ಬೆಳಗಾವಿ | ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಸತೀಶ್ ಜಾರಕಿಹೊಳಿ ವಾಗ್ದಾಳಿ

Date:

Advertisements
  • ‘ಆತ ಮಾತನಾಡುತ್ತಾನೆಂಬ ಕಾರಣಕ್ಕೆ ನಾನು ಮಾತನಾಡುವುದಿಲ್ಲ’
  • ಬೆಳಗಾವಿಯ ಕೆಲವು ಕ್ಷೇತ್ರಗಳಿಗೆ ಅಚ್ಚರಿಯ ಅಭ್ಯರ್ಥಿ ಆಯ್ಕೆ ಎಂದ ಜಾರಕಿಹೊಳಿ

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಬೆಳಗಾವಿಯಲ್ಲಿ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ. “ಆತ (ಯತ್ನಾಳ್) ಬಾಯಿಗೆ ಬಂದ ಹಾಗೆ ಮಾತನಾಡುತ್ತಾನೆ, ಆತನ ಕಾರ್ಯವೈಖರಿ ಕೇವಲ ವಿಜಯಪುರಕಷ್ಟೇ ಮೀಸಲಾಗಿದೆ. ಆದರೆ, ನನ್ನ ಕಾರ್ಯವ್ಯಾಪ್ತಿ ಇಡೀ ರಾಜ್ಯಕ್ಕೆ ವಿಸ್ತಾರವಾಗಿರುವುದರಿಂದ ನನ್ನ ವಿರುದ್ಧ ಮಾತನಾಡುತ್ತಾನೆ. ಆತ ಮಾತಾಡಿದ ಎಂಬ ಕಾರಣಕ್ಕೆ ನಾನು ಮಾತನಾಡಲು ಆಗುವುದಿಲ್ಲ” ಎಂದು ಕಿಡಿಕಾರಿದ್ದಾರೆ.

ಕಾರ್ಯಕ್ರಮ ನಿಮಿತ್ತ ಬೆಳಗಾವಿಗೆ ಆಗಮಿಸಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಮಾಧ್ಯಮದವರೊಂದಿಗೆ ಮಾತನಾಡಿದರು. “ನಾನು ಜಿಲ್ಲೆಯಲ್ಲಿ ಮಾತ್ರವಲ್ಲದೇ ರಾಜ್ಯದಲ್ಲಿಯೂ ಪಕ್ಷ ಸಂಘಟನೆಯಲ್ಲಿ ನಿರತನಾಗಿದ್ದೇನೆ. ಹಾಗಾಗಿ, ನನಗೆ ಮಾತನಾಡಲು ಸಮಯವಿಲ್ಲ. ಆದರೆ, ಆತ ಮಾಧ್ಯಮದವರನ್ನು ನೋಡಿದ ತಕ್ಷಣ ನೀವು ಕೇಳುವುದಕ್ಕಿಂತ ಮೊದಲೇ ಕಾಲುಕೆರೆದು ಮಾತನಾಡುತ್ತಾನೆ” ಎಂದು ಲೇವಡಿ ಮಾಡಿದರು.

ಈ ಸುದ್ದಿ ಓದಿದ್ದೀರಾ? : ಗೂಂಡಾ ಸಿದ್ದರಾಮಯ್ಯನನ್ನು ಸಿಎಂ ಮಾಡಿದ್ರೆ ನಾವು, ನೀವು ಸಾಯುತ್ತೇವೆ: ಶಾಸಕ ಯತ್ನಾಳ್

Advertisements

“ಆತ ತಮ್ಮದೇ ಪಕ್ಷದ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಸಚಿವ ಮುರುಗೇಶ್ ನಿರಾಣಿ ಸೇರಿದಂತೆ ಹಲವು ನಾಯಕರ ವಿರುದ್ಧ ಮಾತಾಡುತ್ತಾನೆ. ಇನ್ನು ನಾವು ಯಾವ ಲೆಕ್ಕ? ಹಾಗಾಗಿ ನಾನು ಯಾವತ್ತೂ ಆತನನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ನಾನು ಕೊಟ್ಟಂತ ಕೆಲವು ಹೇಳಿಕೆಗಳನ್ನು ತಿರುಚಿ ನನ್ನ ತೇಜೋವಧೆ ಮಾಡಲು ಸದಾ ಪ್ರಯತ್ನಿಸುತ್ತಿರುತ್ತಾನೆ. ನಾನು ಯಾವುದೇ ಸಮುದಾಯದ ವಿರುದ್ದ ಲಘುವಾಗಿ ಮಾತನಾಡುವುದಿಲ್ಲ. ನನ್ನ ಹೇಳಿಕೆ ಬಗ್ಗೆ ನನ್ನ ಬಳಿ ಸಾಕ್ಷಿ ಇದ್ದು, ಸೂಕ್ತ ಸಂದರ್ಭದಲ್ಲಿ ಬಿಡುಗಡೆ ಮಾಡುತ್ತೇನೆ” ಎಂದು ತಿಳಿಸಿದರು.

ಇನ್ನೂ ಬೆಳಗಾವಿ ಜಿಲ್ಲೆಯ ರಾಜಕೀಯದ ಬಗ್ಗೆ ಮಾತನಾಡುತ್ತಾ, “ಜಿಲ್ಲೆಯ 9 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದ್ದು, ಉಳಿದ 9 ಅಭ್ಯರ್ಥಿಗಳ ಪಟ್ಟಿಯು ಆದಷ್ಟು ಬೇಗ ಬಿಡುಗಡೆ ಮಾಡಲಾಗುತ್ತದೆ. ಇದರಲ್ಲಿ 5 ಕ್ಷೇತ್ರಗಳಲ್ಲಿ ಯಾವುದೇ ಗೊಂದಲವಿಲ್ಲ. ಉಳಿದ 4 ಕ್ಷೇತ್ರಗಳಲ್ಲಿ ಗೊಂದಲಗಳಿದ್ದು, ಕೆಲವು ಕ್ಷೇತ್ರಕ್ಕೆ ಅಚ್ಚರಿಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಚಿಂತಿಸಲಾಗುತ್ತಿದೆ. ನಮಗೆ ಕಾಂಗ್ರೆಸ್‌ ಪಕ್ಷದ ಗೆಲುವಷ್ಟೇ ಮುಖ್ಯ” ಎಂದು ತಿಳಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X