ಬಿಬಿಎಂಪಿ ಆಸ್ತಿ ತೆರಿಗೆ ತಿದ್ದುಪಡಿ ವಿಧೇಯಕ ಅಂಗೀಕಾರ: ತೆರಿಗೆ ಬಾಕಿ ಮೇಲಿನ ದಂಡ ಶೇ.50ರಷ್ಟು ಇಳಿಕೆ

Date:

Advertisements

ಬಿಬಿಎಂಪಿ ವ್ಯಾಪ್ತಿಯಲ್ಲಿ ಬಾಕಿ ಉಳಿಸಿಕೊಂಡಿರುವ ಆಸ್ತಿ ತೆರಿಗೆ ಮೇಲಿನ ದಂಡದ ಪ್ರಮಾಣ ಶೇಕಡ 50ರಷ್ಟು ಕಡಿತ ಸೇರಿದಂತೆ ತೆರಿಗೆದಾರರ ಸ್ನೇಹಿ ಬಿಬಿಎಂಪಿ (ತಿದ್ದುಪಡಿ) ವಿಧೇಯಕ 2024 ಅನ್ನು ವಿಧಾನಸಭೆಯಲ್ಲಿ ಬುಧವಾರ ಅಂಗೀಕರಿಸಲಾಯಿತು.

ವಿಧಾನಸಭೆಯಲ್ಲಿ ಭೋಜನ ವಿರಾಮದ ನಂತರ ನಡೆದ ಕಲಾಪದಲ್ಲಿ ಬೆಂಗಳೂರು ನಗರಾಭಿವೃದ್ದಿ ಖಾತೆಯನ್ನೂ ಹೊಂದಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬಿಬಿಎಂಪಿ ಆಸ್ತಿ ತೆರಿಗೆ ತಿದ್ದುಪಡಿ ವಿಧೇಯಕವನ್ನು ಮಂಡಿಸಿದರು.

ಈ ವಿಧೇಯಕದಿಂದ ಬೆಂಗಳೂರಿನ ನಾಗರಿಕರಿಗೆ ತೆರಿಗೆ ಬಾಬ್ತು, ದಂಡ ವಿನಾಯಿತಿ ಸೇರಿ ಸುಮಾರು ರೂ. 2,700 ಕೋಟಿ ರೂಪಾಯಿಯಷ್ಟು ಅನುಕೂಲವಾಗಲಿದೆ. ಜತೆಗೆ ಪಾಲಿಕೆಗೆ ಸುಮಾರು ರೂ.1,000 ಕೋಟಿಯಷ್ಟು ಆಸ್ತಿ ತೆರಿಗೆ ಬರಲಿದೆ. ಸುಮಾರು 5.51 ಲಕ್ಷ ತೆರಿಗೆ ಬಾಕಿದಾರರು, ಸುಮಾರು 5-7 ಲಕ್ಷ ತೆರಿಗೆ ವ್ಯಾಪ್ತಿಗೆ ಬಾರದವರು ಹಾಗೂ 3 ಲಕ್ಷದಷ್ಟು ಮಂದಿ ಭಾಗಶಃ ತೆರಿಗೆ ಪಾವತಿದಾರರಿಗೆ ಒಟ್ಟಾರೆ 13 ರಿಂದ 15 ಲಕ್ಷ ಜನರಿಗೆ ಅನುಕೂಲವಾಗಲಿದೆ.

