ದ್ವೇಷ ಭಾಷಣ | ಶೋಭಾ ಕರಂದ್ಲಾಜೆ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲು

Date:

Advertisements

ಬೆಂಗಳೂರಿನ ನಗರ್ತ ಪೇಟೆಯಲ್ಲಿ ನಡೆದಿದ್ದ ಘಟನೆಗೆ ಸಂಬಂಧಿಸಿದಂತೆ ನಡೆದಿದ್ದ ಪ್ರತಿಭಟನೆಯು ಈಗ ಬಿಜೆಪಿಗೆ ಮುಳುವಾಗಿದೆ. ದ್ವೇಷ ಭಾಷಣಗೈದಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಮತ್ತೊಂದು ಎಫ್‌ಐಆರ್ ಬೆಂಗಳೂರಿನಲ್ಲಿ ದಾಖಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಕರ್ನಾಟಕ ಚುನಾವಣಾ ಆಯೋಗವು, “ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿಯವರು ಮಾ.21ರಂದು ಬೆಂಗಳೂರಿನ ಕಾಟನ್‌ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ದೂರಿನ ಅನ್ವಯ ಜನಪ್ರತಿನಿಧಿ ಕಾಯ್ದೆಯ 123 (3A), 125 ಮತ್ತು 123 (3) ಯ ಅನ್ವಯ ಕೇಂದ್ರ ಸಚಿವೆ ಮತ್ತು ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್ ದಾಖಲಾಗಿದೆ” ಎಂದು ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದೆ.

ತಮಿಳುನಾಡಿನಲ್ಲೂ ದಾಖಲಾಗಿತ್ತು ಎಫ್‌ಐಆರ್

Advertisements

ಬೆಂಗಳೂರಿನ ನಗರತ್‌ ಪೇಟೆಯಲ್ಲಿ ನಡೆದಿದ್ದ ‘ಲೌಡ್ ಸ್ಪೀಕರ್’ ಘಟನೆಗೆ ಸಂಬಂಧಿಸಿದಂತೆ ಮುಸ್ಲಿಂ ಯುವಕರ ವಿರುದ್ದ ನಿನ್ನೆ ಬಿಜೆಪಿ ಹಾಗೂ ಸಂಘಪರಿವಾರ ನಡೆಸಿದ ಪ್ರತಿಭಟನೆಯ ವೇಳೆ ಬಿಜೆಪಿ ಸಂಸದೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಮಿಳುನಾಡಿನ ಜನರನ್ನು ಅವಹೇಳನಗೈದಿರುವುದಕ್ಕೆ ತಮಿಳುನಾಡಿನಲ್ಲಿ ಎಫ್‌ಐಆರ್ ದಾಖಲಾಗಿತ್ತು.

‘ತಮಿಳುನಾಡಿನ ಜನರು ಬೆಂಗಳೂರಿನ ಕೆಫೆಗಳಲ್ಲಿ ಬಾಂಬ್ ಇಡುತ್ತಿದ್ದಾರೆ’ ಎಂದು ಹೇಳಿಕೆ ನೀಡಿದ್ದ ಶೋಭಾ ಕರಂದ್ಲಾಜೆ ವಿರುದ್ಧ ಮಧುರೈನಲ್ಲಿ ತಮಿಳುನಾಡು ಪೊಲೀಸರು ಬುಧವಾರ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿತ್ತು.

ಶೋಭಾ ಕರಂದ್ಲಾಜೆ ಹೇಳಿದ್ದೇನು?

ಪ್ರತಿಭಟನೆಯ ವೇಳೆ ಶೋಭಾ ಕರಂದ್ಲಾಜೆ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಬೆಂಗಳೂರಿನ ರಾಮೇಶ್ವರಂ ಕೆಫೆ ಘಟನೆಯನ್ನು ಉಲ್ಲೇಖಿಸಿದ್ದರು. ಮಾತಿನ ವೇಳೆ, “ತಮಿಳುನಾಡಿನ ಜನರು ಅಲ್ಲಿ ತರಬೇತಿ ಪಡೆದು ಇಲ್ಲಿ ಬಂದು ಬಾಂಬ್‌ ಹಾಕುತ್ತಾರೆ. ಕೆಫೆಯಲ್ಲಿ ಬಾಂಬ್ ಇಟ್ಟಿದ್ದೂ ಕೂಡ ಅಲ್ಲಿಂದ ಬಂದವರು” ಎಂದು ಹೇಳಿಕೆ ನೀಡಿರುವುದು ಭಾರೀ ವಿವಾದಕ್ಕೆ ಕಾರಣವಾಗಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿದ್ದ ತಮಿಳುನಾಡು ಸಿಎಂ ಸ್ಟ್ಯಾಲಿನ್, “ಕೇಂದ್ರದ ಬಿಜೆಪಿ ಸಚಿವೆ ಶೋಭಾ ಕರಂದ್ಲಾಜೆ ನೀಡಿರುವ ಹೇಳಿಕೆಯನ್ನು ಬಲವಾಗಿ ಖಂಡಿಸುತ್ತೇನೆ. ಬೇಜವಾಬ್ದಾರಿತನದಿಂದ ಕೂಡಿದ ಹೇಳಿಕೆ ಇದು. ತಮಿಳರು ಮತ್ತು ಕನ್ನಡಿಗರ ನಡುವೆ ಒಡಕುಂಟು ಮಾಡಲು ಈ ಹೇಳಿಕೆ ನೀಡಿದ್ದಾರೆ. ಶಾಂತಿ, ಸೌಹಾರ್ದತೆ ಮತ್ತು ರಾಷ್ಟ್ರೀಯ ಐಕ್ಯತೆಗೆ ಧಕ್ಕೆ ಉಂಟು ಮಾಡಿರುವ ಶೋಭಾ ವಿರುದ್ಧ ಚುನಾವಣಾ ಆಯೋಗ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದರು. ಅಲ್ಲದೇ, ಡಿಎಂಕೆ ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗಕ್ಕೂ ದೂರು ನೀಡಿತ್ತು. ತನ್ನ ಹೇಳಿಕೆಯು ಭಾರೀ ವಿವಾದಕ್ಕೆ ಕಾರಣವಾಗುತ್ತಿದ್ದಂತೆಯೇ, ಶೋಭಾ ಕರಂದ್ಲಾಜೆ ತಮಿಳುನಾಡಿನ ಜನರ ಕ್ಷಮೆಯಾಚಿಸಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X