ಪ್ರಧಾನಿ ಮೋದಿ ಅವಧಿಯಲ್ಲಿ ಈ ಹಿಂದಿಗಿಂತ ಅಧಿಕ ಗೋಮಾಂಸ ರಫ್ತು: ದಯಾನಂದ ಸ್ವಾಮೀಜಿ

Date:

ಪ್ರಧಾನಿ ನರೇಂದ್ರ ಮೋದಿ ಅವರ ಅವಧಿಯಲ್ಲಿ ದೇಶದಲ್ಲಿ ಈ ಹಿಂದಿಗಿಂತ ಅಧಿಕ ಗೋಮಾಂಸವನ್ನು ರಫ್ತು ಮಾಡಲಾಗುತ್ತಿದೆ. ನಮ್ಮ ದೇಶದ ಗೋಮಾಂಸ ರಫ್ತಿನಲ್ಲಿ ವಿಶ್ವದಲ್ಲೇ ಎರಡನೇ ಸ್ಥಾನದಲ್ಲಿದೆ ಎಂದು ವಿಶ್ವಪ್ರಾಣಿ ಕಲ್ಯಾಣ ಮಂಡಳಿ ಅಧ್ಯಕ್ಷ, ಬೆಂಗಳೂರು ವಿಶ್ವ ಗೋರಕ್ಷಾ ಮಹಾಪೀಠದ ದಯಾನಂದ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ

- Advertisement -

ಉಡುಪಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ತಾವು ಗುಜರಾತ್ ಮುಖ್ಯಮಂತ್ರಿ ಆಗಿದ್ದಾಗ ಗೋಮಾಂಸ ರಫ್ತು ಮತ್ತು ಗೋಹತ್ಯೆ ನಿಷೇಧಿಸದ ಇಂದಿರಾ ಗಾಂಧಿ ನೇತೃತ್ವದ ಕೇಂದ್ರ ಸರ್ಕಾರವನ್ನು ಟೀಕಿಸುತ್ತಿದ್ದ ಮೋದಿ ಅವರು ಈಗ ಮೂರು ಬಾರಿ ಪ್ರಧಾನಿಯಾಗಿದ್ದಾರೆ. ಆದರೂ ಗೋಹತ್ಯೆಯನ್ನು ನಿಷೇಧ ಮಾಡಿಲ್ಲ. ಅಷ್ಟು ಮಾತ್ರವಲ್ಲದೆ ಅವರ ಅವಧಿಯಲ್ಲಿಯೇ ಮೊದಲಿಗಿಂತ ಅಧಿಕ ಪ್ರಮಾಣದಲ್ಲಿ ಗೋಮಾಂಸ ರಫ್ತಾಗುತ್ತಿದೆ. ಆರ್‌ಎಸ್‌ಎಸ್‌ ಕೂಡಾ ಈ ವಿಚಾರದಲ್ಲಿ ಮಾತನಾಡುತ್ತಿಲ್ಲ” ಎಂದು ಟೀಕಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಇದನ್ನು ಓದಿದ್ದೀರಾ? ಗೋಮಾಂಸ ಸಾಗಾಟ | ಸುಲಿಗೆಕೋರರೂ ಸೇರಿ ಸುಲಿಗೆಗೊಳಗಾದವರೂ ಬಂಧನ!

“ದೇಶದಲ್ಲಿ ಪ್ರತಿದಿನ ಗೋವಂಶದ ಪ್ರಾಣಿಗಳನ್ನು ಹತ್ಯೆ ಮಾಡಿ ಅದರ ಮಾಂಸ, ಚರ್ಮ ವಿದೇಶಗಳಿಗೆ ರಫ್ತು ಮಾಡಲಾಗುತ್ತಿದ್ದು, ಇದು ಕಳವಳಕಾರಿ. ಅಂಹಿಸೆ ತತ್ವ ಬೋಧಿಸುವ ನಾವು ಮಾಡಿ ಮಾಂಸ ರಫ್ತು ಮಾಡಿ ವಿಶ್ವವನ್ನೇ ಮಾಂಸಹಾರಿ ಮಾಡಲು ಮುಂದಾಗಿದ್ದೇವೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಕರ್ನಾಟಕ ಸೇರಿ 16 ರಾಜ್ಯಗಳಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದೆ. ಆದರೆ ಕೇಂದ್ರ ಸರ್ಕಾರ ಯಾಕೆ ಗೋಹತ್ಯೆ ನಿಷೇಧಿಸುತ್ತಿಲ್ಲ” ಎಂದು ಪ್ರಶ್ನಿಸಿದರು. ಹಾಗೆಯೇ ಪ್ರಧಾನಿ ಈಗಲಾದರೂ ಗೋಮಾಂಸ ರಫ್ತು ನಿಷೇಧಿಸಬೇಕು, ದೇಶವನ್ನು ಮಾಂಸ ರಫ್ತು ಮುಕ್ತ ದೇಶವನ್ನಾಗಿಸಬೇಕು ಎಂದು ಒತ್ತಾಯಿಸಿದರು.

