ಮುಂಗಾರು ವಿಫಲವಾಗಿದೆ. ನೀರಿನ ಸಮಸ್ಯೆಯಿದೆ. ಬೆಂಗಳೂರಿಗೇ ಕುಡಿಯಲು ನೀರಿಲ್ಲ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬಿಡಲು ಹೇಗೆ ಸಾಧ್ಯ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಪ್ರಶ್ನಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, “ಶುಕ್ರವಾರ ಸುಪ್ರೀಂ ಕೋರ್ಟ್‌ನಲ್ಲಿ ಕಾವೇರಿ ನೀರಿನ ಹಂಚಿಕೆ ಬಗ್ಗೆ ವಿಚಾರಣೆ ನಡೆಯಲಿದೆ. ನೀರಿಲ್ಲದೆ ಇದ್ದರೂ ಕೋರ್ಟ್‌ನಲ್ಲಿ ದಾವೆ ಹೂಡುತ್ತಾರೆ. ಜಲಾಶಯದಲ್ಲಿಯೇ ನೀರು ಕಡಿಮೆ ಇರುವಾಗ, ತಮಿಳುನಾಡಿಗೆ ಹೇಗೆ ನೀರು ಬಿಡೋದು” ಎಂದರು.
“ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಐದು ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಲು ಸೂಚಿಸಿದೆ. ಅಷ್ಟೊಂದು ಪ್ರಮಾಣದ ನೀರು ಹರಿಸಲು ಸಾಧ್ಯವಿಲ್ಲವೆಂದು ಹೇಳಿದ್ದೇವೆ. ಹರಿಸಲೇಬೇಕು ಎಂದರೆ ಸರ್ವಪಕ್ಷಗಳ ನಿಯೋಗ ಕರೆದುಕೋಂಡು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡುತ್ತೇವೆ” ಎಂದು ಹೇಳಿದರು.