ರಾಜಕೀಯ ಜೀವನ ಪ್ರವೇಶಕ್ಕೆ ಪ್ರೊ. ನಂಜುಂಡಸ್ವಾಮಿ ಕಾರಣ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

ಟಿ.ಎನ್.ಸೀತಾರಾಂ ಅವರೊಂದಿಗೆ 40 ವರ್ಷಗಳ ಒಡನಾಟವಿದ್ದು, ಇವರು ಬದುಕಿನ ವಿವಿಧ ಸ್ತರಗಳ ಅನುಭವವಿರುವ ಕ್ರಿಯಾಶೀಲ ವ್ಯಕ್ತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement -

ಅವರು ಇಂದು(ಡಿ.10) ಟಿ.ಎನ್.ಸೀತಾರಾಂ ಅವರ ‘ನೆನಪಿನ ಪುಟಗಳು’ ಕೃತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

“ಟಿ.ಎನ್.ಸೀತಾರಾಂ ಸುಮಾರು 40 ವರ್ಷಗಳ ಒಡನಾಟವಿರುವ ಆಪ್ತಸ್ನೇಹಿತ. ನಾನು ಲಂಕೇಶ್ ಪತ್ರಿಕಾಲಯಕ್ಕೆ ಭೇಟಿ ನೀಡುತ್ತಿದ್ದೆ. ಕಾನೂನು ವಿದ್ಯಾರ್ಥಿಯಾಗಿದ್ದಾಗ ಪ್ರೊ. ನಂಜುಂಡಸ್ವಾಮಿಯವರು ಕಾನೂನು ಕಾಲೇಜಿನ ಪ್ರಾಧ್ಯಾಪಕರಾಗಿದ್ದರು. ಆಗ ರಾಜಕೀಯ ಕ್ಷೇತ್ರದಲ್ಲಿ ಆಸಕ್ತಿಯಿದ್ದ ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಸುತ್ತಿದ್ದರು. ಸಮಾಜವಾದಿ ಯುವಜನ ಸಭಾದಲ್ಲಿ ನಾನು ಸದಸ್ಯನಾಗಲು ನೆರವಾದರು. 1971ರಲ್ಲಿ ವೀರೇಂದ್ರ ಪಾಟೀಲ್ ಮುಖ್ಯಮಂತ್ರಿಯಾಗಿದ್ದಾಗ, ಸರ್ಕಾರದ ವಿರುದ್ಧ ನಡೆದ ಚಳವಳಿಯಲ್ಲಿ ನಾನು ಕೂಡ ಭಾಗಿಯಾಗಿದ್ದೆ. ನನ್ನ ರಾಜಕೀಯ ಜೀವನ ಪ್ರಾರಂಭವಾಗಲು ಪ್ರೊ. ನಂಜುಂಡಸ್ವಾಮಿಯವರೇ ಕಾರಣ” ಎಂದು ತಿಳಿಸಿದರು.

“ಜನತಾ ಪಾರ್ಟಿಯಲ್ಲಿ ಪದಾಧಿಕಾರಿಯಾಗಿ ಕಾರ್ಯನಿರ್ವಹಿಸಿ, ಪಕ್ಷದ ನಾಯಕರು ನನಗೆ ಪ್ರೋತ್ಸಾಹ ನೀಡಿದರು. ನಂತರ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆ ಗೆದ್ದ ನಂತರ ರಾಮಕೃಷ್ಣ ಹೆಗಡೆಯವರಿಗೆ ಬೆಂಬಲ ಸೂಚಿಸಿದ ಬಳಿಕ ಕಾವಲು ಸಮಿತಿಯ ಅಧ್ಯಕ್ಷನಾಗಿ ಕಾರ್ಯನಿರ್ವಹಿಸಿದೆ. 1984ರಲ್ಲಿ ರೇಷ್ಮೆ ಸಚಿವನಾಗಿ ಕೆಲಸ ಮಾಡಿದೆ. 1985ರಲ್ಲಿ ಜನತಾದಳದಲ್ಲಿ ನಿಂತು ಜಯ ಸಾಧಿಸಿದ ನಂತರ ಪಶುಸಂಗೋಪನೆ ಸಚಿವನಾಗಿ ಕೆಲಸ ನಿರ್ವಹಿಸಿದೆ. ಆ ಸಂದರ್ಭದಲ್ಲಿ ಕಾರಣಾತರಗಳಿಂದ ಸಚಿವ ಸ್ಥಾನ ಕಳೆದುಕೊಳ್ಳಬೇಕಾಯಿತು” ಎಂದ ಸಿಎಂ, ಆ ಸಂದರ್ಭದಲ್ಲಿ ತನ್ನ ಬಳಿಯಿದ್ದ ಸ್ಕೂಟರ್ ನಲ್ಲಿ ಓಡಾಡುತ್ತಿದ್ದ ನೆನಪುಗಳನ್ನು ಸ್ಮರಿಸಿಕೊಂಡರು.

