ಮಳೆಗೆ ತತ್ತರಿಸಿದ ಬೆಂಗಳೂರು | ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್‌ ಜಂಟಿಯಾಗಿ ಸಿಟಿ ರೌಂಡ್ಸ್

Date:

Advertisements

ಬೆಂಗಳೂರಲ್ಲಿ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಜನಜೀವ ಅಸ್ತವ್ಯಸ್ತವಾಗಿದ್ದು, ಈವರೆಗೂ ನಾಲ್ಕು ಜನ ಮೃತಪಟ್ಟಿದ್ದಾರೆ. ಧಾರಾಕಾರ ಮಳೆಗೆ ಸಿಲಿಕಾನ್ ಸಿಟಿ ಜಲಾವೃತಗೊಂಡಿದ್ದು, ಜನ ಜೀವನವೇ ಮೂರಾಬಟ್ಟೆಯಾಗಿದೆ.

ಜನ ಊಟ ನೀರು ನಿದ್ದೆ ಬಿಟ್ಟು ಕುಳಿತುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ. ಎಲ್ಲೇ ನೋಡಿದರೂ ಕೂಡ ನೀರೇ ನೀರು. ಕಣ್ಣು ಹಾಯಿಸಿದಲೆಲ್ಲಾ ಮಳೆ ನೀರು ಆವೃತಗೊಂಡಿದೆ. ಈ ಹಿನ್ನೆಲೆಯಲ್ಲಿ ಮಳೆ ಹಾನಿಗೊಳಗಾದ ಪ್ರದೇಶಗಳಿಗೆ ಇಂದು (ಮೇ 21) ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಸಚಿವರು, ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

ಮುಖ್ಯಮಂತ್ರಿಗಳಿಂದ ಸಿಟಿ ರೌಂಡ್ಸ್

Advertisements

ಯಲಹಂಕದಲ್ಲಿ ರಾಜ ಕಾಲುವೆ ಒತ್ತುವರಿ ಸ್ಥಳ ಪರಿಶೀಲಿಸಿದ ಮುಖ್ಯಮಂತ್ರಿಗಳು ಮುಲಾಜಿಲ್ಲದೆ ಒತ್ತುವರಿ ತೆರವುಗೊಳಿಸುವಂತೆ ಸೂಚಿಸಿದರು. ಮಾನ್ಯತಾ ಟೆಕ್, ಇಬ್ಸು, ಮ್ಯಾನ್ ಫೋ ಹಾಗೂ ಕಾರ್ಲೆ ಖಾಸಗಿ ಬಿಲ್ಡರ್ ಗಳು ರಾಜಕಾಲುವೆ ಒತ್ತುವರಿ ಮಾಡಿರುವುದನ್ನು ಅಧಿಕಾರಿಗಳು ವಿವರಿಸಿದರು. ಈ ವೇಳೆ ನೋಟಿಸ್ ಕೊಟ್ಟಿಲ್ಲವೇ, ಒತ್ತುವರಿ ಆಗಿರುವುದನ್ನು ನೋಡಿಕೊಂಡು‌ ಕುಳಿತಿದ್ದೀರಾ ಎಂದು ಸಿಎಂ ಖಾರವಾಗಿ ಪ್ರಶ್ನಿಸಿದರು. ಬಳಿಕ ಎಷ್ಟೇ ದೊಡ್ಡ ಬಿಲ್ಡರ್ ಆಗಿದ್ದರೂ ಮುಲಾಜು ನೋಡಬೇಡಿ, ರಾಜಕಾಲುವೆ ಒತ್ತುವರಿ ತೆರವುಗೊಳಿಸಿ ಎಂದು ಸೂಚನೆ ನೀಡಿದರು.

ಸಿಟಿ ರೌಂಡ್ಸ್ 1

HBR ಲೇಔಟ್, ತುಂಬಿ ಹರಿಯುತ್ತಿರುವ ರಾಜಕಾಲುವೆ

ರಾಜಕಾಲುವೆಯ ಹರಿವಿನ ಹಾದಿಯಲ್ಲಿ ರೈಲ್ವೇ ಟ್ರಾಕ್ ಇರುವ ಕಡೆ ಆಗಿರುವ ಬಾಟಲ್ ನೆಕ್ ಸರಿ ಪಡಿಸಲು, ವಿಸ್ತರಿಸಲು ಸೂಚನೆ ನೀಡಿದರು. ಬಾದಿತ ಪ್ರದೇಶಗಳಲ್ಲಿ Basement ಪಾರ್ಕಿಂಗ್, ಕೆಳ ಹಂತದಲ್ಲಿ ಮನೆ ನಿರ್ಮಾಣಕ್ಕೆ ಅವಕಾಶ ನೀಡದಂತೆ town planning ನಲ್ಲಿ ಬದಲಾವಣೆ ತರುವ ದಿಕ್ಕಿನಲ್ಲಿ ಸೂಚನೆ ನೀಡಿದರು.

