ದೇವರಾಜ ಅರಸು ಅವರ ಕಾರ್ಯಕ್ರಮಗಳ ಫಲಾನುಭವಿಗಳು ಸಾಮಾಜಿಕ ನ್ಯಾಯದ ಪರವಾಗಿರಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

ದೇವರಾಜ ಅರಸು ಅವರ ಕಾರ್ಯಕ್ರಮಗಳ ಅನುಕೂಲವನ್ನು ಪಡೆದ ಫಲಾನುಭವಿಗಳು ಮತ್ತು ಅವರ ಮಕ್ಕಳು ಶಾಶ್ವತವಾಗಿ ಸಾಮಾಜಿಕ ನ್ಯಾಯದ ಪರವಾಗಿ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಯುವ ಸಮೂಹಕ್ಕೆ ಕರೆ ನೀಡಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಹಮ್ಮಿಕೊಂಡಿದ್ದ ದೇವರಾಜು ಅರಸು ಅವರ 108ನೇ ಜನ್ಮ ದಿನಾಚರಣೆ ಹಾಗೂ ಡಿ. ದೇವರಾಜ ಅರಸು ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಕನ್ನಡ ನೆಲ ಸಾಮಾಜಿಕ ನ್ಯಾಯವನ್ನು ಕ್ರಾಂತಿಕಾರಿಯಾಗಿ ಜಾರಿ ಮಾಡಿದ ಇತಿಹಾಸ ಹೊಂದಿದೆ. ಬಸವಣ್ಣನವರಿಂದ ಹಿಡಿದು ಕೃಷ್ಣರಾಜ ಒಡೆಯರು ಮತ್ತು ದೇವರಾಜ ಅರಸು ಅವರವರೆಗೂ ಸಾಮಾಜಿಕ ನ್ಯಾಯ ಒದಗಿಸಿದ ಚರಿತ್ರೆ ನಮ್ಮ ನಾಡಿಗೆ ಇದೆ.‌ ಅಧಿಕಾರ ಮತ್ತು ಸಂಪತ್ತು ಕೆಲವರ ಕೈಯಲ್ಲಿ ಮಾತ್ರ ಇರಬಾರದು ಎನ್ನುವ ಆಶಯ ಬಸವಣ್ಣನವರ ಕಾಲದಿಂದಲೂ ಈ ನೆಲದಲ್ಲಿ ನೆಲೆಯೂರಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ದೇವರಾಜ ಅರಸರು ಜಾರಿಗೆ ತಂದಿದ್ದು, ಕಾಗೋಡು ತಿಮ್ಮಪ್ಪನವರು ಹೋರಾಟ ಮಾಡಿದ್ದು ಉಳುವವನೇ ಭೂಮಿ ಒಡೆಯ ಆಗಬೇಕು ಎನ್ನುವುದಾಗಿತ್ತು. ಆದರೆ ಈಗ ಬಿಜೆಪಿ ಬಂದ ಮೇಲೆ “ಉಳ್ಳವನೇ ಭೂಮಿ ಒಡೆಯ” ಎನ್ನುವಂತಾಗಿದೆ ಎಂದು ಟೀಕಿಸಿದರು.

ಕಾಗೋಡು ಹೋರಾಟ ಮತ್ತು ಗೇಣಿ ಹೋರಾಟದ ಫಲಾನುಭವಿಗಳು ಮತ್ತು ಈಗಿನ ಪೀಳಿಗೆಯ ಯುವಕ, ಯುವತಿಯರು ಇದನ್ನೆಲ್ಲಾ ಅರ್ಥ ಮಾಡಿಕೊಳ್ಳಬೇಕು. ಸಾಮಾಜಿಕ ನ್ಯಾಯದ ಪರವಾಗಿ ಇರಬೇಕು ಎಂದರು.

ಸಂವಿಧಾನದಲ್ಲಿ ಮೀಸಲಾತಿಗೆ ಅವಕಾಶ ಇದ್ದರೂ ಅದು ಜಾರಿ ಆಗಿರಲಿಲ್ಲ. ರಾಜ್ಯದಲ್ಲಿ ದೇವರಾಜು ಅರಸರು‌ ಮುಖ್ಯಮಂತ್ರಿಯಾಗಿ ಹಾವನೂರು ವರದಿ ತರಿಸಿಕೊಂಡು ಅದನ್ನು ಜಾರಿ ಮಾಡುವ ಎದೆಗಾರಿಕೆ ತೋರಿಸಿದರು. ಹೀಗೆ ಮಾಡುವಾಗ ಎಲ್ಲ ಜಾತಿ-ಸಮುದಾಯಗಳನ್ನೂ ವಿಶ್ವಾಸಕ್ಕೆ ತೆಗೆದುಕೊಂಡರು. ಆ ಮೂಲಕ ಸಂವಿಧಾನಬದ್ದವಾದ ಮೀಸಲಾತಿಯನ್ನು ಕನ್ನಡ ನೆಲದಲ್ಲಿ ಜಾರಿ ಮಾಡಿದರು ಎಂದು ವಿವರಿಸಿದರು.

