ಚನ್ನಪಟ್ಟಣಕ್ಕೆ ಶಾಸಕರಿಲ್ಲದ ಕಾರಣ ನಾನೇ ಸೇವಕ, ನಾನೇ ನಿಮ್ಮ ಮನೆ ಮಗ : ಡಿಸಿಎಂ ಡಿ ಕೆ ಶಿವಕುಮಾರ್

Date:

Advertisements

“ಚನ್ನಪಟ್ಟಣಕ್ಕೆ ಶಾಸಕರು ಇಲ್ಲದ ಕಾರಣ, ಈಗ ನಾನೇ ನಿಮ್ಮ ಮನೆ ಮಗ, ನಾನೇ ಸೇವಕ, ನಾನೇ ಶಾಸಕ, ನಾನೇ ಮಂತ್ರಿ, ನಾನೇ ಡಿಸಿಎಂ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು.

ವಿರೂಪಾಕ್ಷಿಪುರ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಅರಳಾಳುಸಂದ್ರದ ಶಾಲಾ ಆವರಣದಲ್ಲಿ ಸೋಮವಾರ ನಡೆದ ‘ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು “ಜನರ ಸೇವೆ ಮಾಡಲು ಉಪಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ಬಂದಿದ್ದೇನೆ. ಜನಸೇವೆ ಮಾಡಲು ಮೊದಲು ಅವಕಾಶ ನೀಡಿದವರು ಚನ್ನಪಟ್ಟಣದ ಮತದಾರರು. ನಾನು ಜಾತಿ ನೋಡಿ ಜನಸೇವೆ ಮಾಡಿಲ್ಲ ನೀತಿ ನೋಡಿ ಕೆಲಸ ಮಾಡಿದ್ದೇನೆ” ಎಂದು ಹೇಳಿದರು.

“ನಿಮ್ಮ ಮನೆ ಬಾಗಿಲಿಗೆ ಅವಕಾಶ ಬಂದಿದೆ. ಯಾವುದೇ ಕಾರಣಕ್ಕೂ ಬಿಡಲು ಹೋಗಬೇಡಿ. ನಿಮ್ಮ ಮನೆ ಬಾಗಿಲಿಗೆ ಅಧಿಕಾರಿಗಳು, ಜನಪ್ರತಿನಿದಿಗಳು ಬಂದಿದ್ದಾರೆ. ನೀವು ನನ್ನ ಸೇವೆಯನ್ನು ಸಂಪೂರ್ಣವಾಗಿ ಬಳಸಿಕೊಳ್ಳಬೇಕು. ನಿಮ್ಮ ಸೇವೆಗೆ ನನ್ನ ಕಚೇರಿ ಸದಾ ತೆರೆದಿರುತ್ತದೆ. ನನ್ನ ಕಚೇರಿಗೆ ಬಂದು ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು” ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.

Advertisements

“ಈ ಹಿಂದೆ ಇಂಧನ ಸಚಿವನಾಗಿದ್ದಾಗ ರೈತರಿಗೆ ಟ್ರಾನ್ಸ್ಫಾರ್ಮರ್ ಅಳವಡಿಕೆ ಮತ್ತು ನೀರಾವರಿ ಕೆಲಸಗಳನ್ನು ಮಾಡಿ ಅನುಕೂಲ ಮಾಡಿಕೊಡಲಾಗಿತ್ತು. ಕ್ಷೇತ್ರ ವಿಂಗಡಣೆಯಾಗಿ ನಾನು ಕನಕಪುರಕ್ಕೆ ಹೋದ ನಂತರ ಯಾರಾದರೂ ಶಾಸಕರು ಹೀಗೆ ಜನರ ಬಳಿಗೆ ಬಂದು ಕೆಲಸ ಮಾಡಿದ ಉದಾಹರಣೆಯೇ ಇಲ್ಲ. ದಳ, ಬಿಜೆಪಿ ಯಾವ ಪಕ್ಷದವರನ್ನು ಪ್ರಶ್ನೆ ಮಾಡಲು ಹೋಗುವುದಿಲ್ಲ” ಎಂದು ಹೇಳಿದರು.

“ನಾನು ಯಾರ ಜೊತೆಗೂ ಸ್ಪರ್ಧಿಸಲು ಇಲ್ಲಿಗೆ ಬಂದಿಲ್ಲ ನಿಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಬಂದಿದ್ದೇನೆ. ಲೋಕಸಭಾ ಚುನಾವಣೆಯಲ್ಲಿ ನಮ್ಮ ನಿರೀಕ್ಷೆಗೂ ಮೀರಿ ಮತ ನೀಡಿದ್ದೀರಿ ಅದಕ್ಕಾಗಿ ನಿಮಗೆ ಕೃತಜ್ಞತೆ ಸಲ್ಲಿಸಲು ಬಂದಿದ್ದೇನೆ. 80 ಸಾವಿರ ಮತಗಳನ್ನು ನೀಡಿದ ನಿಮಗೆ ಕೋಟಿ ನಮಸ್ಕಾರಗಳು” ಎಂದು ತಿಳಿಸಿದರು.