ಗೋಮಾಂಸ ಸೇವನೆಯನ್ನು ರಾಜಕೀಯಗೊಳಿಸಿರುವ ಬಿಜೆಪಿ ಸರ್ಕಾರಗಳು ತಮ್ಮ ಆಡಳಿತವಿರುವ ರಾಜ್ಯಗಳಲ್ಲಿ ಗೋಹತ್ಯೆ ನಿಷೇಧಿಸಿದೆ. ಆದರೆ ದೇಶದಲ್ಲಿ ಗೋಮಾಂಸ ರಫ್ತು ಮಾತ್ರ ಹೆಚ್ಚಳವಾಗುತ್ತಿದೆ. ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಗೋಮಾಂಸ ರಫ್ತು ಮಾಡುವ ದೇಶಗಳಲ್ಲಿ ಒಂದಾಗಿದ್ದು ಮೂರನೇ ಸ್ಥಾನದಲ್ಲಿದೆ.

ಎಮ್ಮೆ ಮಾಂಸ ರಫ್ತು 2024ರಿಂದ 2025ರ ವೇಳೆಗೆ ಶೇ.4ರಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ಅಂದರೆ 1.65 ಮಿಲಿಯನ್ ಮೆಟ್ರಿಕ್ ಟನ್‌ಗಳಷ್ಟು ರಫ್ತು ದಾಖಲಾಗುವ ಸಾಧ್ಯತೆಯಿದೆ. ಇದರಿಂದ ಕೇಂದ್ರ ಸರ್ಕಾರ ಉತ್ತಮ ಆದಾಯವನ್ನೂ ಗಳಿಸುತ್ತಿದೆ. ಹಣಕಾಸು ವರ್ಷ 2024-25ರಲ್ಲಿ $3.92 ಶತಕೋಟಿಗೂ ಹೆಚ್ಚು ಕೇಂದ್ರದ ಬೊಕ್ಕಸಕ್ಕೆ ಸೇರಿದೆ. ಆದರೆ ದೇಶದಲ್ಲಿ ಮಾತ್ರ ಬಿಜೆಪಿ ಆಹಾರದ ಹಕ್ಕಿಗೆ ಧಕ್ಕೆ ತಂದು ರಾಜಕೀಯ ಮಾಡುತ್ತಿರುವುದು ವಿಪಕ್ಷಗಳ ಟೀಕೆಗೆ ಕಾರಣವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿದ್ಯಾರ್ಥಿನಿ ಮೇಲೆ ಗೂಂಡಾಗಿರಿ; ಬಿಹಾರ ಸರ್ಕಾರದ ವಿರುದ್ಧ ರಾಹುಲ್ ಕಿಡಿ; ಪೋಕ್ಸೋ ಕಾಯ್ದೆಯಡಿ ಕ್ರಮಕ್ಕೆ ಆಗ್ರಹ

ಬಿಹಾರದ ಜಮುಯಿ ಜಿಲ್ಲೆಯಲ್ಲಿ 10ನೇ ತರಗತಿಯ ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳಿಗೆ ಸಾರ್ವಜನಿಕ...

ವಿಧಾನಸಭೆಯಲ್ಲಿ ಕಸ್ತೂರಿ ರಂಗನ್ ವರದಿ, ಬರ ಕುರಿತು ಗಂಭೀರ ಚರ್ಚೆ, ಪರಿಷತ್ತಿನಲ್ಲಿ ಗದ್ದಲ

ರಾಜ್ಯದಲ್ಲಿ ತಲೆದೋರಿರುವ ತೀವ್ರ ಬರ ಪರಿಸ್ಥಿತಿ ಹಾಗೂ ಕೇಂದ್ರ ಸರ್ಕಾರ ಇತ್ತೀಚೆಗೆ...

ಗಗನಕ್ಕೇರಿದ ದಿನಬಳಕೆ ವಸ್ತುಗಳ ದರ: ‘ಕ್ಯಾ ಹುವಾ ತೇರಾ ವಾದಾ’ – ಪ್ರಧಾನಿ ಮೋದಿಗೆ ಕಾಂಗ್ರೆಸ್ ಪ್ರಶ್ನೆ

ದೇಶದಲ್ಲಿ ಪ್ರಮುಖ ಆಹಾರ ಪದಾರ್ಥಗಳ ಬೆಲೆ ಗಗನಕ್ಕೇರುತ್ತಿರುತ್ತಿದೆ. ಇದನ್ನು ಖಂಡಿಸಿ ಕಾಂಗ್ರೆಸ್...

BREAKING NEWS: ಸೌಜನ್ಯ ಕೊಲೆ ಪ್ರಕರಣ: ಮರು ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಆದೇಶ

ರಾಜ್ಯಾದ್ಯಂತ ತೀವ್ರ ಸಂಚಲನ ಹಾಗೂ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದ್ದ ಧರ್ಮಸ್ಥಳದ ಸೌಜನ್ಯ...