ಯುವಕನಿಗೆ ಲೈಂಗಿಕ ದೌರ್ಜನ್ಯ ಪ್ರಕರಣ | ಎಂಟು ದಿನ ಸಿಐಡಿ ಕಸ್ಟಡಿಗೆ ಸೂರಜ್ ರೇವಣ್ಣ

Date:

ಯುವಕನೋರ್ವನಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಶಾಸಕ ಎಚ್ ಡಿ ರೇವಣ್ಣ ಅವರ ಹಿರಿಯ ಪುತ್ರ, ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ನ್ಯಾಯಾಲಯವು ಎಂಟು ದಿನ ಸಿಐಡಿ ಕಸ್ಟಡಿಗೆ ನೀಡಿದೆ.

- Advertisement -

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಸರ್ಕಾರ ಭಾನುವಾರ ಸಿಐಡಿಗೆ ವಹಿಸಿ ಆದೇಶಿಸಿತ್ತು. ಆದರೆ ಅಧಿಕೃತವಾಗಿ ಸಿಐಡಿಗೆ ವರ್ಗಾವಣೆ ಆಗಿರಲಿಲ್ಲ. ಈ ನಡುವೆ ಭಾನುವಾರ 42ನೇ ಎಸಿಎಂಎಂ ಕೋರ್ಟ್‌ ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಇಂದು ಸೂರಜ್‌ ರೇವಣ್ಣ ಅವರನ್ನು ಪೊಲೀಸರು ಕೋರ್ಟ್‌ಗೆ ಹಾಜರುಪಡಿಸಿದರು. ವಿಚಾರಣೆ ವೇಳೆ ಸರ್ಕಾರಿ ವಕೀಲರು 14 ದಿನ ಪೊಲೀಸ್‌ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು. ಆದರೆ ನ್ಯಾಯಾಧೀಶರು 8 ದಿನ ಪೊಲೀಸ್‌ ಕಸ್ಟಡಿಗೆ ನೀಡಿದರು. ಜುಲೈ 1ರ ಸಂಜೆ 4 ಗಂಟೆಗೆ ಸೂರಜ್‌ ರೇವಣ್ಣ ಅವರನ್ನು ಮತ್ತೆ ನ್ಯಾಯಾಲಯದ ಎದುರು ಹಾಜರುಪಡಿಸುವಂತೆ ನ್ಯಾಯಾಧೀಶರು ಸಿಐಡಿ ಪೊಲೀಸರಿಗೆ ಸೂಚಿಸಿದ್ದಾರೆ.

ಸಂತ್ರಸ್ತನ ವಿರುದ್ದ ನೀಡಿದ್ದ ದೂರಿಗೆ ಸಾಕ್ಷಿ ನೀಡಲು ಸೂರಜ್ ರೇವಣ್ಣ ಶನಿವಾರ ಸಂಜೆ ಹಾಸನದ ಸೆನ್ ಠಾಣೆಗೆ ತೆರಳಿದ್ದರು. ಈ ವೇಳೆ ಸೂರಜ್ ರೇವಣ್ಣರನ್ನು ವಶಕ್ಕೆ ಪಡೆದ ಹಾಸನ ಪೊಲೀಸರು ಮುಂಜಾನೆಯವರೆಗೂ ಸುದೀರ್ಘ ವಿಚಾರಣೆಗೆ ಒಳಪಡಿಸಿದರು. ಭಾನುವಾರ ಬೆಳಗ್ಗೆ ಸೂರಜ್‌ರನ್ನು ಅಧಿಕೃತವಾಗಿ ಬಂಧಿಸಿದರು.

ಇದನ್ನು ಓದಿದ್ದೀರಾ? ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣ | ಜುಲೈ 8ರವರೆಗೆ ಪ್ರಜ್ವಲ್ ರೇವಣ್ಣನಿಗೆ ನ್ಯಾಯಾಂಗ ಬಂಧನ

ಲೈಂಗಿಕ ದೌರ್ಜನ್ಯಕ್ಕೆ ಒಳಪಟ್ಟಿದ್ದಾರೆ ಎನ್ನಲಾದ ಸಂತ್ರಸ್ತನಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ಭಾನುವಾರ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ.

