸ ಮಾಡಿದ್ದರು. ಉಮಾಕಾಂತ್ ಬೋಲ್ಕರ್ ಅವರ ಹೆಸರು ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಹೆಚ್ಚು ಚರ್ಚೆ ಇತ್ತು. ಧರ್ಮಪ್ಪ ಅವರು ಬಂಗಾರಪ್ಪ ಅವರ ಜೊತೆ ಇದ್ದವರು. ಹೋರಾಟದ ಮೂಲಕ ಬಂದವರು, ಭೂ ಸುಧಾರಣೆ, ಕಾಗೋಡು ಸತ್ಯಾಗ್ರಹದಲ್ಲಿ ಪಾಲ್ಗೊಂಡು ಜೈಲು ಶಿಕ್ಷೆ ಅನುಭವಿಸಿದ್ದರು. ಅವರ ಹೋರಾಟ ನಮಗೆ ಆದರ್ಶವಾಗಲಿ ಎಂದರು.

ಈ ಸುದ್ದಿ ಓದಿದ್ದೀರಾ? ಬಿಟ್‌ ಕಾಯಿನ್‌ ಹಗರಣ | ಮರು ತನಿಖೆಗೆ ರಾಜ್ಯ ಸರ್ಕಾರ ಆದೇಶ

ಖ್ಯಾತ ನೇತ್ರ ತಜ್ಞ ಡಾ‌ ಭುಜಂಗಶೆಟ್ಟಿ ಅವರು ನಮಗೆಲ್ಲರಿಗೂ ಚಿರಪರಿಚಿತರಾಗಿದ್ದರು. ನಮ್ಮಲ್ಲಿ ಅನೇಕ ವೈದ್ಯರಿದ್ದಾರೆ. ಆದರೆ ಕೆಲವೇ ಕೆಲವರು ದಾಖಲೆಯ ಕೆಲಸ ಮಾಡಿದ್ದಾರೆ. ಡಾ. ಎಂ.ಸಿ. ಮೋದಿಯವರು ಕಣ್ಣಿನ ಶಸ್ತ್ರ ಚಿಕಿತ್ಸೆ ನೀಡುವ ಮೂಲಕ ದಾಖಲೆ ಮಾಡಿದಂತೆ ಡಾ. ಭುಜಂಗಶೆಟ್ಟಿ ಅವರು ದಾಖಲೆಯ ಶಸ್ತ್ರಚಿಕಿತ್ಸೆ ಮಾಡಿದ್ದರು. ತುಮಕೂರಿನಲ್ಲಿ ಸುಸಜ್ಜಿತ ಕಣ್ಣಿನ ಆಸ್ಪತ್ರೆ ತೆರೆದಿದ್ದು, ಅದು ಸಂಪೂರ್ಣ ಉಚಿತವಾಗಿದೆ. ಅವರು ನಮ್ಮನ್ನು ಅಕಾಲಿಕವಾಗಿ ಅಗಲಿದ್ದಾರೆ. ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿರುವ ಬೃಹತ್...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ ನಂಬಿಕೆಯ ಬಿಕ್ಕಟ್ಟು

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ....

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ನವಿ ಪಿಳ್ಳೈಗೆ ಒಲಿದ ಶಾಂತಿ ಪುರಸ್ಕಾರ

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು...

ನಮ್ಮ‌ ಪ್ರಸ್ತಾಪಗಳನ್ನು ರಾಷ್ಟ್ರಪತಿ ನಿರಾಕರಿಸಿದ್ದು ಅಚ್ಚರಿ ಮೂಡಿಸಿದೆ, ಸಾಕ್ಷ್ಯ ಕೇಳಿದ್ದಾರೆ – ಕೊಡುತ್ತೇವೆ: ರಾಹುಲ್ ಗಾಂಧಿ

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಿರುವ ಕುರಿತು ನಾವು ಎತ್ತಿರುವ ವಿಷಯವನ್ನು...