ಚುನಾವಣಾ ಖರ್ಚಿಗಾಗಿ ಬಿಬಿಎಂಪಿ ಬಜೆಟ್ ಮಂಡನೆ; ಮೋಹನ್ ದಾಸರಿ ಆರೋಪ

Date:

Advertisements

“ಕಳೆದ ನಾಲ್ಕು ವರ್ಷಗಳಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸದಸ್ಯರಿಲ್ಲದೇ ಅಧಿಕಾರಿಗಳೇ ಬಜೆಟ್ ಮಂಡನೆ ಮಾಡುತ್ತಿರುವುದು ನಾಚಿಕೆಗೇಡಿನ ವಿಚಾರ. ಜನಪ್ರತಿನಿಧಿಗಳು ಇಲ್ಲದಿದ್ದರೂ ಚುನಾವಣಾ ಖರ್ಚಿಗಾಗಿ ಅಧಿಕಾರಿಗಳಿಂದ ಬಜೆಟ್ ಮಂಡನೆ ಮಾಡಿಸಲಾಗಿದೆ” ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಆರೋಪಿಸಿದ್ದಾರೆ.

ಬಿಬಿಎಂಪಿ ಬಜೆಟ್‌ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮೋಹನ್ ದಾಸರಿ, “ಇದು ಯಾವುದೇ ಅಭಿವೃದ್ಧಿಗಾಗಿ ಮಾಡುತ್ತಿರುವ ಬಜೆಟ್ ಅಲ್ಲ, ಕೇವಲ ಚುನಾವಣಾ ಖರ್ಚಿಗಾಗಿ ಬಜೆಟ್ ಮಂಡನೆ ಮಾಡಲಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಈ ಬಾರಿ ₹12,369.46 ಕೋಟಿ ಗಾತ್ರದ ಬಜೆಟ್ ಮಂಡನೆ ಮಾಡಲಾಗಿದೆ. ಬ್ರ್ಯಾಂಡ್ ಬೆಂಗಳೂರಿಗೆ ₹1,580 ಕೋಟಿ ಮೀಸಲಿಡಲಾಗಿದೆ. ನಗರದಲ್ಲಿ ವೈಟ್ ಟಾಪಿಂಗ್ ರಸ್ತೆಗೆ ₹800 ಕೋಟಿ ನೀಡಲಾಗಿದೆ. ವೈಟ್ ಟಾಪಿಂಗ್ ರಸ್ತೆಗಳ ಕಾಮಗಾರಿ ಕಳಪೆಯಾಗಿದೆ ಎಂದು ನಾವು ಹೋರಾಟ ಮಾಡುತ್ತಿದ್ದೇವೆ. ಈ ಸಂಬಂಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಆದರೆ, ಹಣ ಕೊಳ್ಳೆಹೊಡೆಯಲೆಂದೇ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಮಾತ್ರ ದುಬಾರಿ ವೆಚ್ಚದ ವೈಟ್ ಟಾಪಿಂಗ್ ರಸ್ತೆಗಳಿಗೆ ನೂರಾರು ಕೋಟಿ ವೆಚ್ಚ ಮಾಡುತ್ತಿದ್ದಾರೆ” ಎಂದು ಹೇಳಿದರು.

Advertisements

“ಬಿಬಿಎಂಪಿ ಬಜೆಟ್‌ನಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಖಾಸಗಿ ಶಾಲೆಗಳ ಮಾಫಿಯಾಗೆ ಅಧಿಕಾರಿಗಳು, ರಾಜಕಾರಣಿಗಳು ಬೆಂಬಲವಾಗಿ ನಿಂತಿದ್ದು, ಸರ್ಕಾರಿ ಶಾಲೆಗಳನ್ನು ಮುಗಿಸುವ ಹುನ್ನಾರ ಇದಾಗಿದೆ” ಎಂದು ಹೇಳಿದರು.

“ಆರೋಗ್ಯ ಕ್ಷೇತ್ರವನ್ನು ಕೂಡ ಬಿಬಿಎಂಪಿ ಕಡೆಗಣಿಸಿದೆ. ಬಡ, ಮಧ್ಯಮ ವರ್ಗದವರು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಸಾಧ್ಯವಿಲ್ಲದಂತಹ ಸ್ಥಿತಿ ನಿರ್ಮಾಣವಾಗಿದೆ. ಆರೋಗ್ಯ ಸೌಲಭ್ಯ ಹೆಚ್ಚಿಸಬೇಕಿದ್ದ ಬಿಬಿಎಂಪಿ ಜನರ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಧೋರಣೆ ಹೊಂದಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಎಮ್‌ಎಇಎಫ್‌ ಮುಚ್ಚಲು ಕೇಂದ್ರ ಆದೇಶ; ಶಿಕ್ಷಣ ತಜ್ಞರ ಖಂಡನೆ

“ಆದಾಯ ಹೆಚ್ಚಿಸಲು ಆಸ್ತಿ ತೆರಿಗೆಯನ್ನು ಹೆಚ್ಚಿಸುವ ಮೂಲಕ ಜನಸಾಮಾನ್ಯರ ಮೇಲೆ ಬರೆ ಎಳೆದಿದೆ. ಕುಡಿಯಲು ಸಮರ್ಪಕವಾಗಿ ನೀರಿಲ್ಲ, ರಸ್ತೆಗುಂಡಿ ಮುಚ್ಚಿಲ್ಲ, ಅಭಿವೃದ್ಧಿ ಮಾಡಲು ಆಗದಿದ್ದರೂ, ಜನಸಾಮಾನ್ಯರ ಮೇಲೆ ಆರ್ಥಿಕ ಹೊರೆ ಹೆಚ್ಚಿಸಲಾಗಿದೆ” ಎಂದರು.

“ನಗರದಲ್ಲಿ ಟ್ರಾಫಿಕ್ ಸಮಸ್ಯೆ ದಿನದಿಂದ ದಿನ ಹೆಚ್ಚಾಗುತ್ತಿದೆ. ಟ್ರಾಫಿಕ್ ಸಮಸ್ಯೆಯನ್ನು ಕಡಿಮೆ ಮಾಡಲು ಬಜೆಟ್‌ನಲ್ಲಿ ಯಾವುದೇ ಕ್ರಮಗಳ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಇವರಿಗೆ ಜನರ ಸಮಸ್ಯೆ ಬಗೆಹರಿಸುವುದು ಬೇಕಾಗಿಲ್ಲ. ಕೇವಲ ಭ್ರಷ್ಟಾಚಾರ ಮಾಡುವುದು ಮುಖ್ಯವಾಗಿದೆ” ಎಂದು ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ....

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X