ಬಳ್ಳಾರಿ | ಕಾಂಗ್ರೆಸ್‌ ಶಾಸಕ ನಾರಾ ಭರತ್‌ ರೆಡ್ಡಿ ಮನೆ, ಕಚೇರಿಯಲ್ಲಿನ ಇ.ಡಿ ಶೋಧ ಮುಕ್ತಾಯ

Date:

ಬಳ್ಳಾರಿ ನಗರ ಕಾಂಗ್ರೆಸ್‌ ಶಾಸಕ ನಾರಾ ಭರತ್‌ ರೆಡ್ಡಿ ಅವರ ಮನೆ ಮತ್ತು ಕಚೇರಿಯಲ್ಲಿ ಶನಿವಾರದಿಂದ ನಡೆಯುತ್ತಿದ್ದ ಜಾರಿ ನಿರ್ದೇಶನಾಲಯ (ಇ.ಡಿ)ದ ಅಧಿಕಾರಿಗಳ ಶೋಧ ಭಾನುವಾರ ರಾತ್ರಿ ಮುಗಿದಿದೆ.

ನಾರಾ ಭರತ್‌ ರೆಡ್ಡಿಗೆ ಶನಿವಾರ ಬೆಳ್ಳಂಬೆಳಗ್ಗೆ ಇ,ಡಿ ಅಧಿಕಾರಿಗಳು ಶಾಕ್‌ ನೀಡಿದ್ದರು. ಶಾಸಕರ ನಿವಾಸದ ಮೇಲೆ ಏಕಕಾಲದಲ್ಲಿ ನಾಲ್ಕು ಕಡೆ ದಾಳಿ ನಡೆಸಿರುವ ಅಧಿಕಾರಿಗಳು ಎರಡು ದಿನ ದಾಖಲೆಗಳನ್ನು ಪರಿಶೀಲಿಸಿದ್ದಾರೆ.

ಗಾಂಧಿನಗರದಲ್ಲಿರುವ ಭರತ್‌ ರೆಡ್ಡಿ ಕಚೇರಿಯಲ್ಲಿ ಭಾನುವಾರ ರಾತ್ರಿ 11.30ರ ವರೆಗೆ ಪರಿಶೀಲನೆ ನಡೆಸಿದ ಅಧಿಕಾರಿಗಳು, ನಂತರ ನಿರ್ಗಮಿಸಿದರು. ಹಣ ಅಕ್ರಮ ವರ್ಗಾವಣೆ ಪ್ರಕರಣವೊಂದರ ತನಿಖೆಯ ಭಾಗವಾಗಿ ಭರತ್ ರೆಡ್ಡಿ ಮೇಲೆ ಇ.ಡಿ ದಾಳಿ ನಡೆದಿದೆ ಎನ್ನಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಶಾಸಕರ ಬೆಂಗಳೂರು ಹಾಗೂ ಚೆನ್ನೈನ ಕಚೇರಿಗಳ ಮೇಲೂ ದಾಳಿ ನಡೆದಿದೆ ಎನ್ನಲಾಗಿದೆ. ಶಾಸಕ ಭರತ್‌ ರೆಡ್ಡಿ ಅವರ ಕುಟುಂಬ ಗ್ರಾನೈಟ್‌ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದು, ಕೊಪ್ಪಳ ಜಿಲ್ಲೆಯ ಕುಕನೂರು ಹಾಗೂ ಆಂಧ್ರ ಪ್ರದೇಶದ ಒಂಗೋಲ್‌ಗಳಲ್ಲಿ ಕ್ವಾರಿಗಳನ್ನು ಹೊಂದಿದೆ. ಇನ್ನು, ಇಡಿ ಅಧಿಕಾರಿಗಳ ತಂಡ ಬೆಂಗಳೂರಿನಿಂದ ಆಗಮಿಸಿದ್ದು, ಸ್ಥಳೀಯ ಪೊಲೀಸರಿಗೂ ಮಾಹಿತಿ ನೀಡದೆ ದಾಳಿ ನಡೆಸಿರುವ ಬಗ್ಗೆ ಮಾಹಿತಿ ಸಿಕ್ಕಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಸರ್ಕಾರ ಒಪ್ಪದೆ ಜಾತಿಗಣತಿ ವರದಿಯ ಮಾಹಿತಿ ಬಹಿರಂಗ ಪಡಿಸಲು ಸಾಧ್ಯವಿಲ್ಲ: ಜಯಪ್ರಕಾಶ್ ಹೆಗ್ಡೆ

"ರಾಜ್ಯದ 5.98 ಕೋಟಿ ಜನಸಂಖ್ಯೆಯನ್ನು ಸಮೀಕ್ಷೆ ಮಾಡಿದ ಸಾಮಾಜಿಕ ಶೈಕ್ಷಣಿಕ ಜನಗಣತಿ...

ಅಲ್ಪಸಂಖ್ಯಾತರ ಮೇಲೆ ಆರೋಪ ಬಂದರೆ ಪ್ರಕರಣ ಮುಚ್ಚಿಹಾಕಲು ಸರ್ಕಾರದಿಂದ ನಿರ್ದೇಶನ: ಆರ್‌ ಅಶೋಕ್‌ ಆರೋಪ

ಅಲ್ಪಸಂಖ್ಯಾತರ ಮೇಲೆ ಆರೋಪ ಬಂದರೆ ಅದನ್ನು ಮುಚ್ಚಿಹಾಕಿ, ಬಹು ಸಂಖ್ಯಾತರ ಮೇಲೆ...

ದೇವರು-ಧರ್ಮದ ಹೆಸರಲ್ಲಿ ಮರುಳು ಮಾಡಿ ನಾವು ಅಧಿಕಾರ ನಡೆಸಲ್ಲ: ಸಿದ್ದರಾಮಯ್ಯ

ನಾವು ನಿಮ್ಮನ್ನು ದೇವರು-ಧರ್ಮದ ಹೆಸರಲ್ಲಿ ಭಾವನಾತ್ಮಕವಾಗಿ ಕೆರಳಿಸಿ ಅಧಿಕಾರ ನಡೆಸುವುದಿಲ್ಲ. ಅನ್ನ-ಆರೋಗ್ಯ-ಅಕ್ಷರ-ಸೂರು-ನೀರಿಗಾಗಿ...

ಲಾಲೂ ಪ್ರಸಾದ್ ಟೀಕೆಯನ್ನೇ ಅಸ್ತ್ರವನ್ನಾಗಿಸಿಕೊಂಡ ಬಿಜೆಪಿ: ‘ಮೋದಿ ಕಾ ಪರಿವಾರ್’ ಅಭಿಯಾನ!

ನಿನ್ನೆ ಪಾಟ್ನಾದಲ್ಲಿ ನಡೆದಿದ್ದ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ರಾಷ್ಟ್ರೀಯ ಜನತಾ ದಳ...