ಕಾಂಗ್ರೆಸ್‌ನಲ್ಲಿ ನಿಲ್ಲದ ಮುಖ್ಯಮಂತ್ರಿ ಅಭ್ಯರ್ಥಿ ಕೂಗು, ‘ನಾನೂ ಸಿಎಂ ಆಗುವೆ’ ಎಂದ ಬಸವರಾಜ ರಾಯರೆಡ್ಡಿ

Date:

ಖಾಲಿ ಇಲ್ಲದ ಸಿಎಂ ಕುರ್ಚಿಗಾಗಿ ಕ್ಷುಲ್ಲಕ ರಾಜಕಾರಣದಲ್ಲಿ ಮುಳುಗೇಳಿ, ವ್ಯರ್ಥ ಹೇಳಿಕೆ ಕೊಡುವ ನಾಯಕರ ಸಂಖ್ಯೆ ಹೆಚ್ಚುತ್ತಿದೆ. ಮುಖ್ಯಮಂತ್ರಿ ಅವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಕೂಡ ತಾವೂ ಮುಖ್ಯಮಂತ್ರಿ ಆಕಾಂಕ್ಷಿ ಎಂದು ಹೇಳಿಕೆ ನೀಡಿದ್ದಾರೆ.

- Advertisement -

ಕೊಪ್ಪಳ ನಗರದಲ್ಲಿ ಮಾತನಾಡಿದ ಅವರು, “ರಾಜ್ಯದಲ್ಲಿ ಮುಖ್ಯಮಂತ್ರಿಯಾಗಲು ಕೆಲವರು ಆಸೆ ಪಡುತ್ತಿದ್ದಾರೆ. ಆದರೆ ಬೇರೆಯವರಿಗೆ ಸಿಎಂ ಸ್ಥಾನ ಕೊಡುವುದಾದರೆ ನನಗೂ ಕೊಡಿ. ನಾನು ಪಕ್ಷದಲ್ಲಿ ಹಿರಿಯ ಇದ್ದೇನೆ. ಕಲ್ಯಾಣ ಕರ್ನಾಟಕ ಭಾಗ ಪರಿಗಣಿಸಿದರೆ ಸಿಎಂ ಸ್ಥಾನದಲ್ಲಿ ನಾನೇ ಮುಂಚೂಣಿಯಲ್ಲಿರುವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಆರ್‌ ವಿ ದೇಶಪಾಂಡೆ ಮುಖ್ಯಮಂತ್ರಿ ಸ್ಥಾನದ ಕುರಿತು ನೀಡಿದ ಹೇಳಿಕೆಯಲ್ಲಿ ಏನು ತಪ್ಪಿದೆ? ನಾನು ಕೂಡ ಲಿಂಗಾಯತ ನಾಯಕ. ಬಿ ಆರ್‌ ಪಾಟೀಲ್‌ ಮತ್ತು ನಾನು ಹಿರಿಯರಿದ್ದೇವೆ. ಲಿಂಗಾಯತ ಸಮುದಾಯಕ್ಕೆ ಸಿಎಂ ಸ್ಥಾನ ಕೊಡುವುದಾದರೆ ನನಗೆ ಕೊಡಲಿ” ಎಂದು ಹೇಳಿದರು.

ಹೈಕಮಾಂಡ್ ಬಯಸಿದ್ರೆ ನಾನೂ ಸಿಎಂ ಆಗುವೆ: ಸಚಿವ ಶರಣಬಸಪ್ಪ ದರ್ಶನಾಪುರ

ಯಾದಗಿರಿಯಲ್ಲಿ ಮಾತನಾಡಿದ ಸಚಿವ ಶರಣಬಸಪ್ಪ ದರ್ಶನಾಪುರ, “ಹೈಕಮಾಂಡ್ ಹೇಳಿದದರೆ ನಾನು ಸಿಎಂ ಆಗುತ್ತೇನೆ. ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗು ಅಂದರೆ ಸಿಎಂ ಆಗುವೆ. ಮನುಷ್ಯ ಅಂದಮೇಲೆ ಎಲ್ಲರಿಗೂ ಆಸೆಗಳು ಇರುತ್ತದೆ. ಆಸೆ ಇಲ್ಲದೆ ಇರೋರು ಮನುಷ್ಯನೇ ಅಲ್ಲ. ಆದರೆ, ಸದ್ಯಕ್ಕೆ ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ” ಎಂದರು.

2023ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ, ಕಾಂಗ್ರೆಸ್ ಪಕ್ಷ ಬಹುಮತ ಗಳಿಸಿದಾಗ, ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ನಡುವೆ ಮುಖ್ಯಮಂತ್ರಿ ಕುರ್ಚಿಗಾಗಿ ಪೈಪೋಟಿ ನಡೆದು, ಕೊನೆಗೆ ಸಿದ್ದರಾಮಯ್ಯ ಅವರಿಗೆ ಸಿಎಂ ಪಟ್ಟ ಸಿಕ್ಕಿತು.

ಕೆಪಿಸಿಸಿ ಅಧ್ಯಕ್ಷರಾಗಿದ್ದು, ಪಕ್ಷ ಬಹುಮತ ಗಳಿಸಿದಾಗಲೂ ಮುಖ್ಯಮಂತ್ರಿ ಪಟ್ಟ ಸಿಗದೆ ಡಿಸಿಎಂ ಸ್ಥಾನಕ್ಕೆ ತಾತ್ಕಾಲಿಕವಾಗಿ ತೃಪ್ತಿಪಟ್ಟುಕೊಂಡಿರುವ ಡಿ ಕೆ ಶಿವಕುಮಾರ್ ಅವರು ಈಗಲೂ ಸಿಎಂ ಆಗುವ ಪ್ರಯತ್ನದ ಹಾದಿಯಲ್ಲೇ ಇದ್ದಾರೆ.

ಆದರೆ ಮುಡಾ ಪ್ರಕರಣ ಹಿನ್ನೆಲೆಯಲ್ಲಿ ಡಿ ಕೆ ಶಿವಕುಮಾರ್ ಮೊದಲ್ಗೊಂಡು ಹಿರಿಯ ನಾಯಕ ಆರ್‌ ವಿ ದೇಶಪಾಂಡೆ, ಡಾ. ಜಿ. ಪರಮೇಶ್ವರ್, ಸತೀಶ್ ಜಾರಕಿಹೊಳಿ, ಎಂ.ಬಿ. ಪಾಟೀಲ್ ವರೆಗೆ ‘ನಾನೂ ಮುಖ್ಯಮಂತ್ರಿ ಅಭ್ಯರ್ಥಿ’ ಎನ್ನುವುದು ಸಾಮಾನ್ಯವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...