ಬೆಳಗಾವಿ ಅಧಿವೇಶನ | ರೈತರ ಧರಣಿ; ಸಚಿವರಿಂದ ಕೃಷಿ ಕಾಯ್ದೆ ಹಿಂಪಡೆಯುವ ಭರವಸೆ

Date:

  • ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಧರಣಿ
  • ರೈತರ ಹಿತ ಕಾಪಾಡಲು ಸರ್ಕಾರ ಬದ್ಧವಾಗಿದೆ

ಹಲವು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಸುವರ್ಣಸೌಧದ ಎದುರು ಸೋಮವಾರ ಧರಣಿ ನಡೆಯಿತು.

ಧರಣಿ ಸ್ಥಳಕ್ಕೆ ಭೇಟಿ ನೀಡಿದ ಸಮಾಜ ಕಲ್ಯಾಣ ಸಚಿವ ಎಚ್‌ ಸಿ ಮಹಾದೇವಪ್ಪ, “ಈ ಹಿಂದಿನ ರಾಜ್ಯ ಸರ್ಕಾರ ಜಾರಿಗೊಳಿಸಿದ ಕೃಷಿ ಕಾಯ್ದೆಯನ್ನು ಹಿಂಪಡೆಯಲಾಗುವುದು. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತರಲಾಗುವುದು” ಎಂದು ಭರವಸೆ ನೀಡಿದರು.

“ಹಾಲಿನ ದರ ಹೆಚ್ಚಳ, ಕೃಷಿ ಕಾಯ್ದೆ ವಾಪಸ್, ಕನಿಷ್ಠ ಬೆಂಬಲ ಬೆಲೆಯ ಶಾಸನಬದ್ಧ ಅನುಷ್ಠಾನ, ಬರಗಾಲದ ತುರ್ತು ಕಾರ್ಯಕ್ರಮಗಳು ಜಾರಿ, ಸೆಪ್ಟೆಂಬರ್ 22ರ ವಿದ್ಯುತ್ ಕಾಯ್ದೆ ವಾಪಸ್‌, ಕಬ್ಬಿಗೆ ಎಫ್‌ಆರ್‌ಪಿ ಜೊತೆ ಎಸ್ಎಪಿ ನೀಡುವುದು ಮುಂತಾದ ಬೇಡಿಕೆಗಳನ್ನು ರೈತರು ಸಲ್ಲಿಸಿದ್ದಾರೆ. ಇವುಗಳ ಬಗ್ಗೆ ಬೆಂಗಳೂರಿಗೆ ಹೋಗಿ ವಿಧಾನಸೌಧದಲ್ಲಿ ಚರ್ಚೆ ಮಾಡುತ್ತೇವೆ” ಎಂದು ಭರವಸೆ ನೀಡಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚಳಿಗಾಲದ ಅಧಿವೇಶನದಲ್ಲಿ ಕಾಂಗ್ರೆಸಿನ ಚಳಿ ಬಿಡಿಸಲಿದೆಯೇ ಬಿಜೆಪಿ?

“ರೈತರ ಹಿತ ಕಾಪಾಡಲು ಸರ್ಕಾರ ಬದ್ಧವಾಗಿದೆ. ಕೇಂದ್ರದ ಪರಿಸರ ಇಲಾಖೆಯಿಂದ ಅನುಮತಿ ಸಿಕ್ಕ ಬಳಿಕ ಮಹದಾಯಿ ಮತ್ತು ಮೇಕೆದಾಟು ಯೋಜನೆ ಕಾಮಗಾರಿ ಆರಂಭಿಸಲು ಯಾವುದೇ ತಕರಾರು ಇಲ್ಲ” ಎಂದರು.

ಧರಣಿಗೂ ಮುನ್ನ ಬೆಳಗಾವಿಯ ರಾಣಿ ಚನ್ನಮ್ಮ ವೃತ್ತದಲ್ಲಿ ರೈತರು ಪ್ರತಿಭಟನೆ ನಡೆಸಿ, ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು. ಇದಕ್ಕೆ ಅವಕಾಶ ನೀಡದ ಪೊಲೀಸರು ರೈತರನ್ನು ಸರ್ಕಾರಿ ಬಸ್ಸಿನಲ್ಲಿ ಹತ್ತಿಸಿ ಖೊಂಡಸಕೊಪ್ಪದಲ್ಲಿ ಹಾಕಿದ ಶಾಮಿಯಾನದ ಬಳಿ ಬಿಟ್ಟರು.

ಕೋಡಿಹಳ್ಳಿ ಚಂದ್ರಶೇಖರ ಮಾತನಾಡಿ, “ರೈತರಿಗೆ ಮಾರಕವಾದ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಹೇಳಿತ್ತು. ಆದರೆ, ಅದಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ರೈತರ ಮನವಿಗೆ ಬೆಲೆ ಕೊಡದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ ಖಚಿತ” ಎಂದು ಎಚ್ಚರಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ ತನ್ನ ಭದ್ರಕೋಟೆಯಲ್ಲೂ ಗೆದ್ದೇ ಗೆಲ್ಲುತ್ತೇವೆ ಎನ್ನುವ ವಿಶ್ವಾಸದಲ್ಲಿಲ್ಲ: ಸಚಿವ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ನಡೆದ ಮೊದಲ ಹಂತದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾದ ವಾತಾವರಣ...

ಪಶ್ಚಿಮ ಬಂಗಾಳ| ಬಿಜೆಪಿಯ ಬಿರ್ಭೂಮ್ ಕ್ಷೇತ್ರದ ಚುನಾವಣಾ ಅಭ್ಯರ್ಥಿ ನಾಮಪತ್ರ ರದ್ದು

ಮಾಜಿ ಐಪಿಎಸ್ ಅಧಿಕಾರಿ ಮತ್ತು ಬಿರ್ಭೂಮ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ...

ಮಂಡ್ಯ | 8,000 ಕಿ.ಮೀ ದೂರದಿಂದ ಬಂದು ಮತದಾನ ಮಾಡಿದ ಯುವತಿ!

ಯುವತಿಯೊಬ್ಬರು ಬರೋಬರಿ 8,000 ಕಿ.ಮೀ ದೂರದ ಲಂಡನ್‌ನಿಂದ ಮಂಡ್ಯಕ್ಕೆ ಬಂದು ಮತದಾನ...

ಕಲ್ಲು ತೂರಾಟ, ಗಲಾಟೆ ನಡುವೆ ಬಹುತೇಕ ಕಡೆ ರಾಜ್ಯದಲ್ಲಿ ಶಾಂತಿಯುತ ಮತದಾನ

ದೇಶದಲ್ಲಿ ಶುಕ್ರವಾರ (ಏ.26) ಎರಡನೇ ಹಂತದ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು, ರಾಜ್ಯದ...