“ಟಿ.ಎನ್.ಸೀತಾರಾಂ ಅವರು ಬದುಕಿನ ಎಲ್ಲ ಸ್ತರಗಳ ಅನುಭವ ಇರುವವರು. ಅವರ ವಿದ್ಯಾರ್ಥಿ ದೆಸೆ, ಸ್ನೇಹಿತರ ಒಡನಾಟ, ರಾಜಕೀಯ , ಕಲಾ ಸೇವೆಯಲ್ಲಿ ತೊಡಗಿರುವ ಸೀತಾರಾಂ ಅವರು ಬಹುಮುಖ ಪ್ರತಿಭೆ. ರಾಮಕೃಷ್ಣ ಹೆಗಡೆಯವರ ಆಪ್ತರಾಗಿರುವವರು. ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯರಾಗಿದಿದ್ದರೆ, ಶಾಸಕರಾಗುವ ಸಾಧ್ಯತೆಯೂ ಇತ್ತು. ರಾಮಕೃಷ್ಣ ಹೆಗಡೆಯವರಿಗೆ ಬಹಳ ಜನಪ್ರಿಯತೆ ಇದ್ದ ಕಾರಣ, ಜನತಾ ಪಾರ್ಟಿ ಪರವಾದ ಅಲೆ ಇತ್ತು. ನೆನಪಿನ ಪುಟಗಳ ಪುಸ್ತಕವನ್ನು ಉತ್ತಮವಾಗಿ ಹಾಗೂ ಸತ್ಯವನ್ನೇ ಬರೆದಿದ್ದಾರೆ. ನನ್ನ ಉತ್ತಮ ಸ್ನೇಹಿತರಾಗಿರುವ ಟಿ.ಎನ್.ಸೀತಾರಾಂ ಅವರು ಬರೆದಿರುವ ಕೃತಿಯನ್ನುಅತ್ಯಂತ ಸಂತೋಷದಿಂದ ಬಿಡುಗಡೆ ಮಾಡಿದ್ದೇನೆ” ಎಂದು ಸಿದ್ದರಾಮಯ್ಯ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜಸ್ಥಾನ | ಬಿಜೆಪಿಗೆ ಮುಖಭಂಗ; ಮಾಜಿ ಸಿಎಂ ಭದ್ರಕೋಟೆ ಭೇದಿಸಿದ ಕಾಂಗ್ರೆಸ್

ರಾಜಸ್ಥಾನದಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ...

ಭಾರತದ ಇತರ ಭಾಷೆಗಳನ್ನು ಗೌರವಿಸಿ, ರಕ್ಷಿಸಿದಾಗ ಮಾತ್ರ ಹಿಂದಿಯ ಪ್ರಗತಿಗೆ ಅರ್ಥ: ಅಮಿತ್ ಶಾ

ಭಾರತೀಯ ಇತರ ಭಾಷೆಗಳ ಗೌರವ, ಪ್ರಚಾರ ಮತ್ತು ರಕ್ಷಣೆಯನ್ನು ಖಚಿತಪಡಿಸಿಕೊಳ್ಳುವ ಮೂಲಕ...

ಬಂಗಾಳದ 252 ಮದರಸಾಗಳು ಬಂದ್; ಭಯೋತ್ಪಾದಕರ ಆಶ್ರಯತಾಣ ಎಂದ ಸಚಿವ: ಬಿಜೆಪಿ ಸರ್ಕಾರಕ್ಕೆ ಮುಸ್ಲಿಮರೇ ಗುರಿಯೇ?

ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರವು ರಾಜ್ಯಾದ್ಯಂತ ಕಾರ್ಯಾಚರಣೆ ನಡೆಸುತ್ತಿರುವ ಮದರಸಾಗಳ...

ಬಿಜೆಪಿಯಲ್ಲಿ ಆಂತರಿಕ ಕುಸ್ತಿ; ಪ್ರತಾಪ್ ಸಿಂಹ – ನಾಗೇಂದ್ರ‌ ಬೀದಿ ಕಾಳಗ

ಮೈಸೂರು ಜಿಲ್ಲೆಯ ಟಿ. ನರಸೀಪುರ ಗಣೇಶೋತ್ಸವ ಮೆರವಣಿಗೆ ವಿಚಾರವಾಗಿ ಇನ್ಸ್‌ಪೆಕ್ಟರ್ ಧನಂಜಯ್‌...