ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ

Date:

ವಿಧಾನ ಪರಿಷತ್‌ ಸಭಾಪತಿ ಹುದ್ದೆಗೆ ಬಸವರಾಜ ಹೊರಟ್ಟಿ ಶುಕ್ರವಾರ ರಾಜೀನಾಮೆ ಸಲ್ಲಿಸಿದ್ದಾರೆ. ಯಾವುದೇ ಒತ್ತಡವಿಲ್ಲದೆ ಸ್ವಯಂ ಇಚ್ಛೆಯಿಂದಲೇ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

- Advertisement -

ರಾಜೀನಾಮೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಹೊರಟ್ಟಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಈ ವಿಷಯವಾಗಿ ಚರ್ಚೆ ನಡೆಸಿದ್ದೇನೆಂದು ತಿಳಿಸಿದ್ದಾರೆ. ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಸಲಹೆ ನೀಡಿದ್ದು, ಅದರಂತೆ ಹುದ್ದೆ ತ್ಯಜಿಸಿದ್ದೇನೆ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ರಾಜೀನಾಮೆಗೆ ಮುನ್ನ ಗುರುವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಬಸವರಾಜ ಹೊರಟ್ಟಿ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಮೂಲಗಳ ಪ್ರಕಾರ, ವಿಧಾನ ಪರಿಷತ್‌ ಸಭಾಪತಿ ಹುದ್ದೆಗೆ ಕಾಂಗ್ರೆಸ್ ಎಂಎಲ್‌ಸಿ ಸಲೀಂ ಅಹಮದ್ ಅವರ ಹೆಸರನ್ನು ಪಕ್ಷವು ಪರಿಗಣಿಸಿರುವ ಹಿನ್ನೆಲೆಯಲ್ಲಿ ಹೊಸ ಆಯ್ಕೆಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಹೊರಟ್ಟಿ ಅವರಿಗೆ ರಾಜೀನಾಮೆ ನೀಡುವಂತೆ ಕಾಂಗ್ರೆಸ್‌ ನಾಯಕರು ಮನವಿ ಮಾಡಿದ್ದರು ಎಂದು ತಿಳಿದುಬಂದಿದೆ.

horatti 4

ಸಭೆಯಲ್ಲಿ, ಸುಮಾರು 45 ವರ್ಷಗಳ ಸಾರ್ವಜನಿಕ ಜೀವನದಲ್ಲಿ ಯಾವುದೇ ಕಳಂಕವಿಲ್ಲದೆ ರಾಜಕೀಯ ನಡೆಸಿರುವ ಬಸವರಾಜ ಹೊರಟ್ಟಿ ಅವರ ವಿರುದ್ಧ ಅವಿಶ್ವಾಸ ನಿರ್ಣಯ ತರಬೇಕಾದ ಪರಿಸ್ಥಿತಿ ನಿರ್ಮಾಣವಾಗಬಾರದು ಎಂಬ ಕಾರಣದಿಂದ ಗೌರವಪೂರ್ವಕವಾಗಿ ಹುದ್ದೆ ತ್ಯಜಿಸುವಂತೆ ಪಕ್ಷದ ನಾಯಕರು ವಿನಂತಿಸಿದ್ದರು ಎಂದು ಹೇಳಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬರಗಾಲ ಪ್ಯಾಕೇಜ್ 1000 ಕೋಟಿ ರೂ. ಘೋಷಣೆ ಸೇರಿ ಇತರೆ ಬೇಡಿಕೆ ಈಡೇರಿಕೆಗೆ ಕೆಪಿಆರ್‌ಎಸ್‌ ಆಗ್ರಹ

ರಾಜ್ಯ ಸರ್ಕಾರ ವಿಶೇಷ ಅಧಿವೇಶನದಲ್ಲಿ ಕಲಬುರಗಿ ಸಂಪೂರ್ಣ ಬರ ಪೀಡಿತ ಪ್ರದೇಶವೆಂದು...

ಮರಾಠಾ ಸಮುದಾಯದ ಸಮಗ್ರ ಸಮೀಕ್ಷೆಗೆ ಡಿಜಿಟಲ್ ಆ್ಯಪ್

ಕರ್ನಾಟಕದಲ್ಲಿರುವ ಮರಾಠಾ ಸಮುದಾಯದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ರಾಜಕೀಯ ಸ್ಥಿತಿಗತಿಗಳನ್ನು...

ಬಿಡದಿ ಟೌನ್‌ಶಿಪ್ ವಿರುದ್ಧ ಹೋರಾಟ: ಉಪವಾಸನಿರತ ಮೂವರು ರೈತರು ತೀವ್ರ ಅಸ್ವಸ್ಥ

ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಜಿಬಿಐಟಿ – ಬಿಡದಿ ಟೌನ್‌ಶಿಪ್‌) ಯೋಜನೆ...

ದೆಹಲಿಯಲ್ಲಿ ನಿಲ್ಲದ ಅತ್ಯಾಚಾರ ಕೃತ್ಯ; ಪೊಲೀಸ್‌ ಹೆಸರಿನಲ್ಲಿ ಬಾಲಕಿ ಮೇಲೆ ಮೂವರು ಕಾಮುಕರಿಂದ ಸಾಮೂಹಿಕ ಅತ್ಯಾಚಾರ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು/ಹೆಣ್ಣು ಮಕ್ಕಳ ಮೇಲಿನ ಅಪರಾಧಗಳ ಸರಣಿ ಮುಂದುವರಿದಿದೆ....