ಬಂಗಾಳ ಚುನಾವಣೆ | ಏಕಾಂಗಿ ಸ್ಪರ್ಧೆಗೆ ಕಾಂಗ್ರೆಸ್ ನಿರ್ಧಾರ!

Date:

ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲ 294 ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಕಾಂಗ್ರೆಸ್‌ ಘೋಷಿಸಿದೆ.

- Advertisement -

ಚುನಾವಣೆ ತಯಾರಿ ಭಾಗವಾಗಿ ದೆಹಲಿಯಲ್ಲಿ ಕಾಂಗ್ರೆಸ್‌ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಭೆ ನಡೆಸಿರುವ ಕಾಂಗ್ರೆಸ್‌ ಹೈಕಮಾಂಡ್‌ನ ನಾಯಕರು ಮತ್ತು ರಾಜ್ಯ ನಾಯಕರು ಏಕಾಂಗಿ ಸ್ಪರ್ಧೆಗೆ ನಿರ್ಧರಿಸಿದ್ದಾರೆ. ಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, ರಾಜ್ಯ ಉಸ್ತುವಾರಿ ಗುಲಾಂ ಅಹ್ಮದ್ ಮಿರ್, ಬಂಗಾಳ ರಾಜ್ಯಾಧ್ಯಕ್ಷ ಸುಬಾಂಕರ್ ಸರ್ಕಾರ್, ಸಂಸದ ಇಶಾ ಖಾನ್ ಚೌಧರಿ ಹಾಗೂ ಅಧೀರ್ ರಂಜನ್ ಚೌಧರಿ ಸೇರಿದಂತೆ ಹಲವು ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಬಂಗಾಳ ಚುನಾವಣೆಯಲ್ಲಿ ಪಕ್ಷವು ತನ್ನ ನೆಲೆಯನ್ನು ಕಂಡುಕೊಳ್ಳಲು, ಉತ್ತಮ ಪ್ರದರ್ಶನ ನೀಡಲು ನಡೆಸಬೇಕಾದ ಪ್ರಮುಖ ಕಾರ್ಯತಂತ್ರಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ. ಚುನಾವಣೆಯಲ್ಲಿ ಕಾಂಗ್ರೆಸ್‌ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಲಾಗಿದೆ ಎಂದು ಗುಲಾಂ ಅಹ್ಮದ್ ಮಿರ್ ತಿಳಿಸಿದ್ದಾರೆ.

ಕಳೆದ ಚುನಾವಣೆಯಲ್ಲಿ ಬಂಗಾಳದಲ್ಲಿ ಪಕ್ಷವು ಮೈತ್ರಿಯಲ್ಲಿ ಸ್ಪರ್ಧಿಸಿತ್ತು. ಆ ಮೈತ್ರಿಯಿಂದಾಗಿ ಪಕ್ಷದ ತಳಮಟ್ಟದ ಕಾರ್ಯಕರ್ತರು ಉತ್ಸಾಹ ಕಳೆದುಕೊಂಡಿದ್ದರು. ಈ ಬಾರಿ, ಏಕಾಂಗಿ ಸ್ಪರ್ಧೆಯಿಂದ ಕಾರ್ಯಕರ್ತರು ಆತ್ಮಸ್ಥೈರ್ಯದಿಂದ ಕೆಲಸ ಮಾಡುವ ಭರವಸೆ ಇದೆ ಎಂದು ಅವರು ಹೇಳಿಕೊಂಡಿದ್ದಾರೆ.

2021ರ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಎಡರಂಗದೊಂದಿಗೆ ಕಾಂಗ್ರೆಸ್‌ ಮೈತ್ರಿ ಮಾಡಿಕೊಂಡಿತ್ತು. ಆದಾಗ್ಯೂ, ಎಡರಂಗವಾಗಲೀ, ಕಾಂಗ್ರೆಸ್‌ ಆಗಲೀ ಒಂದೂ ಸ್ಥಾನವನ್ನು ಗೆಲ್ಲಲು ಸಾಧ್ಯವಾಗಿರಲಿಲ್ಲ.

WhatsApp Image 2023 06 13 at 1.10.34 PM e1686642227658
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

26 ಬಾರಿ ಸೋತರೂ ಕುಗ್ಗದ ಛಲ; 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕ ಹುದ್ದೆ ಪಡೆದ ವೃದ್ಧ

ಸರಿಯಾದ ಪ್ರಯತ್ನ ಮತ್ತು ಛಲವಿದ್ದರೆ ವಯಸ್ಸು ಕೇವಲ ಒಂದು ಸಂಖ್ಯೆಯಷ್ಟೇ ಎಂಬುದನ್ನು...

1,870 ಕೋಟಿ ರೂ. ದೇಣಿಗೆ ದಂಧೆ ಆರೋಪ: ಗುಜರಾತ್‌ನ 3 ರಾಜಕೀಯ ಪಕ್ಷಗಳ ಅಕ್ರಮ ಬಯಲು

ಗುಜರಾತ್‌ನಲ್ಲಿ ನೋಂದಾಯಿತವಾಗಿದ್ದ, ಆದರೆ ಮಾನ್ಯತೆ ಪಡೆಯದ ಮೂರು ರಾಜಕೀಯ ಪಕ್ಷಗಳು ಆದಾಯ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ ಮಂಡಳಿಯ ಚಪ್ಪಾಳೆ

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ...

ತಮಗೆ ಬಿಜೆಪಿ‌ ಸೇರುವಂತೆ ಗ್ಯಾನೇಶ್ ಕುಮಾರ್ ಆಹ್ವಾನಿಸಿದ್ದರು: ನಿವೃತ್ತ ಐಎಎಸ್ ಜಿಜಿ ಥಾಮ್ಸನ್

ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರು 2016ರಲ್ಲಿ ಸರ್ಕಾರಿ ಸೇವೆಯಲ್ಲಿದ್ದಾಗ...