ಬೆಂಗಳೂರು ಸಿಲಿಕಾನ್‌ ವ್ಯಾಲಿ ಅಲ್ಲ, ಗುಂಡಿಗಳ ವ್ಯಾಲಿ ಆಗಿದೆ: ಪ್ರತಿಪಕ್ಷ ನಾಯಕ ಆರ್‌ ಅಶೋಕ

Date:

ಬೆಂಗಳೂರು ಸಿಲಿಕಾನ್‌ ವ್ಯಾಲಿ ಅಲ್ಲ, ಗುಂಡಿಗಳ ವ್ಯಾಲಿ ಆಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಹೇಳಿದರು.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸಿಎಂ ಡಿ ಕೆ ಶಿವಕುಮಾರ್‌ 6 ಪ್ರೆಸ್‌ಮೀಟ್‌ ಮಾಡಿ ರಸ್ತೆ ಗುಂಡಿ ಮುಚ್ಚುತ್ತೇವೆ ಎಂದಿದ್ದಾರೆ. ಹಣ ಇಲ್ಲದೆ ಗುಂಡಿ ಮುಚ್ಚಿ ಎಂದರೆ ಯಾರೂ ಮುಚ್ಚುವುದಿಲ್ಲ. ಹಿಂದಿನ ಬಿಜೆಪಿ ಸರ್ಕಾರ 8,000 ಕೋಟಿ ರೂ. ಬಿಬಿಎಂಪಿಗೆ ನೀಡಿತ್ತು. ಬಿಡಿಎಯಿಂದ ವಿಶೇಷವಾಗಿ 6,000 ಕೋಟಿ ರೂ. ನೀಡಲಾಗಿತ್ತು. ಎರಡೂವರೆ ವರ್ಷದಲ್ಲಿ ಅನುದಾನ ಬಿಡುಗಡೆ ಮಾಡದೆ ರಸ್ತೆಗಳು ಗುಂಡಿ ಬಿದ್ದಿವೆ. ಅಷ್ಟೂ ಗುಂಡಿಗಳನ್ನು ನವೆಂಬರ್‌ ಒಳಗೆ ಮುಚ್ಚುತ್ತೇವೆ ಎನ್ನುತ್ತಿದ್ದಾರೆ. ಅಷ್ಟು ದೊಡ್ಡ ಕಾಮಗಾರಿಯನ್ನು ಇಷ್ಟು ಬೇಗ ಮಾಡಲು ಸಾಧ್ಯವೇ ಇಲ್ಲ. ಇದು ಸಿಲಿಕಾನ್‌ ವ್ಯಾಲಿ ಅಲ್ಲ, ಗುಂಡಿಗಳ ವ್ಯಾಲಿ ಆಗಿದೆ ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ರೇರಾ ಈಗ ಕಲೆಕ್ಷನ್‌ ಸೆಂಟರ್‌ ಆಗಿದೆ. ಒಂದು ಅಡುಗೆಮನೆಗೆ 15,000 ರೂ. ನಿಗದಿ ಮಾಡಲಾಗಿದೆ. ಅದಕ್ಕೆ ಹೇಳುವವರು ಕೇಳುವವರು ಯಾರೂ ಇಲ್ಲ. ನಿಯಮ ತಂದರೆ ಅದನ್ನು ವಸೂಲಿಗೆ ಬಳಸಿದ್ದಾರೆ ಎಂದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ರಸ್ತೆ ಗುಂಡಿ ಮುಚ್ಚುವುದು ಸಚಿವ ಡಿ.ಕೆ. ಶಿವಕುಮಾರ್ ಕೆಲಸವೇ?

ಚುನಾವಣಾ ಅಕ್ರಮಗಳ ಬಗ್ಗೆ ಮಲ್ಲಿಕಾರ್ಜುನ ಖರ್ಗೆಯವರು ಸಂಸತ್ತಿನಲ್ಲೇ ಈ ಬಗ್ಗೆ ಮಾತನಾಡಬೇಕಿತ್ತು. ದಾಖಲೆ ಇಲ್ಲವಾದಾಗ ಮಾಧ್ಯಮಗಳ ಮುಂದೆ ಆರೋಪ ಮಾಡುತ್ತಾರೆ. ಚುನಾವಣಾ ಆಯೋಗದ ಮುಂದೆ ಹೋಗಿ ದಾಖಲೆ ನೀಡಬೇಕಿತ್ತು. ಚುನಾವಣಾ ಆಯೋಗವನ್ನು ತಪ್ಪಿತಸ್ಥ ಸ್ಥಾನದಲ್ಲಿ ನಿಲ್ಲಿಸಲು ಈ ರೀತಿ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ ಮಾತ್ರ ಕಾಂಗ್ರೆಸ್‌ ಸರಿಯಾಗಿ ಉಳಿದಿದೆ. ತೆಲಂಗಾಣದಲ್ಲಿ ಮುಖ್ಯಮಂತ್ರಿಯೇ ಪಾಪರ್‌ ಆಗಿದ್ದೇವೆಂದು ಹೇಳಿದ್ದಾರೆ. ತಮಿಳುನಾಡಲ್ಲೂ ಸಮೀಕರಣ ಬದಲಾಗಿದೆ. ಇಂಡಿ ಕೂಟ ಮುಳುಗುತ್ತಿರುವ ಹಡಗಾಗಿದೆ ಎಂದರು.

ಮುಸ್ಲಿಮ್‌ ಸಮುದಾಯದವರು ಅಕ್ರಮ ಮಾಡುತ್ತಿದ್ದಾರೆ. ಬಾಂಗ್ಲಾ ದೇಶದವರು ಇಲ್ಲಿಗೆ ಬಂದು ಮತದಾನ ಮಾಡುತ್ತಾರೆ. ಅಂಥವರಿಗೆ ವೋಟರ್‌ ಐಡಿ ನೀಡುವುದು ಯಾರು? ದೇಶದ ಭದ್ರತೆಯ ದೃಷ್ಟಿಯಿಂದ ಅಂಥವರನ್ನು ವಾಪಸ್‌ ಕಳಿಸಬೇಕು. ಆದರೆ ಕಾಂಗ್ರೆಸ್‌ ದೇಶದ ಭದ್ರತೆಗಿಂತ ಹೆಚ್ಚಾಗಿ ಮತಬ್ಯಾಂಕ್‌ ಮುಖ್ಯ. ಪಾಕಿಸ್ತಾನ, ಬಾಂಗ್ಲಾದವರು ಆ ದೇಶದಲ್ಲೂ ಮತ ಹಾಕಿ, ಇಲ್ಲೂ ಬಂದು ಮತ ಚಲಾಯಿಸುತ್ತಾರೆ. ಒಬ್ಬರಿಗೆ ಒಂದೇ ಓಟು ಎಂಬ ಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಜಾರಿ ಮಾಡುತ್ತಿದ್ದಾರೆ ಎಂದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...