ಬಿಬಿಎಂಪಿ ಚುನಾವಣೆ ತಯಾರಿ; ಪಕ್ಷ ಪ್ರಮುಖರೊಂದಿಗೆ ಎಚ್‌ಡಿಕೆ ಸಭೆ

Date:

Advertisements
  • ಬಿಡದಿ ತೋಟದ ಮನೆಯಲ್ಲಿ ಸಭೆ ನಡೆಸಿದ ಕುಮಾರಸ್ವಾಮಿ
  • ಬಿಬಿಎಂಪಿ ಚುನಾವಣೆಗೆ ತಯಾರಿ ಆರಂಭಿಸಿದ ಜೆಡಿಎಸ್

ಮುಂಬರುವ ಬಿಬಿಎಂಪಿ ಚುನಾವಣೆಗೆ ಜೆಡಿಎಸ್ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನ 28 ಕ್ಷೇತ್ರಗಳ ಪ್ರಮುಖರೊಂದಿಗೆ ಇಂದು ಮಹತ್ವದ ಸಮಾಲೋಚನೆ ನಡೆಸಿದರು.

ಬಿಡದಿಯ ತೋಟದಲ್ಲಿ ಕರೆದಿದ್ದ ಈ ಸಭೆಯಲ್ಲಿ ಪಕ್ಷ ಸಂಘಟನೆ ಹಾಗೂ ಪಾಲಿಕೆ ಚುನಾವಣೆಯ ಬಗ್ಗೆ ಎಚ್‌ ಡಿ ಕುಮಾರಸ್ವಾಮಿ ಅವರು ಮುಖಂಡರಿಗೆ ಕೆಲ ಗಂಭೀರ ಸೂಚನೆ ನೀಡಿದರು.

ವಿಧಾನಸಭೆ ಚುನಾವಣೆಯ ಸೋಲಿನ ಕಾರಣಗಳನ್ನು ಮುಂದಿಟ್ಟುಕೊಂಡು ಕೆಲ ಮುಖಂಡರನ್ನು ತರಾಟೆಗೆ ತೆಗೆದುಕೊಂಡ ಎಚ್ಡಿಕೆ, ಪಕ್ಷದೊಳಗೆ ಗುಂಪುಗಾರಿಕೆ ಬೇಡ, ಕೆಲಸ ಮಾಡುವವರಷ್ಟೇ ಬೇಕು, ಯಾವುದೇ ಕಾರಣಕ್ಕೂ ಗುಂಪುಗಾರಿಕೆ ಸಹಿಸುವ ಪ್ರಶ್ನೆ ಇಲ್ಲ ಎಂದರು.

Advertisements

ಮುಂದುವರೆದು ಮಾತನಾಡಿದ ಅವರು, ಯಾರು ಯಾರನ್ನೂ ಮೆಚ್ಚಿಸುವ ರೀತಿಯಲ್ಲಿ ಕೆಲಸ ಮಾಡುವ ಅಗತ್ಯವಿಲ್ಲ, ಪಕ್ಷವನ್ನು ಇನ್ನೂ ಅಧೋಗತಿಗೆ ತಳ್ಳುವುದು ಬೇಡ. ಪಕ್ಷದ ನೆಲೆ ಇರುವ ವಾರ್ಡುಗಳಲ್ಲಿ ಉತ್ತಮವಾಗಿ ಕೆಲಸ ಮಾಡಿ. ಜನರ ಸಂಪರ್ಕದಲ್ಲಿರಿ ಹಾಗೂ ಅವರಲ್ಲಿ ವಿಶ್ವಾಸ ಮೂಡಿಸಿ ಎಂದು ತಾಕೀತು ಮಾಡಿದರು.

ಪ್ರತಿ ವಾರ್ಡಿನ, ಪ್ರತಿ ಮತಗಟ್ಟೆಯಲ್ಲಿ ಪಕ್ಷದ ಕಾರ್ಯಕರ್ತರನ್ನು ಬೆಳೆಸಿ, ಜನರು ಹೆಚ್ಚು ಹೆಚ್ಚು ಪಕ್ಷ ಸೇರಿಸಿಕೊಳ್ಳುವ ವಾತಾವರಣವನ್ನು ಸೃಷ್ಟಿ ಮಾಡಿ. ಜನರಲ್ಲಿ ಪಕ್ಷದ ಪರ ಒಲವು ವ್ಯಕ್ತವಾಗುವ ರೀತಿಯಲ್ಲಿ ಕೆಲಸ ಮಾಡಿ, ಇದೇ ನಿಮ್ಮ ಆಯ್ಕೆಗಿರುವ ಮಾನದಂಡ ಎಂದು ಮುಖಂಡರಿಗೆ ಕಿವಿಮಾತು ಹೇಳಿದರು.

ಈ ಸುದ್ದಿ ಓದಿದ್ದೀರಾ?:ಗ್ಯಾರೆಂಟಿ ಜಾರಿಗೆ ಅಭಿವೃದ್ಧಿ ಅನುದಾನಗಳಿಗೆ ಕತ್ತರಿ ಹಾಕಬೇಡಿ : ಮಾಜಿ ಸಿಎಂ ಬೊಮ್ಮಾಯಿ

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಯಾವುದೇ ಕ್ಷಣದಲ್ಲಾದರೂ ಘೋಷಣೆ ಆಗುವ ಸಾಧ್ಯತೆ ಇದೆ. ನಮ್ಮ ಸಿದ್ಧತೆಗಳನ್ನು ನಾವು ಮಾಡಿಕೊಳ್ಳೋಣ. ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದೇವೆ ಎನ್ನುವ ಆತಂಕ ದುಃಖ ಬೇಡ. ಅನೇಕ ಸೋಲುಗಳನ್ನು ದಾಟಿಕೊಂಡು ಜೆಡಿಎಸ್ ಪಕ್ಷ ಫಿನಿಕ್ಸ್ ಪಕ್ಷಿಯಂತೆ ಮೇಲೆದ್ದು ಬಂದಿದೆ ಎಂದರು.

ಪಕ್ಷ ಸಂಘಟನೆ ದೃಷ್ಟಿಯಲ್ಲಿ ಕಠಿಣ ಸೂಚನೆ ನೀಡಿದ ಕುಮಾರಸ್ವಾಮಿ, ವಿಧಾನಸಭೆ ಚುನಾವಣೆ ವೈಫಲ್ಯಗಳಿಂದ ಪಾಠ ಕಲಿಯಿರಿ, ಮಾಡಿದ ತಪ್ಪನ್ನೇ ಮತ್ತೆ ಮತ್ತೆ ಮಾಡಬೇಡಿ ಎಂದು ಮುಖಂಡರಿಗೆ ಎಚ್ಚರಿಕೆ ನೀಡಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

Download Eedina App Android / iOS

X