ಬೆಳಗಾವಿ ಅಧಿವೇಶನ | ಸಂತಾಪ ಸೂಚಕ ನಿರ್ಣಯ ಮುಕ್ತಾಯ; 3.15ಕ್ಕೆ ಕಲಾಪ ಮುಂದೂಡಿಕೆ

Date:

  • ಅಗಲಿದ ಗಣ್ಯರಿಗೆ ಸಂತಾಪ ಸೂಚನೆ 
  • 10 ದಿನಗಳ ಕಾಲ ಅಧಿವೇಶನ ನಡೆಯಲಿದೆ

16ನೇ ವಿಧಾನಸಭೆಯ ಎರಡನೆಯ ಅಧಿವೇಶನ (ಚಳಿಗಾಲ ಅಧಿವೇಶನ) ಬೆಳಗಾವಿಯ ಸುವರ್ಣಸೌಧದಲ್ಲಿ ಸೋಮವಾರ ಆರಂಭವಾಗಿದೆ.

ಡಿ.4ರಿಂದ ಡಿ.15ರವರೆಗೆ ಹತ್ತು ದಿನಗಳ ಕಾಲ ಅಧಿವೇಶನ ನಡೆಯಲಿದೆ. ಸಭಾಧ್ಯಕ್ಷ ಯು ಟಿ ಖಾದರ್‌ ಅವರು ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸೇರಿದಂತೆ ಸಚಿವರು ಹಾಗೂ ಶಾಸಕರಿಗೆ ಸಂವಿಧಾನ ಪೀಠಿಕೆ ಬೋಧಿಸುವುದರೊಂದಿಗೆ ಅಧಿವೇಶನ ಆರಂಭಿಸಿದರು.

ಸಂತಾಪ ಸೂಚಕ ನಿರ್ಣಯ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

16ನೇ ವಿಧಾನಸಭೆಯ ಮೊದಲ ಅಧಿವೇಶನದಿಂದ ಈವರೆಗೂ ಅಗಲಿದ ಗಣ್ಯರಾದ
ವಿಧಾನಸಭೆಯ ಮಾಜಿ ಸಭಾಧ್ಯಕ್ಷರಾದ ಡಿ ಬಿ ಚಂದ್ರೇಗೌಡ, ಮಾಜಿ ಸಚಿವ ರಂಗದೇವರಾಯಲು, ಮಾಜಿ ಶಾಸಕ ವೆಂಕಟೇಶಪ್ಪ, ಶ್ರೀಕಾಂತ ಶೆಟ್ಟಪ್ಪ ಭೀಮಣ್ಣವರ್‌, ವಿಲಾಸಬಾಬು ಅಲಮಮೇಕರ್‌ ಹಾಗೂ ಈಶಾನ್ಯ ರಾಜ್ಯಗಳ ಮಾಜಿ ರಾಜ್ಯಪಾಲರಾಗಿದ್ದ ಪಿ ಬಿ ಆಚಾರ್ಯ ಸೇರಿದಂತೆ ದಾಳಿಯಲ್ಲಿ ನಿಧನ ಹೊಂದಿದ ಸೈನಕರಿಗೆ ಸಂತಾಪ ಸೂಚಕ ನಿರ್ಣಯವನ್ನು ಸಭಾಧ್ಯಕ್ಷ ಯು ಟಿ ಖಾದರ್‌ ಅವರು ಮಂಡಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ವಿರೋಧ ಪಕ್ಷದ ನಾಯಕ ಆರ್‌ ಅಶೋಕ್, ಸಚಿವರಾದ ಡಾ. ಜಿ. ಪರಮೇಶ್ವರ್‌, ಎಚ್‌ ಕೆ ಪಾಟೀಲ್, ಶಿವರಾಜ ತಂಗಡಗಿ ಹಾಗೂ ಬಿಜೆಪಿ ರಾಜ್ಯಧ್ಯಕ್ಷ ಬಿ ವೈ ವಿಜಯೇಂದ್ರ, ಶಾಸಕರಾದ ಬಸವರಾಜ ರಾಯರೆಡ್ಡಿ ಸೇರಿದಂತೆ ಸಭಾಧ್ಯಕ್ಷರು ಸೂಚಿಸಿದ ಸದಸ್ಯರು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಪ್ರಾರಂಭವಾದ ವಿಧಾನ ಮಂಡಲ ಅಧಿವೇಶನದಲ್ಲಿ ವಿಧಾನ ಸಭಾ ಕಲಾಪದಲ್ಲಿ ಪಾಲ್ಗೊಂಡು, ಅಗಲಿದ ಗಣ್ಯರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರ ಪರಿಹಾರ | ಕೇಳಿದ್ದು 18 ಸಾವಿರ ಕೋಟಿ – ಕೊಟ್ಟಿದ್ದು 3 ಸಾವಿರ ಕೋಟಿ; ಬಿಜೆಪಿ ವಿರುದ್ಧ ನೆಟ್ಟಿಗರ ಕಿಡಿ

ರಾಜ್ಯದಲ್ಲಿ ತೀವ್ರ ಬರ ಎದುರಾಗಿದ್ದರೂ, ರಾಜ್ಯಕ್ಕೆ ಕೇಂದ್ರ ಸರ್ಕಾರ ಬರ ಪರಿಹಾರ...

ಕಸ ಸುರಿಯುವ ಜಾಗವಾಗಿ ಮಾರ್ಪಟ್ಟ ಬೆಂಗಳೂರಿನ ಮೇಲ್ಸೇತುವೆಗಳು!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ವಾಹನ ಸವಾರರಿಗೆ ಸಂಚಾರ ದಟ್ಟಣೆ ತಲೆನೋವಾಗಿ ಪರಿಣಮಿಸಿದೆ....

2ನೇ ಹಂತದ ಚುನಾವಣೆ | ಮತಗಟ್ಟೆಗೆ ಬಾರದ ಹೆಚ್ಚಿನ ಮತದಾರರು; ಬಿಜೆಪಿ ವಿರೋಧಿ ಅಲೆಯ ಸೂಚನೆಯೇ?

ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಶುಕ್ರವಾರ ಮುಗಿದಿದೆ. 13 ರಾಜ್ಯಗಳ...

ಬೆಂಗಳೂರು | ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯ: ಸರಣಿ ಅಪಘಾತ

ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯದಿಂದ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ...