ಬೆಳಗಾವಿ | ಜಗದೀಶ ಶೆಟ್ಟರ್‌ಗೆ ಬಿಜೆಪಿ ಟಿಕೆಟ್, ರಮೇಶ ಜಾರಕಿಹೊಳಿ ವಿರೋಧ!

Date:

ಬೆಳಗಾವಿ ಲೋಕಸಭೆ ಚುನಾವಣೆಗೆ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ನಡುವಿನ ಪೈಪೋಟಿ ಎನ್ನುವುದಕ್ಕಿಂತ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಮತ್ತು ರಮೇಶ ಜಾರಕಿಹೊಳಿ ನಡುವಿನ ಪೈಪೋಟಿ ಎಂದೇ ಬಿಂಬಿಸಲಾಗುತ್ತಿದೆ. ಎಲ್ಲದಕ್ಕಿಂತ ಮುಖ್ಯವಾಗಿ ಬೆಳಗಾವಿ ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕಿಂತ ಅಭ್ಯರ್ಥಿಗಳ ಆಯ್ಕೆಯೇ ಪ್ರತಿಷ್ಠೆಯಾಗಿ ಪರಿಣಮಿಸಿದೆ.

ಬೆಳಗಾವಿ ಲೋಕಸಭೆಗೆ ಕಾಂಗ್ರೆಸ್ ಪಕ್ಷದಿಂದ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿಯವರ ಪುತ್ರಿ ಪ್ರಿಯಾಂಕ ಜಾರಕಿಹೊಳಿಯವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡುತ್ತಾರೆ ಎಂಬ ಚರ್ಚೆಗಳಿದ್ದವು. ಆದರೆ ಪ್ರಿಯಾಂಕ ಅವರು ಚಿಕ್ಕೊಡಿ ಲೋಕಸಭಾ ಅಭ್ಯರ್ಥಿಗಳಾಗುವ ಸಾಧ್ಯತೆಗಳಿರುವುದರಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಪುತ್ರ ಮೃಣಾಲ ಹೆಬ್ಬಾಳ್ಕರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನಾಗಿ ಘೋಷಿಸುವ ಸಾಧ್ಯತೆಗಳಿವೆ. ಇವರ ನಡುವೆ ಕಾಂಗ್ರೆಸ್ ಪಕ್ಷದಿಂದ ಕಿರಣ ಸಾಧುನವರ, ಡಾ.ಗಿರೀಶ ಸೋನವಾಲಕರ ಹೆಸರುಗಳು ಕೇಳಿ ಬಂದಿದ್ದವು. ಆದರೆ ಕೊನೆಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮ ಮಗನಿಗೆ ಬೆಳಗಾವಿ ಲೋಕಸಭಾ ಚುನಾವಣಾ ಟಿಕೆಟ್ ಕೊಡಿಸುವಲ್ಲಿ ಸಫಲರಾಗಿರುವಂತೆ ಕಾಣುತ್ತಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಲಿಂಗಾಯತ ಸಮುದಾಯದ ಮತಗಳು ನಿರ್ಣಾಯಕವಾಗಿರುವುದು ಸಹ ಲಿಂಗಾಯತ ಸಮುದಾಯದ ಲಕ್ಷ್ಮೀ ಹೆಬ್ಬಾಳ್ಕರ ಪುತ್ರನಿಗೆ ಟಿಕೆಟ್ ದೊರೆಯುವ ಸಾಧ್ಯತೆಗಳಿವೆ.

ಬಿಜೆಪಿಯಿಂದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌, ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗುತ್ತದೆ ಎಂದು ಹೇಳಲಾಗುತ್ತಿದೆಯಾದರೂ ಸ್ಥಳೀಯ ಮುಖಂಡರು ಶೆಟ್ಟರ್‌ಗೆ ಟಿಕೆಟ್ ನೀಡುವುದನ್ನು ವಿರೋಧಿಸುತ್ತಿದ್ದು, ಶಾಸಕ ರಮೇಶ ಜಾರಕಿಹೊಳಿಯವರು ಬೆಳಗಾವಿ ಲೋಕಸಭಾ ಬಿಜೆಪಿ ಟಿಕೆಟ್ ಸ್ಥಳೀಯರಿಗೆ ನೀಡಿ ಎಂದು ಬೇಡಿಕೆ ಇಟ್ಟಿರುವುದು ಗೊಂದಲಕ್ಕೆ ಕಾರಣವಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ಸದ್ಯದ ಪರಿಸ್ಥಿತಿ

ಬೆಳಗಾವಿ ಲೋಕಸಭಾ 8 ವಿಧಾನ ಸಭಾ ಕ್ಷೇತ್ರಗಳ ಪೈಕಿ 5 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರು ಮತ್ತು 3 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರಿದ್ದಾರೆ ಮತ್ತು ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳನ್ನು ಮನೆ ಮನೆಗೆ ಮುಟ್ಟಿಸುವ ಸಲುವಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಜಿಲ್ಲೆಯ ಮಹಿಳೆಯರನ್ನು ಸೇರಿಸಿ ಕಾರ್ಯಕ್ರಮಗಳನ್ನು ಮಾಡಿರುವುದು ಕಾಂಗ್ರೆಸ್ ಪರ ಮಹಿಳಾ ಮತದಾರರು ನಿಲ್ಲುವಂತೆ ಮಾಡುವ ಸಾಧ್ಯತೆಗಳಿವೆ.