ಏನಿದು ಪ್ರಕರಣ?

27 ವರ್ಷದ ಚೇತನ್ ಕೆಎಸ್ ಎಂಬುವವರು ಸೂರಜ್ ರೇವಣ್ಣ ವಿರುದ್ಧ ದೂರು ನೀಡಿದ್ದಾರೆ. ಸೂರಜ್ ರೇವಣ್ಣ ಅವರು ಜೂನ್ 16 ರಂದು ಹೊಳೆನರಸೀಪುರ ತಾಲೂಕಿನ ಘನ್ನಿಕಡದಲ್ಲಿರುವ ತಮ್ಮ ಫಾರ್ಮ್‌ಹೌಸ್‌ನಲ್ಲಿ ತನ್ನ ಮೇಲೆ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ತನಗೆ ಬೆದರಿಕೆ ಹಾಕಿದ್ದಾರೆ. ಅವರು ಕರೆದಾಗಲೆಲ್ಲ ತಮ್ಮ ಫಾರ್ಮ್‌ಹೌಸ್‌ಗೆ ಬರುವಂತೆ ಹೇಳಿದ್ದಾರೆ ಎಂದು ಚೇತನ್ ಆರೋಪಿಸಿದ್ದಾರೆ.

ಸೂರಜ್ ರೇವಣ್ಣನ ಆಪ್ತರೊಬ್ಬರು ಈ ವಿಷಯವನ್ನು ಸಾರ್ವಜನಿಕವಾಗಿ ಬಹಿರಂಗಪಡಿಸದಂತೆ ಬೆದರಿಕೆ ಹಾಕಿದರು, ಕೆಲಸ ಮತ್ತು ಬಾಯಿ ಮುಚ್ಚಿಕೊಂಡಿರಲು 2 ಕೋಟಿ ರೂಪಾಯಿ ನೀಡುವುದಾಗಿಯೂ ಹೇಳಿದ್ದಾರೆ ದೂರು ನೀಡಿದ್ದಾರೆ. ಈ ನಡುವೆ ದೂರುದಾರ ಚೇತನ್ ಕೆಎಸ್ ವಿರುದ್ಧ ಸುಲಿಗೆ ಯತ್ನದ ಆರೋಪದಲ್ಲಿ ಪ್ರತಿದೂರು ದಾಖಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

TMC ತೊರೆದಿದ್ದ ಯೂಸುಫ್ ಪಠಾಣ್‌ಗೆ ಗುಜರಾತ್ BJP ಸರ್ಕಾರದಿಂದ ಭಾರೀ ಮೌಲ್ಯದ ಭೂಮಿ ಉಡುಗೊರೆ!

ಮಾಜಿ ಕ್ರಿಕೆಟಿಗ, ಪಶ್ಚಿಮ ಬಂಗಾಳದ ಬಹರಾಂಪುರ ಲೋಕಸಭಾ ಕ್ಷೇತ್ರದ ಸಂಸದ ಯೂಸುಫ್...

ಮೋದಿ ಭಾರತ ಕಂಡ ಅತ್ಯಂತ ದೊಡ್ಡ ಹೇಡಿ, ಪ್ರಧಾನಿಯಾಗಿರುವುದು ದುರದೃಷ್ಟಕರ: ಅಭಿಜೀತ್ ದೀಪ್ಕೆ ವಾಗ್ದಾಳಿ

ದೆಹಲಿಯ ಜಂತರ್ ಮಂತರ್‌ನಲ್ಲಿ ರಾಷ್ಟ್ರಧ್ವಜ ಹಾರಿಸಲು ಯತ್ನಿಸಿದ ಯುವ ಹೋರಾಟಗಾರರಾದ ಸೌರವ್...