ವಡ್ಡರಪಾಳ್ಯ ಲೇಔಟ್, ಗೆದ್ದಲಹಳ್ಳಿಯಲ್ಲಿ ಪರಿಶೀಲನೆ

ರಾಜಕಾಲುವೆ ವಿಸ್ತೀರ್ಣ 29 ಮೀಟರ್. ಆದರೆ ಗೆದ್ದಲಹಳ್ಳಿಯ ಕಾಲುವೆ ಬಾಟಲ್ ನೆಕ್ ಇದ್ದು ಕೇವಲ 8 ಮೀಟರ್ ಇದೆ. ಆದ್ದರಿಂದ ಮೇಲಿನಿಂದ ರಾಜಕಾಲುವೆಯಲ್ಲಿ ಹರಿದು ಬರುವ ನೀರು ಈ ಬಾಟಲ್ ನೆಕ್ ನಲ್ಲಿ over flow ಆಗಿ ಸಾಯಿ ಲೇಔಟ್ ಗೆ ನುಗ್ಗುತ್ತದೆ ಎನ್ನುವುದು ಸಮಸ್ಯೆ. ಆದ್ದರಿಂದ 8 ಮೀಟರ್ ಬಾಟಲ್ ನೆಕ್ ಇರುವ ರೈಲ್ವೇ ವೆಂಟ್ ಅನ್ನು ವಿಸ್ತರಿಸಲು ಸೂಚನೆ ನೀಡಲಾಯಿತು. ಮಂಗಳವಾರ ರೈಲ್ವೇಯವರು ಈ ವೆಂಟ್ ವಿಸ್ತರಣೆಗೆ BDA ಗೆ ಅನುಮತಿ ನೀಡಿದ್ದಾರೆ. ಜೊತೆಗೆ ಕಾಲುವೆ ನಿರ್ವಹಣೆ ಮಾಡದ ಗುತ್ತಿಗೆದಾರರಿಂದ ವಿವರಣೆ ಕೇಳುವಂತೆ ಸೂಚಿಸಲಾಯಿತು.

ಸಿಟಿ ರೌಂಡ್ಸ್ 2

ಸಾಯಿ ಲೇಔಟ್

ಮಳೆ ಮತ್ತು ಪ್ರವಾಹ ಪೀಡಿತ ಸ್ಥಳ ವೀಕ್ಷಿಸಿದ ಮುಖ್ಯಮಂತ್ರಿಗಳು, “ಸಾಯಿ ಲೇಔಟ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ” ಪದಾಧಿಕಾರಿಗಳು ಮತ್ತು ಸದಸ್ಯರಿಂಸ ಸಮಸ್ಯೆ ಆಲಿಸಿ, ಮನವಿ ಸ್ವೀಕರಿಸಿದರು. ಬಳಿಕ‌ ಮನವಿಯಲ್ಲಿರುವ ಸಮಸ್ಯೆಗಳ ಬಗ್ಗೆ ಗಂಭೀರ ಗಮನ ಹರಿಸಿ ತಕ್ಷಣಕ್ಕೆ ಸಾಧ್ಯವಿರುವ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.

ಪಣತ್ತೂರ್ ರೈಲ್ವೇ ಬ್ರಿಡ್ಜ್

ಮಹದೇವಪುರ ವಿಧಾನಸಭಾ ಕ್ಷೇತ್ರದ ಪಣತ್ತೂರ್ ರೈಲ್ವೇ ಬ್ರಿಡ್ಜ್ ನಲ್ಲಿ ಸಾರ್ವಜನಿಕರ ಮತ್ತು ಸ್ಥಳೀಯ ನಿವಾಸಿಗಳ ಜೊತೆ ಮುಖ್ಯಮಂತ್ರಿಗಳು ಚರ್ಚೆ ನಡೆಸಿದರು. ಸಮಸ್ಯೆ ಬಗ್ಗೆ ಅಧಿಕಾರಿಗಳ ಜೊತೆ ಸಮಗ್ರ ಚರ್ಚೆ ನಡೆಸಿದ ಮುಖ್ಯಮಂತ್ರಿಗಳು, 350 ಮೀಟರ್ ಉದ್ದದ ಒಳಚರಂಡಿಯನ್ನು ನಿರ್ಮಿಸಿ ರಾಜಕಾಲುವೆಗೆ ಸಂಪರ್ಕ ಕೊಡಬೇಕು, ರೈಲ್ವೇ ಇಲಾಖೆ 3 ತಿಂಗಳ ಒಳಗೆ ಕಾಮಗಾರಿ ಮುಗಿಸುವ ರೀತಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X