ಕಾಗೋಡು ತಿಮ್ಮಪ್ಪ ಅವರಿಂದ ಅರಸು ಪ್ರಶಸ್ತಿಯ ಮೌಲ್ಯ ಹೆಚ್ಚಾಗಿದೆ

ಸಮಾಜವಾದಿ ಚಳವಳಿ ಮತ್ತು ಗೇಣಿ ಹೋರಾಟಗಾರ ಕಾಗೋಡು ತಿಮ್ಮಪ್ಪ ಅವರಿಗೆ ದೇವರಾಜು ಅರಸು ಪ್ರಶಸ್ತಿ ಲಭಿಸಿರುವುದರಿಂದ ಪ್ರಶಸ್ತಿಯ ಮೌಲ್ಯ ಹೆಚ್ಚಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ನಾನು ಮುಖ್ಯಮಂತ್ರಿ ಆಗಿರುವ ಅವಧಿಯಲ್ಲೇ ಕಾಗೋಡು ತಿಮ್ಮಪ್ಪ ಅವರಿಗೆ ಅರಸು ಪ್ರಶಸ್ತಿ ಲಭಿಸಿರುವುದು ನನಗೆ ಅತ್ಯಂತ ಖುಷಿಯಾಗಿದೆ. ಬಹಳಷ್ಟು ಯುವ ನಾಯಕರನ್ನು ಕಾಗೋಡು ತಿಮ್ಮಪ್ಪ ಬೆಳೆಸಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಪುನಾರಚನೆ: ರಾಜ್ಯದ ಸಯ್ಯದ್ ನಾಸೀರ್‌ ಹುಸೇನ್‌ ಅವರಿಗೆ ಸ್ಥಾನ

ಹಿಂದುಳಿದ ವರ್ಗಗಳ ಹರಿಕಾರ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜು ಅರಸು ಅವರ ಜನ್ಮ ದಿನಾಚರಣೆ ಪ್ರಯುಕ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಪಶ್ಚಿಮ ದ್ವಾರದಲ್ಲಿ ಅರಸು ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಬಳಿಕ ಅರಸು ಅವರ ಕಾರಿನಲ್ಲೇ ಪ್ರಯಾಣಿಸಿ ವಿಧಾನಸೌಧದ ಸಭಾಂಗಣಕ್ಕೆ ಆಗಮಿಸಿ ಸದ್ಭಾವನಾ ದಿನಾಚರಣೆಯ ಪ್ರತಿಜ್ಞೆ ಬೋಧಿಸಿದರು.

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಸಚಿವರಾದ ಶಿವರಾಜ್ ಎಸ್ ತಂಗಡಗಿ, ಕೆ ಜೆ ಜಾರ್ಜ್, ಮಧು ಬಂಗಾರಪ್ಪ, ಶಾಸಕ ಗೋಪಾಲಕೃಷ್ಣ ಬೇಳೂರು, ಪರಿಷತ್‌ ಸದಸ್ಯ ನಾಗರಾಜ ಯಾದವ್, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಅರಸು ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಯಿತು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತಗಟ್ಟೆಯ ಮತದಾನದ ಅಂಕಿಅಂಶ ನೀಡುವಂತೆ ಚುನಾವಣಾ ಆಯೋಗಕ್ಕೆ ಸೂಚನೆ ನೀಡಲು ಸುಪ್ರೀಂ ನಕಾರ

ಪ್ರತಿ ಮತಗಟ್ಟೆಯ ಮತದಾನದ ಅಂಕಿಅಂಶಗಳನ್ನು ಒದಗಿಸುವ ಫಾರ್ಮ್‌ 17ಸಿ ಪ್ರತಿಗಳನ್ನು ತನ್ನ...

ವಿಜಯಪುರ | ರೈತರ ಸಮಸ್ಯೆಗಳ ಪರಿಹಾರಕ್ಕೆ ರೈತಸಂಘ ಆಗ್ರಹ

ರೈತರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು...

ಮೇ ಸಾಹಿತ್ಯ ಮೇಳ | ಹುಚ್ಚಮ್ಮ ಚೌಧರಿ ಕುಣಿಕೇರಿಗೆ ‘ಲಕ್ಷ್ಮಿಬಾಯಿ ಕಟ್ಟಿಮನಿ ಸಮಾಜಮುಖಿ ಮಹಿಳೆ ಪ್ರಶಸ್ತಿ’

ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ರಾಜ್ಯದ ಸಾಹಿತ್ಯ-ಸಾಂಸ್ಕೃತಿಕ ಚಳುವಳಿಯಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿರುವ...

ಪ್ರಜ್ವಲ್‌ ರೇವಣ್ಣ ಪಾಸ್‌ಪೋರ್ಟ್ ರದ್ದುಗೊಳಿಸಲು ಪ್ರಕ್ರಿಯೆ ಆರಂಭ: ಸಚಿವ ಪರಮೇಶ್ವರ್‌

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದುಗೊಳಿಸುವ ಕುರಿತು ನಾವು...