ದಿಢೀರ್‌ ಆಗಿ ಸಿಎಂ ಬೊಮ್ಮಾಯಿ ಭೇಟಿ ಮಾಡಿದ ರಮೇಶ್ ಜಾರಕಿಹೊಳಿ

Date:

  • ಕ್ಷೇತ್ರದ ಕುರಿತು ಚರ್ಚಿಸಿರುವೆ ಎಂದ ರಮೇಶ್ ಜಾರಕಿಹೊಳಿ
  • ಮಹೇಶ್ ಕುಮಟಳ್ಳಿ ಪರ ಬ್ಯಾಟ್‌ ಬೀಸಿರುವ ಗೋಕಾಕ್ ಶಾಸಕ

ಇಂದು (ಮಾರ್ಚ್‌ 26) ಬಿಜೆಪಿ ಕೋರ್‌ ಸಮಿತಿ ಸಭೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಅವರು ದಿಢೀರ್‌ ಆಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಚರ್ಚಿಸಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ.

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾದ ಹೊತ್ತಿನಲ್ಲಿ ರಾಜಕೀಯ ನಾಯಕರ ನಡುವೆ ಟಿಕೆಟ್‌ ಹಂಚಿಕೆ ವಿಚಾರ ಭಾರೀ ಸದ್ದು ಮಾಡುತ್ತಿದೆ. ಅಥಣಿ ವಿಧಾನಸಭಾ ಕ್ಷೇತ್ರದ ಟಿಕೆಟ್‌ ವಿಚಾರವಾಗಿ ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ರಮೇಶ್ ಜಾರಕಿಹೊಳಿ, “ಮುಖ್ಯಮಂತ್ರಿಗಳ ಜೊತೆಗೆ ಕ್ಷೇತ್ರದ ಕುರಿತು ಚರ್ಚೆ ಮಾಡಿದ್ದೇನೆ. ಅಥಣಿ ಕ್ಷೇತ್ರದ ಟಿಕೆಟ್ ಹಂಚಿಕೆಯ ನಿರ್ಧಾರವನ್ನು ಹೈಕಮಾಂಡ್‌ ತೆಗೆದುಕೊಳ್ಳಲಿದೆ” ಎಂದು ಹೇಳಿದ್ದಾರೆ.

ಅಥಣಿ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಹೇಶ ಕುಮಟಳ್ಳಿ ಪರವಾಗಿ ಬ್ಯಾಂಟಿಗ್ ಮಾಡಲು ಆಗಮಿಸಿರುವ ಸಾಧ್ಯತೆಗಳೆ ಹೆಚ್ಚು ಎನ್ನಲಾಗಿದೆ. ಈ ಹಿಂದೆಯೂ ರಮೇಶ್ ಜಾರಕಿಹೊಳಿ ಅವರು ಮಹೇಶ್ ಕುಮಟಳ್ಳಿ ಅವರಿಗೆ ಟಿಕೆಟ್ ನೀಡುವಂತೆ ಹೈಕಮಾಂಡ್ ಮತ್ತು ರಾಜ್ಯ ನಾಯಕರಿಗೆ ಒತ್ತಡ ಹೇರಿದ್ದರು.

ಇದೇ ವೇಳೆ ಮೀಸಲಾತಿ ಹಂಚಿಕೆ ಕುರಿತು ಪ್ರತಿಕ್ರಿಯಿಸಿದ ಜಾರಕಿಹೊಳಿ, “ಮೀಸಲಾತಿ ಹಂಚಿಕೆ ಒಳ್ಳೆಯ ಕಾರ್ಯವಾಗಿದೆ. ಹಿಂದುಳಿದವರ ಮೀಸಲಾತಿ ಕಸಿದುಕೊಂಡಿಲ್ಲ” ಎಂದಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಬ್ರ್ಯಾಂಡ್‌ ಹೆಸರು ಬಳಸಿ ನಕಲಿ ಬಟ್ಟೆ ತಯಾರು: ಸಿಸಿಬಿ ದಾಳಿ

ಅರ್ಮಾನಿ, ಲಿವೈಸ್, ಅಲ್ಲೆನ್ ಸೊಲ್ಲಿ, ಬುರ್ಬೆರಿ ಲೆದರ್ ಟ್ಯಾಗ್ಸ್, ಪೋಲೊ, ಎಲ್​ಪಿ...

ಮೈತ್ರಿ ಕಗ್ಗಂಟು | ಪ್ರತಾಪ್ ಸಿಂಹಗೆ ಬಿಜೆಪಿ ಟಿಕೆಟ್ ಸಿಗುವುದೇ ಡೌಟು!

ಲೋಕಸಭಾ ಚುನಾವಣೆಗಾಗಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಮಾಡಿಕೊಂಡಿವೆ. ರಾಜ್ಯದಲ್ಲಿ...

ಕಲಬುರಗಿ | ಕೆಇಎ ಪರೀಕ್ಷಾ ಅಕ್ರಮ ಪ್ರಕರಣ; ಇಬ್ಬರು ಪ್ರಾಂಶುಪಾಲರ ಬಂಧನ

ಕಳೆದ ಅಕ್ಟೋಬರ್‌ 28 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ...

ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್ ಸ್ಥಾಪನೆ: ಸಿದ್ದರಾಮಯ್ಯ ಭರವಸೆ

ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಹೇಳಿಕೆ ಸ್ಥಳದ ಅಭಾವವಿರುವ...