ಬಿಡಿಎ, ಬಿಬಿಎಂಪಿ ಆಸ್ತಿ ಒತ್ತುವರಿ ತೆರವಿಗೆ ನಿರ್ದಾಕ್ಷಿಣ್ಯ ಕ್ರಮ: ಡಿಸಿಎಂ ಡಿ ಕೆ ಶಿವಕುಮಾರ್

Date:

Advertisements
  • ಶಾಸಕ ಮುನಿರತ್ನ ಅವರ ಪ್ರಶ್ನೆಗೆ ಡಿ ಕೆ ಶಿವಕುಮಾರ್ ಉತ್ತರ
  • ‘ಒತ್ತುವರಿ ಬಗ್ಗೆ ನಿರ್ದಿಷ್ಟ ದಾಖಲೆಗಳು ಇದ್ದರೆ ಈಗಲೇ ಕೊಡಿ’

ಬಿಡಿಎ, ಬಿಬಿಎಂಪಿ ಆಸ್ತಿಯನ್ನು ಯಾರೇ ಒತ್ತುವರಿ ಮಾಡಿದ್ದರೂ ಮುಲಾಜಿಲ್ಲದೆ ತೆರವಿಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.

ವಿಧಾನಸಭೆಯಲ್ಲಿ ಮಂಗಳವಾರ ಪ್ರಶ್ನೋತ್ತರ ಕಲಾಪದಲ್ಲಿ, ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಅವರು ಬಿಡಿಎ ಅಧೀನದಲ್ಲಿ ಇರುವ ಉದ್ಯಾನಗಳ ಸಂಖ್ಯೆ ಮತ್ತು ಉದ್ಯಾನಗಳ ಒತ್ತುವರಿಯ ಬಗ್ಗೆ ಕೇಳಿದ ಪ್ರಶ್ನೆಗೆ ಡಿ ಕೆ ಶಿವಕುಮಾರ್ ಅವರು ಉತ್ತರಿಸಿದರು.

“ನಮ್ಮ ಸರ್ಕಾರ ಅಧಿಕಾರ ವಹಿಸಿಕೊಂಡ ತಕ್ಷಣ ಬೆಂಗಳೂರಿನ ಆಸ್ತಿಗಳನ್ನು ಹೊಸ ತಂತ್ರಜ್ಞಾನದ ಮೂಲಕ ಮ್ಯಾಪಿಂಗ್ ಕೆಲಸ ಮಾಡುತ್ತಿದೆ. ಒಂದಷ್ಟು ಆಸ್ತಿ ವ್ಯಾಜ್ಯಗಳು ನ್ಯಾಯಾಲಯದಲ್ಲಿವೆ. ಸರ್ಕಾರಿ ಆಸ್ತಿಗಳನ್ನು ಉಳಿಸಿ ಸಾರ್ವಜನಿಕರ ಉಪಯೋಗಕ್ಕೆ ಬಳಕೆ ಮಾಡಲಾಗುವುದು” ಎಂದರು.

Advertisements

“ಒತ್ತುವರಿಯ ಬಗ್ಗೆ ನಿಮ್ಮ ಬಳಿ ನಿರ್ದಿಷ್ಟ ದಾಖಲೆಗಳು ಇದ್ದರೆ ಈಗಲೇ ಕೊಡಿ, ಕೂಡಲೇ ಕ್ರಮ ತೆಗೆದುಕೊಳ್ಳುತ್ತೇವೆ. ಯಾರನ್ನೂ ರಕ್ಷಣೆ ಮಾಡುವ ಸಂದರ್ಭ ಬರುವುದಿಲ್ಲ” ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ಪ್ರಭಾವಿಗಳ ಹೆಸರು ಹೇಳಿಕೊಂಡು‌ ಪಾರ್ಕ್ ನಿರ್ಮಾಣವಾಗಬೇಕಿದ್ದ ಜಾಗದಲ್ಲಿ ನಮ್ಮ ಸ್ವತ್ತು ಎಂದು ಯಾರೋ ಬೋರ್ಡ್ ಹಾಕಿದ್ದಾರೆ. ಇದೇ ರೀತಿ ಅನೇಕ ಉದ್ಯಾನದ ಜಾಗಗಳು ಒತ್ತುವರಿಯಾಗಿವೆ ಎಂದು ಶಾಸಕರು ಹೇಳಿದಾಗ ಡಿಸಿಎಂ ಅವರು, “ಶಾಸಕ ಮುನಿರತ್ನ ಅವರು ಹೇಳಿರುವ ಕೊಟ್ಟಿಗೆಪಾಳ್ಯ ವಾರ್ಡ್ ನಂಬರ್ 73ರ ಸರ್ವೆ ನಂಬರ್ 19 ಅನ್ನು ಯಾರೋ ಒಬ್ಬರು ತಮಗೆ ಸೇರಿದ್ದು ಎಂದು ಕೆಳ ನ್ಯಾಯಾಲಯದಲ್ಲಿ ಆದೇಶ ಪಡೆದುಕೊಂಡು ಬಂದಿದ್ದಾರೆ. ಶೀಘ್ರವೇ ಈ ಒತ್ತುವರಿ ತೆರವಿಗೆ ಕ್ರಮ ತೆಗೆದುಕೊಳ್ಳಲಾಗುವುದು” ಎಂದರು.

ಪ್ರಮೋದ್‌ ಲೇಔಟ್‌ ಸೇರಿದಂತೆ ಇತರೆಡೆ ಪ್ರಭಾವಿಗಳ ಜೊತೆ ಇರುವ ಫೋಟೋ ತೋರಿಸಿ ಭೂಮಿ ಒತ್ತುವರಿ ಮಾಡಿಕೊಳ್ಳುತ್ತಿದ್ದಾರೆ ಎಂದ ಶಾಸಕ ಮುನಿರತ್ನ ಅವರಿಗೆ “ನಿನಗಿಂತ ಪ್ರಭಾವಿ ಯಾರಿದ್ದಾರಪ್ಪ” ಎಂದು ಡಿಸಿಎಂ ಅವರು ಕಾಲೆಳೆದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ....

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

Download Eedina App Android / iOS

X