4,419 ಜನರ ಸಮಸ್ಯೆಗಳ ಇತ್ಯರ್ಥಕ್ಕೆ ಕ್ರಮ

5 ಜಿಲ್ಲಾ ಪಂಚಾಯತಿಗಳಲ್ಲಿ 4,419 ಜನರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡು ಅರ್ಜಿ ಸಲ್ಲಿಸಿದ್ದಾರೆ. ಇದರಲ್ಲಿ ಸುಮಾರು 1,996 ಜನ ಮನೆಯಿಲ್ಲ ಎಂದು ಅರ್ಜಿ ಸಲ್ಲಿಸಿದ್ದಾರೆ. 1,010 ಮಂದಿ ನಿವೇಶನವಿಲ್ಲ ಎಂದು ಅರ್ಜಿ ಸಲ್ಲಿಸಿದ್ದಾರೆ. ಸರ್ಕಾರಿ ಜಮೀನು ಅಥವಾ ಖಾಸಗಿ ಜಮೀನು ಹುಡುಕಿ ಬಡವರಿಗೆ ನಿವೇಶನ ಹಂಚಿಕೆ ಮಾಡಲಾಗುವುದು. ಕಾಡಾನೆಗಳ ಹಾವಳಿ ತಪ್ಪಿಸಲು ಬನ್ನೇರುಘಟ್ಟದಿಂದ ಇಲ್ಲಿಯವರೆಗೆ 180 ಕಿಮೀ ಉದ್ದ ಬ್ಯಾರಿಕೆಡ್ ಅನ್ನು ಸುರೇಶ್ ಅವರ ಶ್ರಮದಿಂದ ಹಾಕಲಾಗುತ್ತಿದೆ. ಟಾಸ್ಕ್ ಫೋರ್ಸ್ ಸಿದ್ಧವಾಗಿದೆ” ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.

“ಡಿ ಕೆ ಸುರೇಶ್ ಅವರಿಗೆ ಮತ ಹಾಕಿಲ್ಲ ಎಂದು ಮುಜುಗರ ಮಾಡಿಕೊಳ್ಳಬೇಡಿ. ನೀವು ನಮ್ಮ ಜಿಲ್ಲೆಯ ಜನ ನಿಮ್ಮ ಸಮಸ್ಯೆಗಳು ಬಗೆಹರಿಯಬೇಕು. ಪ್ರತಿ ಪಂಚಾಯತಿ ವ್ಯಾಪ್ತಿಯಲ್ಲಿ ನಮ್ಮ ಟ್ರಸ್ಟ್ ಹುಡುಗರು ನಿಮ್ಮ ಸಹಾಯಕ್ಕೆ ಇರುತ್ತಾರೆ” ಎಂದು ಹೇಳಿದರು.

“ಯಾರು ಬರಲಿ ಹೋಗಲಿ ನಿಮ್ಮ ಸಹಾಯಕ್ಕೆ ನಾನು ತಯಾರಿದ್ದೇನೆ. ನನ್ನ ಕರ್ತವ್ಯ ಮರೆಯುವ ಪ್ರಶ್ನೆಯೇ ಇಲ್ಲ. ನನ್ನನ್ನು ಅತ್ಯಂತ ಚಿಕ್ಕ ವಯಸ್ಸಿಗೆ ಶಾಸಕನನ್ನಾಗಿ ಮಾಡಿದವರು ನೀವು. 1985 ರಿಂದ 2008 ರ ತನಕ ನಿಮ್ಮ ಸೇವೆ ಮಾಡಿದ್ದೇನೆ, ನಿಮ್ಮ ಋಣ ತೀರಿಸುವ ಕೆಲಸ ಮಾಡುತ್ತೇನೆ” ಎಂದು ಡಿ ಕೆ ಶಿವಕುಮಾರ್ ಹೇಳಿದರು.

ಕಾರ್ಯಕ್ರಮಕ್ಕೆ ಮುಂಚಿತವಾಗಿ ಗರಕನಹಳ್ಳಿ ಏತ ನೀರಾವರಿ ಯೋಜನೆಯ ಉನ್ನತೀಕರಣ ಮತ್ತು ಕೋಡಂಬಳ್ಳಿ ಏರು ಕೊಳವೆ ಶಾಖೆಯ ಸಾಮರ್ಥ್ಯ ವೃದ್ಧಿಗಾಗಿ 40 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ಕಾಮಗಾರಿಗೆ ಡಿ ಕೆ ಶಿವಕುಮಾರ್ ಶಂಕುಸ್ಥಾಪನೆ ನೆರವೇರಿಸಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X