Advertisements

ಈ ವಿಧೇಯಕದಲ್ಲಿ ಬಡ ಹಾಗೂ ದುರ್ಬಲ ವರ್ಗದವರಿಗೆ ವಿಶೇಷ ವಿನಾಯಿತಿ ನೀಡಲಾಗಿದೆ. ಸರ್ಕಾರದ ವಸತಿ ಯೋಜನೆಯ ಆಸ್ತಿಗಳು ಹಾಗೂ ಕೊಳೆಗೇರಿ ಪ್ರದೇಶದ ಕಟ್ಟಡಗಳಿಗೆ ಬಡ್ಡಿ ಮೇಲಿನ ದಂಡ ಇರುವುದಿಲ್ಲ. 1 ಸಾವಿರ ಚದರ ಅಡಿ ವರೆಗಿನ ಸ್ವಯಂ ಬಳಕೆ ಆಸ್ತಿದಾರರಿಗೆ ಸಂಪೂರ್ಣ ದಂಡ ವಿನಾಯಿತಿ ನೀಡಲಾಗಿದೆ.

ವಸತಿ ಮತ್ತು ಮಿಶ್ರ ಆಸ್ತಿದಾರರ (ವಸತಿ ಮತ್ತು ವಾಣಿಜ್ಯ) ಬಾಕಿಯನ್ನು ಎಷ್ಟೇ ವರ್ಷದಿಂದ ಉಳಿಸಿಕೊಂಡಿದ್ದರೂ ಹಿಂದಿನ 5 ವರ್ಷಕ್ಕೆ ಮಾತ್ರ ಲೆಕ್ಕಾಚಾರ ಹಾಕಲು ನಿರ್ಧರಿಸಲಾಗಿದೆ. 5 ವರ್ಷಕ್ಕಿಂತ ಹಿಂದಿನ ಅವಧಿಗೆ ಬಡ್ಡಿ ಮನ್ನಾ ಮಾಡಲಾಗಿದೆ.

“ಇದೊಂದು ಜನಸ್ನೇಹಿ ತಿದ್ದುಪಡಿಯಾಗಿದ್ದು, ಸರ್ಕಾರಕ್ಕೆ ನಷ್ಟವಾದರೂ ಪರವಾಗಿಲ್ಲ, ಜನರಿಗೆ ಅನುಕೂಲವಾಗಲಿ ಎಂದು ಈ ಕಾನೂನನ್ನು ಜಾರಿಗೆ ತರಲಾಗಿದೆ” ಎಂದು ಶಿವಕುಮಾರ್ ಅವರು ಸದನದಲ್ಲಿ ತಿಳಿಸಿದರು.

ಇದನ್ನು ಓದಿದ್ದೀರಾ? ಪ್ರಧಾನಿ ಬಗ್ಗೆ ಜಾತಿ ಹೇಳಿಕೆ: ರಾಹುಲ್ ಗಾಂಧಿ ವಿರುದ್ಧ ಜೈಪುರದಲ್ಲಿ ಪ್ರಕರಣ ದಾಖಲು

ಹಿಂದಿನ ಬಿಜೆಪಿ ಸರಕಾರ ತಂದಿದ್ದ ತಿದ್ದುಪಡಿ ವಿಧೇಯಕ ಅಂಗೀಕಾರದಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ಬಾಕಿ ಉಳಿಸಿಕೊಂಡ ತೆರಿಗೆ ಮೇಲೆ ದುಪ್ಪಟ್ಟು ದಂಡ ಪಾವತಿಸಬೇಕಾಗಿ ಬಂದು ಬೆಂಗಳೂರು ನಾಗರಿಕರು ತೀವ್ರ ಸಂಕಷ್ಟಕ್ಕೆ ಸಿಕ್ಕಿದ್ದರು. ತೆರಿಗೆ ಮೊತ್ತಕ್ಕಿಂತ ದಂಡದ ಪ್ರಮಾಣವೇ ಸಿಕ್ಕಾಪಟ್ಟೆ ಹೆಚ್ಚಾಗಿತ್ತು. ಈಗ ಸರಕಾರವು ಹಿಂದಿನ ಸರಕಾರ ಅಂಗಿಕರಿಸಿದ್ದ ಕಾಯ್ದೆಗೆ ತಿದ್ದುಪಡಿ ತಂದು ನಾಗರಿಕರ ತೆರಿಗೆ ಹೊರೆ ಕಡಿಮೆ ಮಾಡಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ....

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X