ರಮೇಶ್ ಜಾರಕಿಹೊಳಿ -ಲಕ್ಷ್ಮೀ ಹೆಬ್ಬಾಳ್ಕರ ನಡುವೆ ಗೆಲುವಿಗಾಗಿ ಪೈಪೋಟಿ

ಬೆಳಗಾವಿ ಲೋಕಸಭಾ ಚುನಾವಣೆ ಒಂದರ್ಥದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಮತ್ತು ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿಯವರ ನಡುವಿನ ರಾಜಕೀಯ ಹೋರಾಟವೆಂದೆ ಅರ್ಥೈಸಲಾಗುತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಮತ್ತು ರಮೇಶ ಜಾರಕಿಹೊಳಿಯವರು ರಾಜಕೀಯವಾಗಿ ಪರಸ್ಪರ ಬದ್ದ ವೈರಿಗಳಾಗಿದ್ದು ಚುನಾವಣೆ ಘೋಷಣೆಯ ನಂತರ ಇವರಿಬ್ಬರ ನಡುವಿನ ರಾಜಕೀಯ ಪೈಪೋಟಿ ಮತ್ತಷ್ಟು ಜೋರಾಗುವ ಲಕ್ಷಣಗಳಿವೆ. ವಿಧಾನಸಭಾ ಚುನಾವಣೆಯಲ್ಲಿ ಪರಸ್ಪರರನ್ನು ಸೋಲಿಸುವ ಪಣ ತೊಟ್ಟಿದ್ದರು. ಆದರೆ ಇಬ್ಬರೂ ಅವರವರ ಕ್ಷೇತ್ರಗಳಲ್ಲಿ ಜಯಗಳಿಸಿದ್ದರು. ಮುಂಬರುವ ಲೋಕಸಭಾ ಚುನಾವಣೆಯನ್ನು ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ರಮೇಶ ಜಾರಕಿಹೊಳಿಯವರು ಪ್ರತಿಷ್ಠೆಯ ವಿಷಯವನ್ನಾಗಿಸಿಕೊಂಡಿದ್ದು. ರಾಜ್ಯ ರಾಜಕಾರಣದಲ್ಲಿ ಬೆಳಗಾವಿ ಲೋಕಸಭಾ ಚುನಾವಣೆ ರಾಜ್ಯದ ಗಮನ ಸೆಳೆಯುವ ಸಾಧ್ಯತೆ ದಟ್ಟವಾಗಿದೆ ಅಂತಿಮವಾಗಿ ಯಾರು ಜಯಗಳಿಸುತ್ತಾರೊ ಕಾಯ್ದು ನೋಡಬೇಕಿದೆ

ಸುನಿಲ್ ಹಂಪನ್ನವರ
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪೆನ್‌ಡ್ರೈವ್‌ ಪ್ರಕರಣ; ಅಪ್ಪ- ಮಗ ಇಬ್ಬರಿಂದಲೂ ಲೈಂಗಿಕ ಕಿರುಕುಳ- ಸಂತ್ರಸ್ತೆ ದೂರು

ಹಾಸನದ ಪ್ರಭಾವಿ ರಾಜಕೀಯ ಕುಟುಂಬಕ್ಕೆ ಸಂಬಂಧಿಸಿದ ಲೈಂಗಿಕ ಹಗರಣ ಹಲವು ತಿರುವುಗಳನ್ನು...

ಹಾಸನ ಪೆನ್‌ಡ್ರೈವ್ ಪ್ರಕರಣ | ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ನಿರ್ಧಾರ

ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ...

ಮೋದಿ ಸುಳ್ಳುಗಳು: ಭಾಗ-1 | ಕಳೆದ 10 ವರ್ಷಗಳಲ್ಲಿ ವಿಶ್ವಾದ್ಯಂತ ಭಾರತದ ವಿಶ್ವಾಸಾರ್ಹತೆ ಹೆಚ್ಚಾಗಿದೆಯೇ? ವಾಸ್ತವ ಏನು?

ಮುಸಲ್ಮಾನರಿಗೆ ಕಳೆದ 30 ವರ್ಷದಿಂದ ಮೀಸಲಾತಿ ಜಾರಿಯಲ್ಲಿದೆ. ನಂತರ ಬಸವರಾಜ ಬೊಮ್ಮಾಯಿ...