ಪ್ರತಾಪ್ ಸಿಂಹ ವಿರುದ್ಧ ಆಧಾರ ರಹಿತ ಆರೋಪ; ಕಾಂಗ್ರೆಸ್‌ ವಕ್ತಾರನ ವಿರುದ್ಧ ಪ್ರಕರಣ ದಾಖಲಿಸಲು ಕೋರ್ಟ್‌ ಸೂಚನೆ

Date:

ಸಂಸದ ಪ್ರತಾಪ್‌ ಸಿಂಹ ಅವರು ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಕಾಮಗಾರಿಯಲ್ಲಿ ಅಕ್ರಮವಾಗಿ ಹಣ ಸಂಪಾದಿದ್ದಾರೆ ಎಂದು ಆರೋಪಿಸಿದ್ದ ಕಾಂಗ್ರೆಸ್‌ ವಕ್ತಾರ ಎಂ ಲಕ್ಷ್ಮಣ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಬೆಂಗಳೂರಿನ 32ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ. ಅಲ್ಲದೆ, ಐಪಿಸಿ ಸೆಕ್ಷನ್ 499, 500 ಮತ್ತು 503ರ ಅಡಿಯಲ್ಲಿ ಪ್ರಕರಣ ದಾಖಲಿಸಲು ಸೂಚಿಸಿದೆ.

- Advertisement -

ಪ್ರತಾಪ್ ಸಿಂಹ ಅವರು ಎಕ್ಸ್‌ಪ್ರೆಸ್ವವೇ ನಿರ್ಮಾಣದ ಸಮಯದಲ್ಲಿ ಅಕ್ರಮವಾಗಿ 60 ಕೋಟಿ ರೂ. ಸಂಪಾದಿಸಿದ್ದಾರೆ. ಆಗ ಹಣವನ್ನು ಕೊಡಗಿನ ಬೇನಾಮಿ ಕಂಪನಿಯಲ್ಲಿ ಹೂಡಿಕೆ ಮಾಡಿದ್ದಾರೆ. ಅವರ ವಿರುದ್ಧ ಐಟಿ, ಇಡಿಗೆ ದೂರು ಸಲ್ಲಿಸುತ್ತೇನೆ ಎಂದು ಲಕ್ಷ್ಮಣ್‌ ಹೇಳಿದ್ದರು. ಅಲ್ಲದೆ, ಕಳೆದ ವರ್ಷ ಡಿಸೆಂಬರ್ 13ರಂದು ಇಬ್ಬರು ಸಂಸತ್‌ಗೆ ನುಗ್ಗಿದ್ದ ಘಟನೆಯಲ್ಲಿ ಪ್ರತಾಪ್ ಸಿಂಹ ಪಾತ್ರವಿದೆ. ಇಬ್ಬರು ಯುವಕರಿಗೆ ಪ್ರತಾಪ್ ಸಿಂಹ ತರಬೇತಿ ನೀಡಿದ್ದರು. ಅದರ ವಿಡಿಯೋ ನನ್ನ ಬಳಿಯಿದೆ. ಅದನ್ನು ಪೊಲೀಸರಿಗೆ ನೀಡುತ್ತೇನೆ ಎಂದೂ ಲಕ್ಷ್ಮಣ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಲಕ್ಷ್ಮಣ್ ವಿರುದ್ಧ ಸಂಸದ ಪ್ರತಾಪ್ ಸಿಂಹ ನ್ಯಾಯಾಲಯದಲ್ಲಿ ಮಾನನಷ್ಟದ ದೂರು ದಾಖಲಿಸಿದ್ದರು. ದೂರಿನಲ್ಲಿ, “ನನ್ನ ವಿರುದ್ಧ ಲಕ್ಷ್ಮಣ್ ಮಾಡಿರುವ ಆರೋಪ ಸಂಬಂಧ ವಿಡಿಯೋವನ್ನು ಪೊಲೀಸರಿಗೆ ನೀಡುವುದಾಗಿ ಹೇಳಿದ್ದರು. ಆದರೆ, ಈವರೆಗೆ ಯಾವುದೇ ವಿಡಿಯೋವನ್ನು ನೀಡಿಲ್ಲ. ನನ್ನ ವರುದ್ಧ ಅನಗತ್ಯವಾಗಿ ಆರೋಪ ಮಾಡುತ್ತಿದ್ದಾರೆ. ನನ್ನ ಬಗ್ಗೆ ಜನರಲ್ಲಿ ತಪ್ಪು ಭಾವಸೆ ಸೃಷ್ಟಿಸುತ್ತಾ, ತೇಜೋವಧೆ ಮಾಡುತ್ತಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಮನವಿ ಮಾಡಿದ್ದರು.

ದೂರಿನ ವಿಚಾರಣೆ ನಡೆಸಿರುವ ನ್ಯಾಯಾಲಯವು, ಲಕ್ಷ್ಮಣ್‌ ವಿರುದ್ಧದ ಆರೋಪಗಳಿಗೆ ಅರ್ಜಿದಾರರು ಪುರಾವೆಗಳನ್ನು ಒದಗಿಸಿದ್ದು, ಲಕ್ಷ್ಮಣ್ ವಿರುದ್ಧ ಮಾನನಷ್ಟ ಮೊಕದ್ದಮೆ ಮತ್ತು ಕ್ರಿಮಿನಲ್ ಪ್ರಕರಣ ದಾಖಲಿಸಿ, ಕಾನೂನು ಪ್ರಕ್ರಿಯೆ ಆರಂಭಿಸುವುದು ಸೂಕ್ತವಾಗಿದೆ ಎಂದು ಹೇಳಿದೆ. ಪ್ರಕರಣ ದಾಖಲಿಸಲು ಸೂಚಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ದೂರಿದ್ದ ಎಎಪಿ ಶಾಸಕ ಅಮಾನತು

ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...